CMS Bank: ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಮಾಡಲು ಆಸಕ್ತಿಯನ್ನು ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಕರ್ನಾಟಕ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ (CMS Bank) ನೇಮಕಾತಿ ಅಧಿಸೂಚನೆ ಇದೀಗ ಪ್ರಕಟವಾಗಿದೆ. ಹತ್ತು ಜೂನಿಯರ್ ಅಸಿಸ್ಟೆಂಟ್, ಸಿಪಾಯಿ ಹುದ್ದೆಗಳಿಗೆ ಫೆಬ್ರವರಿ 2026ರ ನೇಮಕಾತಿಯ ಅಧಿಕೃತ ಅಧಿಸೂಚನೆಯ ಮೂಲಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
CMS Bank Recruitment in Kannada
ಬಹಳಷ್ಟು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಉದ್ಯೋಗ ಪ್ರಿಯರಿಗೆ ಇದೊಂದು ಒಳ್ಳೆಯ ಆಪರ್ಚುನಿಟಿ ಆಗಿದೆ. ಇದು ಬಂದು ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗ ವಾಗಿರುವಂಥದ್ದು, ಬಹಳಷ್ಟು ಜನರಿಗೆ ನಾವು ಉದ್ಯೋಗವನ್ನು ಮಾಡಿದರೆ ಬ್ಯಾಂಕಿನಲ್ಲಿಯೇ ಕಾರ್ಯ ನಿರ್ವಹಿಸಬೇಕು ಎನ್ನುವ ಹಂಬಲ ಬಹಳಷ್ಟು ಇರುತ್ತದೆ. ಅಂತಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ನೀಡಲಾದ ಅಂತಿಮ ದಿನಾಂಕದೊಳಗೆ ಸರಿಯಾದ ಕ್ರಮದಲ್ಲಿ ಅರ್ಜಿಯನ್ನು ಸಲ್ಲಿಸಿ.
ಸ್ನೇಹಿತರೆ ವಿಜಯನಗರ – ಕರ್ನಾಟಕ ಸರ್ಕಾರದಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಬೇಕು ಅನ್ನುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ನೀವು ಮಾರ್ಚ್ 10, 2026 ರಂದು ಅಥವಾ ಅದಕ್ಕೂ ಮೊದಲೇ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅವಕಾಶವನ್ನು ಇಲಾಖೆ ಮಾಡಿಕೊಟ್ಟಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರಗಳು, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ಹುದ್ದೆಗೆ ಸಂಬಂಧಿಸಿದ ಅರ್ಜಿ ಶುಲ್ಕ ಹಾಗೂ ಇನ್ನಿತರ ಅಗತ್ಯ ಮಾಹಿತಿಗಾಗಿ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕಕ್ಕೆ ಭೇಟಿ ನೀಡಿ.

ಹುದ್ದೆಯ ಕಿರು ವಿಮರ್ಶೆ (CMS Bank):
| ನೇಮಕಾತಿ ಸಂಸ್ಥೆ | ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ (CMS Bank Recruitment) |
| ಹುದ್ದೆಯ ಹೆಸರು | ಕಿರಿಯ ಸಹಾಯಕರು ಹಾಗೂ ಸಿಪಾಯಿ |
| ಹುದ್ದೆಯ ಸಂಖ್ಯೆ | 10 ಹುದ್ದೆಗಳು |
| ವೇತನ ಶ್ರೇಣಿ | ₹19,950 – ₹52,650 |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಉದ್ಯೋಗ ಸ್ಥಳ | ವಿಜಯಪುರ, ಕರ್ನಾಟಕ |
ಹುದ್ದೆಯ ವಿವರಣಾತ್ಮಕ ನೋಟ:
ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ (CMS Bank), ವಿಜಯಪುರ 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 10 ಜೂನಿಯರ್ ಅಸಿಸ್ಟೆಂಟ್ ಹಾಗೂ ಸಿಪಾಯಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ SSLC ಅಲ್ಲಿ ಉತ್ತೀರ್ಣರಾದವರಿಂದ ಹಿಡಿದು ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತಿದ್ದು, ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ಸಂಕ್ಷಿಪ್ತ ವಿವರ:
ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ (CMS Bank), ವಿಜಯಪುರ 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಸಿಪಾಯಿ | 05 ಹುದ್ದೆಗಳು |
| ಜೂನಿಯರ್ ಅಸಿಸ್ಟೆಂಟ್ | 05 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
1. ಸಿಪಾಯಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು.
- ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಹೊಂದಿದ್ದರೆ, ಅವರಿಗೆ ಮೊದಲ ಆದ್ಯತೆ ನೀಡಲಾಗುವುದು.
- ಜೊತೆಗೆ ಅಭ್ಯರ್ಥಿಗಳು ಶಾಲಾ ಹಂತದಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.
2. ಜೂನಿಯರ್ ಅಸಿಸ್ಟಂಟ್ ಹುದ್ದೆಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ:
- ಜೂನಿಯರ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
- ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ B.Com, BBA, BCA, BE, ಹಾಗೂ B.Sc ಪದವಿಯನ್ನು ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
- ಅತ್ಯಂತ್ಯ ಮುಖ್ಯವಾಗಿ, ಪದವಿಯಲ್ಲಿ ಶೇಕಡಾ 70% ಅಂಕ ಗಳಿಸುವುದು ಕಡ್ಡಾಯವಾಗಿದೆ.
- ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ ವಿವರ:
ಜೂನಿಯರ್ ಅಸಿಸ್ಟೆಂಟ್ ಹಾಗೂ ಸಿಪಾಯಿ ಹುದ್ದೆಗಳಿಗೆ ಅರ್ಜಿ ಸಲ್ಲಿರುವ ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ವಿವರವನ್ನು ಈ ಕೆಳಗೆ ನೀಡಲಾಗಿದೆ. ಅವುಗಳೆಂದರೆ,
- ಅಭ್ಯರ್ಥಿಗಳ ಕನಿಷ್ಠ ವಯಸ್ಸು: 18 ವರ್ಷ
- ಅಭ್ಯರ್ಥಿಗಳ ಗರಿಷ್ಠ ವಯಸ್ಸು: 35 ವರ್ಷ
ವಯೋಮಿತಿ ಸಡಿಲಿಕೆ:
ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ 2026 ರ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳಿಗೆ ವರ್ಗವಾರು ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಹೀಗಿದೆ,
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ:
ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗಿದ್ದು, ಅವುಗಳ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
- ಸಿಪಾಯಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ₹19,950 ರಿಂದ ₹37,900 ರ ವರೆಗೆ ವೇತನವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
- ಹಾಗೆಯೇ, ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ₹27,650 ರಿಂದ ₹52,650 ರ ವರೆಗೆ ವೇತನವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತದೆ.
ಅರ್ಜಿ ಶುಲ್ಕ:
ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ (CMS Bank) ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕದ ವಿವರ ಹೀಗಿದೆ.
| ವಿವಿಧ ವರ್ಗಗಳು | ಅರ್ಜಿ ಶುಲ್ಕ |
| ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು | ₹500 |
| ಸಾಮಾನ್ಯ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು | ₹1,000 |
ಅಗತ್ಯವಾದ ದಾಖಲೆಗಳು:
ಜೂನಿಯರ್ ಅಸಿಸ್ಟೆಂಟ್ ಹಾಗೂ ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಅಗತ್ಯ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.
1. ಶೈಕ್ಷಣಿಕ ಪ್ರಮಾಣಪತ್ರ:
- ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪ್ರಮಾಣಪತ್ರ ಹಾಗೂ ಪದವಿ ಅಂಕಪಟ್ಟಿಯನ್ನು ಹೊಂದಿರಬೇಕು.
- ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಅಂಕ ಪಟ್ಟಿ ಹೊಂದಿರಬೇಕು.
2. ವಯಸ್ಸಿನ ಪುರಾವೆಗಾಗಿ SSLC ಅಂಕ ಪಟ್ಟಿಯನ್ನು ಹಾಗೂ ವರ್ಗಾವಣಾ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.
3. ಆಧಾರ್ ಕಾರ್ಡ್
4. ಕಂಪ್ಯೂಟರ್ ಸರ್ಟಿಫಿಕೇಟ್
5. ಪಾಸ್ಪೋರ್ಟ್ ಅಳತೆಯ ಫೋಟೋ
6. ಅನುಭವ ಪ್ರಮಾಣಪತ್ರ
7. ಜಾತಿ ಮತ್ತು ಆದಾಯ ಪ್ರಮಾಣಪತ್ರ
ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ:
ಒಟ್ಟು 200 ಅಂಕಗಳ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ಲಿಖಿತ ಪರೀಕ್ಷೆಯಲ್ಲಿ 100 ಅಂಕಗಳ ಪ್ರಶ್ನೆಗಳು ಬ್ಯಾಂಕಿಂಗ್ ವಿಷಯಗಳ ಕುರಿತು ಇದ್ದರೆ, 40 ಅಂಕಗಳ ಪ್ರಶ್ನೆಗಳು ಕನ್ನಡ ಭಾಷೆಯ ಕುರಿತು ಇರುತ್ತದೆ. ಹಾಗೂ ತಲಾ 30 ಅಂಕಗಳು ಇಂಗ್ಲಿಷ್ ಹಾಗೂ ಸಾಮಾನ್ಯ ಜ್ಞಾನ ವಿಷಯಗಳ ಕುರಿತು ಪರೀಕ್ಷೆ ನಡೆಸಲಾಗುತ್ತದೆ.
- ನೇರ ಸಂದರ್ಶನ:
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ತಯಾರಿಸಿ, ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಜೂನಿಯರ್ ಅಸಿಸ್ಟಂಟ್ ಹಾಗೂ ಸಿಪಾಯಿ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:
ಜೂನಿಯರ್ ಅಸಿಸ್ಟೆಂಟ್ ಹಾಗೂ ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್ http://cmsbank.in/ ಗೆ ಭೇಟಿ ನೀಡಿ. ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ ಅಥವಾ ವಿಜಯಪುರದ ಪ್ರಧಾನ ಕಚೇರಿಗೆ ಭೇಟಿ ಹುದ್ದೆಗೆ ಸಂಬಂಧಿಸಿದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಅನುಭವ ವಿವರಗಳನ್ನ ಭರ್ತಿ ಮಾಡಿ.
- ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಹಾಗೂ ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
- ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯಲ್ಲಿ ನಿಗದಿ ಪಡಿಸಿದ ಕೊನೆಯ ದಿನಾಂಕದ ಮೊದಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
| ವಿವರಗಳು | ದಿನಾಂಕ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 16-02-2026 |
| ಅರ್ಜಿ ಸಲ್ಲಿಸಲು ಮುಖ್ಯ ಕೊನೆಯ ದಿನಾಂಕ | 10-03-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ 2026 ರ ನೇಮಕಾತಿ ಅಧಿಸೂಚನೆಯಲ್ಲಿ ಜೂನಿಯರ್ ಅಸಿಸ್ಟೆಂಟ್ ಹಾಗೂ ಸಿಪಾಯಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡುವ ಕನಸ್ಸನ್ನು ಹೊತ್ತಿರುವವರಿಗೆ ಇದೊಂದು ಸುವರ್ಣಾವಕಾಶ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ, 10-03-2026 ರೊಳಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು.
ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ SSLC ಅಲ್ಲಿ ಉತ್ತೀರ್ಣರಾಗಿರಬೇಕು.
ಜೂನಿಯರ್ ಅಸಿಸ್ಟೆಂಟ್ ಹಾಗೂ ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕ ₹500
ಇತರೆ ಪ್ರಮುಖ ಲಿಂಕುಗಳು:
- Police Department : ಪೊಲೀಸ್ ಇಲಾಖೆ ನೇಮಕಾತಿ 2026 : ಸಂಪೂರ್ಣ ಮಾಹಿತಿ!
- Fireman Recruitment 2026: SSLC ಅರ್ಹತೆ – 1600ಕ್ಕೂ ಹೆಚ್ಚು ಹುದ್ದೆಗಳು, ಈಗಲೇ ಸಿದ್ಧತೆ ಆರಂಭಿಸಿ!
- DHFWS: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ! ಜಸ್ಟ್ 10th ಪಾಸ್ ಆಗಿದ್ರೆ ಸಾಕು ಸರ್ಕಾರಿ ಉದ್ಯೋಗಾವಕಾಶ!


Saibaba nagara andralli main road near penny 2stage
Andralli main road peeny 2stage