Fireman: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ! ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯಲ್ಲಿ ಒಟ್ಟು 1600 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮೊನ್ನೆ ಅಂದರೆ 24-02-2026 ನಡೆದ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.
Fireman Recruitment in Kannada
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್. ಎ ಮುಂಡ್ಕರ್ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಈ ವಿಷಯವನ್ನು ಹೊಂಚಿಕೊಂಡಿದ್ದು, ರಾಜ್ಯದ 15 ತಾಲೂಕುಗಳಲ್ಲಿ ಹೊಸ ಅಗ್ನಿಶಾಮಕ ಠಾಣೆಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ.
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿರುವಂತೆ ಒಟ್ಟು 1600 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ (Fireman), ಅಗ್ನಿಶಾಮಕ ಇಂಜಿನ್ ಪಾಲಕ ಹಾಗೂ ಇನ್ನಿತರ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವವರು ಅಭ್ಯರ್ಥಿಗಳು ಇಂದಿನಿಂದಲೇ ಸಿದ್ದತೆಯನ್ನು ಮಾಡಿಕೊಳ್ಳುವುದು ಸೂಕ್ತವಾಗಿದೆ.
ಸಾಮಾನ್ಯವಾಗಿ ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯ ನೇಮಕಾತಿಯಲ್ಲಿ ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿಸಿಕೊಡಲಾಗಿದೆ. ಈ ಎಲ್ಲಾ ಮಾಹಿತಿಯನ್ನು ಓದಿಕೊಳ್ಳಿ. ಇನ್ನಷ್ಟು ಹೊಸ ಹೊಸ ಉದ್ಯೋಗ ಸಿದ್ದಿಗಾಗಿ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕ ಕ್ಕೆ ಭೇಟಿ ನೀಡಿ.

ಹುದ್ದೆಯ ಅವಲೋಕನ:
| ನೇಮಕಾತಿ ಇಲಾಖೆ | ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆ |
| ಹುದ್ದೆಯ ಹೆಸರು | ಅಗ್ನಿಶಾಮಕ ಸಿಬ್ಬಂದಿ (Fireman), ಅಗ್ನಿಶಾಮಕ ಇಂಜಿನ್ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳು |
| ಹುದ್ದೆಯ ಸಂಖ್ಯೆ | 1600 ಕ್ಕೂ ಹೆಚ್ಚು ಹುದ್ದೆಗಳು |
| ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ | ಶೀಘ್ರದಲ್ಲೇ ಪ್ರಾರಂಭವಾಗಲಿದೆ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ವಿವರ:
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿರುವಂತೆ ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯಲ್ಲಿ ಒಟ್ಟು 1600 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ (Fireman), ಅಗ್ನಿಶಾಮಕ ಇಂಜಿನ್ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಹೊರಡಿಸಲಿದ್ದು, SSLC ಅಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕನಿಷ್ಠ 18 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯ 2026 ರ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು ಈ ಕೆಳಗೆ ನೀಡಲಾದ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಅಂದಾಜಿಸಲಾಗಿದೆ.
- ಅಗ್ನಿಶಾಮಕ ಸಿಬ್ಬಂದಿ (Fireman)
- ಅಗ್ನಿಶಾಮಕ ಇಂಜಿನ್ ಚಾಲಕ
- ಚಾಲಕ ತಂತ್ರಜ್ಞ
ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತಾ ಮಾನದಂಡಗಳು:
ಸಾಮಾನ್ಯವಾಗಿ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತಾ ಮಾನದಂಡಗಳನ್ನು ಈ ಕೆಳಗೆ ನೀಡಲಾಗಿದೆ. ಅವುಗಳೆಂದರೆ,
1. ಶೈಕ್ಷಣಿಕ ಅರ್ಹತೆ:
- ಅಗ್ನಿಶಾಮಕ ಸಿಬ್ಬಂದಿ (Fireman):
- ಅಗ್ನಿಶಾಮಕ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಇದಕ್ಕೆ ಸಮನಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಅಗ್ನಿಶಾಮಕ ಇಂಜಿನ್ ಚಾಲಕ ಹಾಗೂ ಚಾಲಕ ತಂತ್ರಜ್ಞ:
- ಅಗ್ನಿಶಾಮಕ ಇಂಜಿನ್ ಚಾಲಕ ಹಾಗೂ ಚಾಲಕ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಅದಕ್ಕೆ ಸಮಾನವಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಜೊತೆಗೆ, ಅಗ್ನಿಶಾಮಕ ಇಂಜಿನ್ ಚಾಲಕ ಹಾಗೂ ಚಾಲಕ ತಂತ್ರಜ್ಞ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.
2. ದೈಹಿಕ ಅರ್ಹತೆ:
ಸಾಮಾನ್ಯವಾಗಿ ಅಗ್ನಿಶಾಮಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೈಹಿಕ ಸಾಮರ್ಥ್ಯವನ್ನು ಹೊಂದಿರುವುದು ಕಡ್ಡಾಯವಾಗಿದ್ದು, ಈ ಹುದ್ದೆಗಳಿಗೆ ಸಂಬಂಧಿಸಿದ ದೈಹಿಕ ಅರ್ಹತೆಗಳ ಬಗ್ಗೆ ಈ ಕೆಳಕಂಡಂತೆ ತಿಳಿದುಕೊಳ್ಳೋಣ.
- ತೂಕ:
- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50 kg ತೂಕವನ್ನು ಹೊಂದಿರಬೇಕು.
- ಎತ್ತರ:
- ಸಾಮಾನ್ಯವಾಗಿ ಅಗ್ನಿಶಾಮಕ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕನಿಷ್ಠ 168 cm ಎತ್ತರವನ್ನು ಹೊಂದಿರಬೇಕು. ಇವುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಸಡಿಲಿಕೆ ಇರುತ್ತದೆ.
- ಹೃದಯಬಲ:
- ಸಾಮಾನ್ಯವಾಗಿ ಅಗ್ನಿಶಾಮಕ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕನಿಷ್ಠ 81 cm ಎದೆಹಾಳತೆ ಹೊಂದಿದ್ದು, ಪೂರ್ಣವಾಗಿ ಉಸಿರು ಎಳೆದಾಗ 5 cm ವಿಸ್ತರಣೆಯಾಗಬೇಕು.
ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರ:
ಅಗ್ನಿಶಾಮಕ ಸಿಬ್ಬಂದಿ, ಅಗ್ನಿಶಾಮಕ ಇಂಜಿನ್ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳಿಗೆ ಸಾಮಾನ್ಯವಾಗಿ ಈ ಕೆಳಗೆ ನೀಡಲಾದ ವಯೋಮಿತಿಯನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ.
- ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಹಾಗೂ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸಾಮಾನ್ಯವಾಗಿ ಅಗ್ನಿಶಾಮಕ ಹಾಗೂ ತುರ್ತುಸೇವಗಳ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಕೆಳಗೆ ನೀಡಲಾದ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಕನಿಷ್ಠ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಇತೆರೆ ಹಿಂದುಳಿದ ಅಭ್ಯರ್ಥಿಗಳಿಗೆ ಕನಿಷ್ಠ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಠ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ನೇಮಕಾತಿ ಅಧಿಸೂಚನೆ ಹೊರಬಂದ ತಕ್ಷಣವಷ್ಟೇ ಹುದ್ದೆಗೆ ಸಂಬಂಧಿಸಿದ ಅರ್ಜಿ ಶುಲ್ಕ ಇದೆಯೇ? ಇಲ್ಲವೇ? ಎನ್ನುವುದನ್ನು ತಿಳಿದುಕೊಳ್ಳಬೇಕಿದೆ.
ಹುದ್ದೆಗೆ ಸಂಬಂಧಿಸಿದ ವೇತನ ಶ್ರೇಣಿ:
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂದಾಜು ವೇತನವನ್ನು ಈ ಕೆಳಗೆ ನೀಡಲಾಗಿದೆ.
- ಅಗ್ನಿಶಾಮಕ ಸಿಬ್ಬಂದಿ (Fireman), ಅಗ್ನಿಶಾಮಕ ಇಂಜಿನ್ ಚಾಲಕ ಹಾಗೂ ಚಾಲಕ ತಂತ್ರಜ್ಞ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅಂದಾಜಿನ ಪ್ರಕಾರ ಮಾಸಿಕ ₹37,500 ರಿಂದ ₹76,100 ನಿಗದಿಪಡಿಸಲಾಗಿದೆ.
- ಅವುಗಳ ಜೊತೆಗೆ ತುಟ್ಟಿ ಭತ್ಯೆ, ವೈದ್ಯಕೀಯ ಭತ್ಯೆ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
ಕಿರಿಯ ಮಹಿಳಾ ಆರೋಗ್ಯ ಸಹಾಯಕ ಹಾಗೂ ಆರೋಗ್ಯ ಶಿಕ್ಷಣ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಈ ಕೆಳೆಗೆ ನೀಡಿರುವ ಅಗತ್ಯ ದಾಖಲೆಗಳನ್ನು ಹೊಂದಿರುವುದು ಅಗತ್ಯ. ಅವುಗಳೆಂದರೆ,
- SSLC ಅಂಕ ಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಅಗ್ನಿಶಾಮಕ ಇಂಜಿನ್ ಚಾಲಕ ಹಾಗೂ ಚಾಲಕ ತಂತ್ರಜ್ಞ ಹುದ್ದೆಗೆ ಅರ್ಜಿ ಸಲ್ಲಿಸಲು ಚಾಲನಾ ಪರವಾನಗಿ
- ಪಾಸ್ಪೋರ್ಟ್ ಅಳತೆಯ ಫೋಟೋ
- ಗ್ರಾಮೀಣ ಅಭ್ಯರ್ಥಿ ಪ್ರಮಾಣಪತ್ರ
- ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
ಸಾಮಾನ್ಯವಾಗಿ ಅಗ್ನಿಶಾಮಕ ಹುದ್ದೆಗಳ ನೇಮಕಾತಿಯಲ್ಲಿ ಈ ಕೆಳಗೆ ನೀಡಲಾದ ಆಯ್ಕೆ ಪ್ರಕ್ರಿಯೆಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಾಗುತ್ತದೆ.
- ದೈಹಿಕ ಅರ್ಹತಾ ಪರೀಕ್ಷೆ:
ಅಭ್ಯರ್ಥಿಗಳು ಹೊಂದಿರುವ ಎತ್ತರ, ತೂಕ ಹಾಗೂ ಎದೆಯಳತೆಯನ್ನು ಮೊದಲು ಪರೀಕ್ಷೆ ಮಾಡಲಾಗುವುದು. ಈ ಎಲ್ಲಾ ದೈಹಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಯಾಗುತ್ತಾರೆ.
- ದೈಹಿಕ ಸಾಮರ್ಥ್ಯ ಪರೀಕ್ಷೆ:
ದೈಹಿಕ ಅರ್ಹತೆಯಲ್ಲಿ ಹೊಂದಿರುವ ಅಭ್ಯರ್ಥಿಗಳು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಯಾಗುತ್ತಾರೆ. ಈ ಪರೀಕ್ಷೆಯಲ್ಲಿ ಉದ್ದ ಜಿಗಿತ, ಎತ್ತರ ಜಿಗಿತ, 100 ಹಾಗೂ 800 ಮೀಟರ್ ಓಟ, ಗುಂಡು ಎಸೆತಗಳಿರುತ್ತದೆ.
- ಲಿಖಿತ ಪರೀಕ್ಷೆ;
ಈ ಎರಡು ಹಂತದಲ್ಲಿ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಕೊನೆಯದಾಗಿ 100 ಅಂಕಗಳ ಲಿಖಿತ ಪರೀಕ್ಷೆಯನ್ನು ಮಾಡಲಾಗುತ್ತದೆ.
| ಇಲ್ಲಿ ಗಮನಿಸಿ: “ಅಗ್ನಿಶಾಮಕ ಹುದ್ದೆಗಳಿಗೆ ಸಾಮಾನ್ಯವಾಗಿ ಮೀಸಲಾತಿ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಾಗುತ್ತದೆ.” |
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:
ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯಲ್ಲಿ ಒಟ್ಟು 1600 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ (Fireman), ಅಗ್ನಿಶಾಮಕ ಇಂಜಿನ್ ಚಾಲಕ ಹಾಗೂ ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಹೊರಡಿಸಲಿದ್ದು, ಈ ಹುದ್ದೆಗಳಿಗೆ ಸಾಮಾನ್ಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ನೀವೇನಾದರೂ ಈ ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಹೊಂದಿದ್ದು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ, ಇಂದಿನಿಂದಲೇ ಸಿದ್ದತೆಯನ್ನು ಮಾಡಿಕೊಳ್ಳಿ. ಏಕೆಂದರೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿ, ಅಗ್ನಿಶಾಮಕ ಇಂಜಿನ್ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆಯನ್ನು ಹೊರಡಿಸಲಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು.
| ವಿವರಗಳು | ದಿನಾಂಕ |
| ಅಧಿಸೂಚನೆ ಪ್ರಕಟವಾದ ಮುಖ್ಯ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
| ಅರ್ಜಿ ಸಲ್ಲಿಸಲು ಮುಖ್ಯ ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್. ಎ ಮುಂಡ್ಕರ್ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹಸಚಿವ ಡಾ. ಜಿ ಪರಮೇಶ್ವರ್ ಅವರು ಒಟ್ಟು 1600 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಅಗ್ನಿಶಾಮಕ ಇಂಜಿನ್ ಚಾಲಕ ಹಾಗೂ ಚಾಲಕ ತಂತ್ರಜ್ಞ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಹೊರಡಿಸಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈಗಿನಿಂದಲೇ ಸದ್ದತೆಯನ್ನು ಮಾಡಿಕೊಳ್ಳಿ. ನಿಮ್ಮ ಕನಸಿನ ರಾಜ್ಯ ಸರ್ಕಾರಿ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಒಟ್ಟು 1600 ಕ್ಕೂ ಹೆಚ್ಚು ಅಗ್ನಿಶಾಮಕ ಹುದ್ದೆಗಳಿಗೆ ಭರ್ತಿಗೆ ಮುಖ್ಯಮಂತ್ರಿಗಳ ಬಳಿ ಪ್ರಸ್ತಾಪನೆಯನ್ನು ಸಲ್ಲಿಸಿದ್ದಾರೆ.
ಅಗ್ನಿಶಾಮಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗಿರುತ್ತದೆ.
ಅಗ್ನಿಶಾಮಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ದೈಹಿಕ ಅರ್ಹತೆಯನ್ನು ಹೊಂದಿರಬೇಕು.
ಇತರೆ ಪ್ರಮುಖ ಲಿಂಕುಗಳು:
- DHFWS: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ! ಜಸ್ಟ್ 10th ಪಾಸ್ ಆಗಿದ್ರೆ ಸಾಕು ಸರ್ಕಾರಿ ಉದ್ಯೋಗಾವಕಾಶ!
- SSLC/PUC ಆದ್ರೆ ಸಾಕು! ಅಂಗನವಾಡಿಯಲ್ಲಿ ಸರ್ಕಾರಿ ಉದ್ಯೋಗಾವಕಾಶ ಒಟ್ಟು 412 ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!
- IIMB: ಐಐಎಂಬಿ ಬೆಂಗಳೂರು ಸಂಸ್ಥೆಯಲ್ಲಿ ಭರ್ಜರಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ


Intrested