ನಮಸ್ಕಾರ ಸ್ನೇಹಿತರೆ, ನೀವೇನಾದರೂ 10 ಪಾಸ್ ಆಗಿ ಉದ್ಯೋಗ ಹುಡುಕೊಟ್ಟಿದ್ದೀರಾ? ಹಾಗಿದ್ದರೆ ನಿಮಗೊಂದು ಬಂಪರ್ ಗುಡ್ ನ್ಯೂಸ್! ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಘ ರಾಯಚೂರು 2026 ರ ನೇಮಕಾತಿಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಹಾಗೂ ಆರೋಗ್ಯ ನಿರೀಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಉದ್ಯೋಗಾಕಾಂಕ್ಷಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
DHFWS Recruitment in Kannada
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ನಿರೀಕ್ಷಕ ಹುದ್ದೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 11-03-2026 ರ ವರೆಗೂ ಅವಕಾಶ ಕಲ್ಪಿಸಿದ್ದು, ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ನಿರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ವೇತನ ಶ್ರೇಣಿ ಹಾಗೂ ಇನ್ನಿತರ ಮಾಹಿತಿಗಳನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕಕ್ಕೆ ಭೇಟಿ ನೀಡಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಘ ರಾಯಚೂರು (DHFWS) |
| ಹುದ್ದೆಯ ಹೆಸರು | ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ನಿರೀಕ್ಷಕ ಹುದ್ದೆಗಳು |
| ಹುದ್ದೆಯ ಸಂಖ್ಯೆ | 20 ಹುದ್ದೆಗಳು |
| ವೇತನ ಶ್ರೇಣಿ | ₹14,044 – ₹15,397 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ವಿವರ:
ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ಸಂಸ್ಥೆಯು ಒಟ್ಟು 20 ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ನಿರೀಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, SSLC ಅಲ್ಲಿ ಉತ್ತೀರ್ಣರಾದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಎಲ್ಲಾ ಅರ್ಹತೆಗಳನ್ನು ಹೊಂದಿದ್ದು ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ.
ಹುದ್ದೆಯ ವಿವರ:
ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು 2026 ರ ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾದ ಹುದ್ದೆಯ ವಿವರ ಈ ಕೆಳಗಿನಂತಿದೆ,
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳು | 19 ಹುದ್ದೆಗಳು |
| ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗಳು | 01 ಹುದ್ದೆಗಳು |
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತಾ ಮಾನದಂಡಗಳು:
- ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳು (DHFWS):
- ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು.
- ಕರ್ನಾಟಕ ನರ್ಸಿಂಗ್ ಕೌಂಸಿಲ್ ನಲ್ಲಿ ನೋಂದಣಿ ಆಗಿರಬೇಕು.
- ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಸಮುದಾಯ ಆರೋಗ್ಯ ಸಹಾಯಕಿ ತರಬೇತಿಯನ್ನು ಪಡೆದು ಪ್ರಮಾಣಪತ್ರವನ್ನು ಹೊಂದಿರಬೇಕು.
- ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗಳು (DHFWS):
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು.
- NSLC ಬೇಸ್ ಟೆಸ್ಟ್ ಗೆ ಅರ್ಹತೆ ಪಡೆದುಕೊಂಡಿರಬೇಕು.
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ತರಬೇತಿಯನ್ನು ಹೊಂದಿರಬೇಕು.
- ಅಥವಾ, KUCS ನಲ್ಲಿ ಅರ್ಹತೆಯನ್ನು ಹೊಂದಿದ್ದು, ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ 2 ವರ್ಷ ವೃತ್ತಿ ಅನುಭವವನ್ನು ಹೊಂದಿರಬೇಕು.
- ಅಥವಾ, KUCS ನಲ್ಲಿ ಅರ್ಹತೆಯನ್ನು ಹೊಂದಿದ್ದು, ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ 3 ವರ್ಷ ವೃತ್ತಿ ಅನುಭವವನ್ನು ಹೊಂದಿರಬೇಕು.
ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರ:
ಯಾವುದೇ ಹುದ್ದೆಗೂ ಅರ್ಜಿ ಸಲ್ಲಿಸಬೇಕಾದರೆ ಆ ಹುದ್ದೆಗೆ ಸಂಬಂಧಿಸಿದ ವಯೋಮಿತಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಅದೇ ರೀತಿಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗಿರುತ್ತದೆ.
ವಯೋಮಿತಿ ಸಡಿಲಿಕೆ ವಿವರ:
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗೆ ಸರ್ಕಾರದ ಮಾನದಂಡಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವರ್ಗಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಘ ರಾಯಚೂರು ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ.
ಅರ್ಜಿ ಶುಲ್ಕ:
ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗಾಗಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗಾಗಲಿ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಹುದ್ದೆಗೆ ಸಂಬಂಧಿಸಿದ ವೇತನ ಶ್ರೇಣಿ:
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಲಾದ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
- ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳು: ಮಾಸಿಕ ₹14,044 ರಿಂದ ₹15,397 ವೇತನವನ್ನು ನಿಗದಿಪಡಿಸಲಾಗಿದೆ.
- ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗಳು: ಮಾಸಿಕ ₹15,397 ವೇತನವನ್ನು ನಿಗದಿಪಡಿಸಲಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಈ ಕೆಳೆಗೆ ನೀಡಿರುವ ಅಗತ್ಯ ದಾಖಲೆಗಳನ್ನು ಹೊಂದಿರುವುದು ಅಗತ್ಯ. ಅವುಗಳೆಂದರೆ,
- SSLC ಅಂಕ ಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಫೋಟೋ
- ನೋಂದಣಿ ಪ್ರಮಾಣ ಪತ್ರ
- ವಯಸ್ಸಿನ ಪುರಾವೆ
- ತರಬೇತಿ ಪ್ರಮಾಣಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ:
ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
- ರೋಸ್ಟರ್ ಪದ್ಧತಿ:
ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಇಂತಿಷ್ಟು ಹುದ್ದೆಗಳೆಂದು ನಿಗದಿಪಡಿಸಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ನಂತರ ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಾರೆ.
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿಧಾನಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು DHFWS ಅಧಿಕೃತ ವೆಬ್ಸೈಟ್ https://raichur.nic.in/ ಗೆ ಭೇಟಿ ನೀಡಿ.
- ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಅನುಭವ ವಿವರಗಳನ್ನ ಭರ್ತಿ ಮಾಡಿ.
- ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಅರ್ಜಿದಾರರು ನಿಗದಿ ಪಡಿಸಿದ ಕೊನೆಯ ದಿನಾಂಕದ ಮೊದಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
ಅಭ್ಯರ್ಥಿಗಳು ಕೆಳಗೆ ಕೊಡಲಾದ ಪ್ರಮುಖ ದಿನಾಂಕಗಳ ವಿವರಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯನ್ನು ಸಲ್ಲಿಸಿ
| ವಿವರಗಳು | ದಿನಾಂಕ |
| ಅಧಿಸೂಚನೆ ಪ್ರಕಟವಾದ ಮುಖ್ಯ ದಿನಾಂಕ | 23-02-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 25-02-2026 |
| ಅರ್ಜಿ ಸಲ್ಲಿಸಲು ಮುಖ್ಯ ಕೊನೆಯ ದಿನಾಂಕ | 11-03-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ಒಟ್ಟು 20 ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ನಿರೀಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೇ? ಎಂದು ಖಚಿತ ಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ನೀವೇನಾದರೂ ಸರ್ಕಾರಿ ಉದ್ಯೋಗದ ಕನಸ್ಸು ಕಾಣುತ್ತಿದ್ದರೆ, ಇದೊಂದು ಸುವರ್ಣಾವಕಾಶ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗಿರುತ್ತದೆ.
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗೆ ಮಾಸಿಕ ₹14,044 ರಿಂದ ₹15,397 ವೇತನವನ್ನು ನಿಗದಿಪಡಿಸಲಾಗಿದೆ.
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-02-2026
ಇಲ್ಲ, ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಇತರೆ ಪ್ರಮುಖ ಲಿಂಕುಗಳು:
- SSLC/PUC ಆದ್ರೆ ಸಾಕು! ಅಂಗನವಾಡಿಯಲ್ಲಿ ಸರ್ಕಾರಿ ಉದ್ಯೋಗಾವಕಾಶ ಒಟ್ಟು 412 ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!
- IIMB: ಐಐಎಂಬಿ ಬೆಂಗಳೂರು ಸಂಸ್ಥೆಯಲ್ಲಿ ಭರ್ಜರಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ

