IAS/ KAS Free Couching: ಫ್ರೀ IAS/KAS ತರಬೇತಿ ಆರಂಭ! ಬಡ ವಿದ್ಯಾರ್ಥಿಗಳಿಗೆ ದೊಡ್ಡ ಅವಕಾಶ!

IAS/ KAS Free Couching:

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಐಎಎಸ್ ಹಾಗೂ ಕೆಎಎಸ್ ಕೋಚಿಂಗ್ (IAS/ KAS Free Couching) ಪಡೆದು ಸರ್ಕಾರಿ ಉದ್ಯೋಗ ಪಡೆಯುವ ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಯಾವುದೇ ವಿದ್ಯಾರ್ಥಿ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕಾದರೂ ಕೂಡ ಅವರು ಓದುವ ಆಸಕ್ತಿ ಹೊಂದಿರಬೇಕು ಜೊತೆಗೆ ಮುಖ್ಯವಾಗಿ ಅವರಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳಿರಬೇಕು. ಎರಡು ಅಂಶಗಳಲ್ಲಿ ಒಂದರ ಕೊರತೆಯಾದರು ಕೂಡ ವಿದ್ಯಾರ್ಥಿಗಳು ತಮ್ಮ ಸರ್ಕಾರಿ ಉದ್ಯೋಗದ ಕನಸ್ಸನ್ನು ನನಸ್ಸು ಮಾಡಿಕೊಳ್ಳಲು ವಿಫಲರಾಗುತ್ತಾರೆ.

ಇಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣ ಹಾಗೂ ಉತ್ತಮ ಗುಮಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸಾಕಷ್ಟು ಉಚಿತ ತರಬೇತಿ ಸೌಲಭ್ಯಗಳನ್ನು ಜಾರಿಗೊಳಿಸಲಾಗಿದೆ. ಅದೇ ರೀತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೆಎಎಸ್ ಹಾಗೂ ಐಎಎಸ್ ಕೋಚಿಂಗ್ ನೀಡಲು ಸಂಕಲ್ಪ ಎನ್ನುವ ವಿಶೇಷ ಶೈಕ್ಷಣಿಕ ಯೋಜನೆಯನ್ನು ಜಾರಿಗೊಳಿಸಿದೆ.

ಸಂಕಲ್ಪ ಯೋಜನೆಯಡಿಯಲ್ಲಿ ನೀವು ಕೂಡ ಉಚಿತ ಕೆಎಎಸ್ ಹಾಗೂ ಐಎಎಸ್ ತರಬೇತಿಯನ್ನು ಪಡೆಯಬೇಕೆಂದಿದ್ದೀರಾ? ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಈ ಒಂದು ಲೇಖನದ ಮೂಲಕ ಯಾರು ಅರ್ಜಿ ಸಲ್ಲಿಸಬಹುದು? ಯಾವ ಸಂಸ್ಥೆ ತರಬೇತಿ ನೀಡುತ್ತದೆ? ಅರ್ಹ ಅಭ್ಯರ್ಥಿಗಳು ಯಾರು? ಸಂಕಲ್ಪ ಯೋಜನೆಯ ಉದ್ದೇಶವೇನು? ಎನ್ನುವುದನ್ನು ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹೊಸ ಹೊಸ ಅಪಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕ ಕ್ಕೆ ಭೇಟಿ ನೀಡಿ.

IAS/ KAS Free Couching

ಸಂಕಲ್ಪ ಯೋಜನೆಯ ಕಿರು ವಿಮರ್ಶೆ:

ಯೋಜನೆಯ ಹೆಸರು: ಸಂಕಲ್ಪ ಯೋಜನೆ

ಅರ್ಹ ಫಲಾನುಭವಿಗಳು: ಫ್ರೀ ಕೆಎಎಸ್ ಹಾಗೂ ಐಎಎಸ್ ಕೋಚಿಂಗ್ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು

ಉಚಿತ ತರಬೇತಿ ಪಡೆಯುವ ಸ್ಥಳ: ದಾವಣಗೆರೆ

ತರಬೇತಿ ನೀಡುವ ಸಂಸ್ಥೆ: ಐಎಎಸ್ ಬಾಬಾ ಸಂಸ್ಥೆ

“ಸಂಕಲ್ಪ” ಐಎಎಸ್ ಹಾಗೂ ಕೆಎಎಸ್ ಉಚಿತ ತರಬೇತಿಯ ಕುರಿತು:

ಸಂಕಲ್ಪ ಎನ್ನುವುದು ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಎಸ್,ಎಸ್, ಕೇರ್ ಟರ್ಸ್ಟ್ ಸಹಭಾಗಿತ್ವದೊಂದಿಗೆ ನಡೆಯುವ ಉಚಿತ ತರಬೇತಿ ಕಾರ್ಯಕ್ರಮವಾಗಿದೆ. ಸಂಕಲ್ಪ ಎನ್ನುವ ಈ ಉಚಿತ ತರಬೇತಿ ಕಾರ್ಯಕ್ರಮದ ಅಡಿಯಲ್ಲಿ ದಾವಣಗೆರೆ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಐಎಎಸ್ ಹಾಗೂ ಕೆಎಎಸ್ ತರಬೇತಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಐಎಎಸ್ ಬಾಬಾ ಸಂಸ್ಥೆಯಡಿಯಲ್ಲಿ ವಿದ್ಯಾರ್ಥಿಗಳು ಐಎಎಸ್ ಹಾಗೂ ಕೆಎಎಸ್ ಉಚಿತ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ಸಂಕಲ್ಪ ಕಾರ್ಯಕ್ರಮವು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶವನ್ನು ಹೊಂದಿದೆ.

ಉಚಿತ ಐಎಎಸ್ ಹಾಗೂ ಕೆಎಎಸ್ ತರಬೇತಿಯನ್ನು ನೀಡುವುದರ ಹಿಂದಿನ ಉದ್ದೇಶ:

  • ದುಬಾರಿ ವೆಚ್ಚದ ಕೆಎಎಸ್ ಹಾಗೂ ಐಎಎಸ್ ತರಬೇತಿಯನ್ನು ಪಡೆಯಲು ಸಾಧ್ಯವಿಲ್ಲದ ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿಯನ್ನು ನೀಡುವುದಾಗಿದೆ.
  • ಉತ್ತಮ ಗುಣಮಟ್ಟದ ಐಎಎಸ್ ಹಾಗೂ ಕೆಎಎಸ್ ತರಬೇತಿ ಪಡೆಯಲು ದೆಹಲಿ, ಬೆಂಗಳೂರಿನಂತಹ ನಗರಗಳಿಗೆ ಹೋಗಲು ಸಾಧ್ಯವಿಲ್ಲದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲೇ ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡುವುದಾಗಿದೆ.
  • ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಿ ಸರ್ಕಾರಿ ಉದ್ಯೋಗಗಳನ್ನು ಪಡೆದುಕೊಳ್ಳುವಂತೆ ಮಾಡುವುದು.
  • ಬಡ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯಿಂದ ಶಿಕ್ಷಣ ಪಡೆಯಲು ವಂಚಿತರಾಗುವುದನ್ನು ತಡೆಯಲು ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ ಸ್ಟಡಿ ಮೆಟಿರಿಯಲ್ ಗಳನ್ನು ಒದಗಿಸುವುದು.

ಉಚಿತ ಐಎಎಸ್ ಹಾಗೂ ಕೆಎಎಸ್ ತರಬೇತಿಯನ್ನು ಪಡೆಯಲು ಅರ್ಹರಾದ ವಿದ್ಯಾರ್ಥಿಗಳು ಯಾರು?

  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು. ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
  • ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
  • ದಾವಣಗೆರೆ ಜಿಲ್ಲೆಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ಐಎಎಸ್ ಹಾಗೂ ಕೆಎಎಸ್ ಕೋಚಿಂಗ್ ಪಡೆಯಲು ಮೊದಲ ಆದ್ಯತೆ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ ಅಕ್ಕ-ಪಕ್ಕದ ಜಿಲ್ಲೆಗಳು ವಿದ್ಯಾರ್ಥಿಗಳು ಉಚಿತ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ.
  • ಅಭ್ಯರ್ಥಿಗಳು ಸಾಮಾನ್ಯವಾಗಿ ಕನಿಷ್ಠ 21 ರಿಂದ 38 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಸಂಕಲ್ಪ ಸಂಸ್ಥೆಯು ನಡೆಸುವ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಉತ್ತೀರ್ಣರಾಗಿರಬೇಕು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಕಲ್ಪ ಸಂಸ್ಥೆಯಡಿಯಲ್ಲಿ ಸಿಗುವ ಪ್ರಯೋಜನಗಳು:

  • ಸಂಕಲ್ಪ ಐಎಎಸ್ ಹಾಗೂ ಕೆಎಎಸ್ ಉಚಿತ ತರಬೇತಿ ಕಾರ್ಯಕ್ರಮದಡಿಯಲ್ಲಿ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗೆ ತರಬೇತಿಯನ್ನು ಯಾವುದೇ ಖರ್ಚಿಲ್ಲದೆ ಉಚಿತವಾಗಿ ಪಡೆದುಕೊಳ್ಳಬಹುದು.
  • ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗಳಿಗೆ ಹೇಗೆ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಅನುಭವಿ ಶಿಕ್ಷಕರೊಂದಿಗೆ ಹಾಗೂ ವಿಷಯ ತಜ್ಞರ ಬಳಿ ಮಾರ್ಗದರ್ಶನವನ್ನು ಪಡೆದುಕೊಳ್ಳಬಹುದು.
  • ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳು, ನೋಟ್ಸ್ ಗಳನ್ನು ಹಾಗೂ ದಿನಪತ್ರಿಕೆಗಳನ್ನು ಒಳಗೊಂಡ ಗ್ರಂಥಾಲಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
  • ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ನೈಜ ಪರೀಕ್ಷಾ ರೀತಿಯಲ್ಲಿ ಅಣುಕು ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುವ ಬಗ್ಗೆ ಇರುವ ಭಯವನ್ನು ಹೋಗಲಾಡಿಸುವುದು.
  • ಸಂಕಲ್ಪ ಐಎಎಸ್ ಹಾಗೂ ಕೆಎಎಸ್ ಉಚಿತ ತರಬೇತಿ ಕಾರ್ಯಕ್ರಮದಡಿಯಲ್ಲಿ ನೂರಾರು ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವ ತಯಾರಿ ನಡೆಸುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಹೆಚ್ಚುತ್ತದೆ ಹಾಗೂ ಓದಿನ ಮೇಲೆ ಹೆಚ್ಚಿನ ಆಸಕ್ತಿ ಇರುತ್ತದೆ.

ಉಚಿತ ತರಬೇತಿ ಪಡೆಯಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೇಗೆ?

ದಾವಣಗೆರೆ ಜಿಲ್ಲೆಯ ಐಎಎಸ್ ಹಾಗೂ ಕೆಎಎಸ್ ಉಚಿತ ತರಬೇತಿ ಕಾರ್ಯಕ್ರಮದಡಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಿರುವ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ ಮೂಲಕ ನೋಂದಣಿ ಪೂರ್ಣಗೊಳಿಸಿರಬೇಕು.

  • ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷೆ ನಡೆಸಲಾಗುವುದು.
  • ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಮೆರಿಟ್ ಪಟ್ಟಿ ತಯಾರಿಸಲಾಗುವುದು.
  • ಮೆರಿಟ್ ಪಟ್ಟಿಯ ಆಧಾರದ ಮೇಲೆ ಸುಮಾರು 300 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಾಗುವುದು.
  • ನಂತರ ಆಯ್ಕೆಗೊಂಡ 300 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡಲಾಗುವುದು.

ಪ್ರವೇಶ ಪರೀಕ್ಷೆಯು ಯಾವ ಮಾದರಿಯಲ್ಲಿ ಇರುತ್ತದೆ?

ದಾವಣಗೆರೆ ಜಿಲ್ಲೆಯ ಐಎಎಸ್ ಹಾಗೂ ಕೆಎಎಸ್ ಉಚಿತ ತರಬೇತಿ ಕಾರ್ಯಕ್ರಮದಡಿಯಲ್ಲಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಪಡೆಯಲು ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ. ಈ ಪ್ರವೇಶ ಪರೀಕ್ಷೆಯು ಯಾವ ಮಾದರಿಯಲ್ಲಿ ನಡೆಯುತ್ತದೆ ಎನ್ನುವುದನ್ನು ಈ ಕೆಳಗೆ ನೀಡಲಾಗಿದೆ.

  • 100 ಬಹುಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪ್ರತಿ ಒಂದು ಪ್ರಶ್ನೆಗೂ ತಲಾ ಎರಡು ಅಂಕಗಳು.
  • ಒಟ್ಟು 200 ಅಂಕಗಳ ಪ್ರಶ್ನೆ ಪತ್ರಿಕೆಯಾಗಿದೆ.
  • ಈ ಪರೀಕ್ಷೆಯನ್ನು ಬರೆಯಲು 2 ಗಂಟೆ ನಿಗದಿಪಡಿಸಲಾಗಿದೆ.

ವಿಜ್ಞಾನ ಹಾಗೂ ತಂತ್ರಜ್ಞಾನ, ಅರ್ಥಶಾಸ್ತ್ರ, ಇತಿಹಾಸ, ಭೂಗೋಳ, ಸಂವಿಧಾನ ಹಾಗೂ ರಾಜಕೀಯ, ಪ್ರಚಲಿತ ವಿದ್ಯಮಾನ ಮತ್ತು ಪರಿಸರ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ 80 ಪ್ರಶ್ನೆಗಳಿರುತ್ತದೆ ಹಾಗೂ ತಾರ್ಕಿಕ ಚಿಂತನೆ, ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳ ಗದ್ಯಗಳನ್ನು ಕುರಿತು ಅರ್ಥೈಹಿಸಿಕೊಳ್ಳುವುದು ಹಾಗೂ ಗಣಿತದ ಸಾಮರ್ಥ್ಯದ ಕುರಿತು ಒಟ್ಟು 20 ಪ್ರಶ್ನೆಗಳಿರುತ್ತದೆ.

ದಾಖಲೆಗಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಹೊಂದಿರಬೇಕಾದ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮಾರ್ಕ್ಸ್ ಕಾರ್ಡ್
  • ವಾಸಸ್ಥಳ ಪ್ರಮಾಣಪತ್ರ
  • ಪಾಸ್ಪೋರ್ಟ್ ಅಳತೆಯ ಫೋಟೋ

ಸಂಕಲ್ಪ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಅವಧಿ ಎಷ್ಟು?

  • ಸಂಕಲ್ಪ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮವು ಸಂಕಲ್ಪ ಉಚಿತ ತರಬೇತಿ ಕೇಂದ್ರ, ದೃಶ್ಯಕಲಾ ಮಹಾ ವಿದ್ಯಾಲಯದಲ್ಲಿ ನಡೆಯುತ್ತದೆ.
  • ಈ ಕಾರ್ಯಕ್ರಮದಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಕನಿಷ್ಠ 8 ರಿಂದ 9 ತಿಂಗಳುಗಳ ಕಾಲ ಉಚಿತ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ: “ಸಂಕಲ್ಪ ಉಚಿತ ತರಬೇತಿ ಕೇಂದ್ರ, ದೃಶ್ಯಕಲಾ ಮಹಾ ವಿದ್ಯಾಲಯ ಆವರಣ, ವಿದ್ಯಾ ನಗರ ದಾವಣಗೆರೆಗೆ ಭೇಟಿ ನೀಡಿ ಅಥವಾ ಸಹಾಯವಾಣಿ 72599 52520 ಗೆ ಕರೆ ಮಾಡಿ.”

ಕೊನೆಯದಾಗಿ:

ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಕಲ್ಪ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಐಎಎಸ್ ಹಾಗೂ ಕೆಎಎಸ್ ಗಳಂತಹ ಸ್ಪರ್ಧಾತ್ಮಕ ಪರೀಕ್ಷಗೆ ಪೂರ್ವ ಸಿದ್ದತೆಯನ್ನು ನಡೆಸಿಕೊಳ್ಳಲು ಅವಕಾಶವನ್ನು ಕಲ್ಪಿಸಿದ್ದು, ದೆಹಲಿ ಬೆಂಗಳೂರಿನಂತಹ ನಗರಗಳಿಗೆ ಹೋಗಿ ಕೋಚಿಂಗ್ ಪಡೆಯಲು ಸಾಧ್ಯವಿಲ್ಲದ ಅಭ್ಯರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ನಿಮ್ಮ ಕನಸ್ಸಿನ ಸರ್ಕಾರಿ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಿ.

ಪದೇ ಪದೇ ಕೇಳಲ್ಪಡುವ ಪ್ರಶ್ನೆಗಳು:

ಸಂಕಲ್ಪ ಎನ್ನುವುದು ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಎಸ್,ಎಸ್, ಕೇರ್ ಟರ್ಸ್ಟ್ ಸಹಭಾಗಿತ್ವದೊಂದಿಗೆ ನಡೆಯುವ ಉಚಿತ ತರಬೇತಿ ಕಾರ್ಯಕ್ರಮವಾಗಿದೆ.

ಇಲ್ಲಾ, ಈ ತರಬೇತಿ ಕೇಂದ್ರದಡಿಯಲ್ಲಿ ಉಚಿತ ತರಬೇತಿ ಪಡೆಯಲು ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಅಕ್ಕ-ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಸಂಕಲ್ಪ ಉಚಿತ ತರಬೇತಿ ಕೇಂದ್ರವು ಮೊದಲು ಪ್ರವೇಶ ಪರೀಕ್ಷೆ ಮಾಡಿ ಅದರಲ್ಲಿ ಹೆಚ್ಚಿನ ಅಂಕ ಗಳಿಸಿದ 300 ವಿದ್ಯಾರ್ಥಿಗಳನ್ನು ಉಚಿತ ತರಬೇತಿ ಪಡೆಯಲು ಅರ್ಹರು ಎಂದು ಪರಿಗಣಿಸಲಾಗಿದೆ.

ಪ್ರವೇಶ ಪರೀಕ್ಷೆಯು 100 ಬಹುಆಯ್ಕೆ ಪ್ರಶ್ನೆಗಳಿದ್ದು, ಪ್ರತಿ ಪ್ರಶ್ನೆಗೂ ತಲಾ ಎರೆಡು ಅಂಕಗಳನು ಒಳಗೊಂಡಿದೆ.

ವಿದ್ಯಾರ್ಥಿಗಳು ಐಎಎಸ್ ಬಾಬಾ ಸಂಸ್ಥೆಯಡಿಯಲ್ಲಿ ಉಚಿತ ತರಬೇತಿಯನ್ನು ಪಡೆದುಕೊಳ್ಳುತ್ತಾರೆ.


ಇತರೆ ಪ್ರಮುಖ ಲಿಂಕುಗಳು:

Leave a Reply

Your email address will not be published. Required fields are marked *