Scooter: ವಿಕಲಚೇತನರಿಗಾಗಿ ಉಚಿತ ಯಂತ್ರ ಚಾಲಿತ ದ್ವಿಚಕ್ರ ವಾಹನ – ಅರ್ಜಿ ಪ್ರಕ್ರಿಯೆ ಆರಂಭ!

Scooter

ನಮಸ್ಕಾರ ಸ್ನೇಹಿತರೆ, ನೀವೇನಾದರೂ ವಿಕಲಚೇತನರಾಗಿದ್ದು, ಉದ್ಯೋಗಕ್ಕಾಗಿ ಅಥವಾ ಹೊರಗಡೆ ಓಡಾಟಕ್ಕೆ ಪರದಾಡುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಕರ್ನಾಟಕ ಸರ್ಕಾರವು ಯಂತ್ರ ಚಾಲಿತ ದ್ವಿಚಕ್ರ ವಾಹನ ಯೋಜನೆಯಡಿಯಲ್ಲಿ 75% ಕಿಂತ ಹೆಚ್ಚು ದೈಹಿಕ ಅಂಗವಿಕಲತೆಯನ್ನು ಹೊಂದಿರುವವರಿಗಾಗಿ ಉಚಿತವಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ನೀಡಲು ಮುಂದಾಗಿದೆ.

Free Scooter Scheme in Kannada

ಕರ್ನಾಟಕ ಸರ್ಕಾರವು ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಡಿಯಲ್ಲಿ ಈ ಒಂದು ಯೋಜನೆಯನ್ನು ಜಾರಿಗೊಳಿಸಿದ್ದು, ಯಂತ್ರಚಾಲಿತ ದ್ವಿಚಕ್ರ ವಾಹನ (Scooter) ವನ್ನು ನೀಡುವ ಮೂಲಕ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

ಪ್ರಸ್ತುತ ಲೇಖನದಲ್ಲಿ ಈ ಯೋಜನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಯೋಜನೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕ ಕ್ಕೆ ಭೇಟಿ ನೀಡಿ.

Scooter
Scooter

ಯೋಜನೆಯ ಕಿರು ವಿಮರ್ಶೆ:

ಇಲಾಖೆ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ (DWDS)
ಯೋಜನೆಯ ಹೆಸರು ಯಂತ್ರ ಚಾಲಿತ ದ್ವಿಚಕ್ರ ವಾಹನ (Scooter) ಯೋಜನೆ
ಅರ್ಹ ಫಲಾನುಭವಿಗಳು 75% ದೈಹಿಕ ಅಂಗವಿಕಲತೆಯನ್ನು ಹೊಂದಿರುವವರು
ಯೋಜನೆಯಡಿಯಲ್ಲಿ ಸಿಗುವ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಹಾಗೂ ಆಫ್ಲೈನ್

ಯೋಜನೆಯ ಬಗ್ಗೆ:

ಕರ್ನಾಟಕ ಸರ್ಕಾರವು ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಡಿಯಲ್ಲಿ ಅಂಗವಿಕಲತೆ ಹೊಂದಿರುವವರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ (Scooter) ಯೋಜನೆಯನ್ನು ಜಾರಿಗೊಳಿಸಿದ್ದು, ವಿಕಲಚೇತನರ ಜೀವನಮಟ್ಟವನ್ನು ಸುಧಾರಿಸುವುದು ಹಾಗೂ ಅವರನ್ನು ಸಬಲರನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಯಂತ್ರ ಚಾಲಿತ ದ್ವಿಚಕ್ರ ವಾಹನ ಯೋಜನೆಯಡಿಯಲ್ಲಿ ಅಂಗವಿಕಲ ಅಭ್ಯರ್ಥಿಗಳು ಲಾಭವನ್ನು ಪಡೆದುಕೊಳ್ಳಬೇಕಾದರೆ, ಕನಿಷ್ಠ 20 ವರ್ಷದಿಂದ ಗರಿಷ್ಟ 60 ವರ್ಷದೊಳಗಿನ ಶೇಕಡಾ 75% ಕಿಂತ ಹೆಚ್ಚು ಸೊಂಟದ ಕೆಳ ಭಾಗದಲ್ಲಿ ಸ್ವಾಧೀನ ಇಲ್ಲದ ಹಾಗೂ ವಾಹನವನ್ನು ಚಲಾಯಿಸಲು ಸದೃಢರಾಗಿರುವ ವಿಕಲಚೇತನರು ಅರ್ಹರಾಗಿರುತ್ತಾರೆ.

ಯೋಜನೆಯ ಉದ್ದೇಶ:

  • ಸಮಾನ ಭಾಗವಹಿಸುವಿಕೆಗೆ ಅವಕಾಶ:

ಅಂಗವಿಕಲರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ (Scooter) ಗಳಂತೆ ಹಲವಾರು ಯೋಜನೆಯನ್ನು ಜಾರಿಗೆ ತರುವ ಮೂಲಕ ಸಮಾಜದ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡಿ ಎಲ್ಲಾ ಕ್ಷೇತ್ರಗಳಲ್ಲಿ ಅವರ ಇರುವಿಕೆಯನ್ನು ಹೆಚ್ಚಿಸಿ ಅವರಿಗೂ ಕೂಡ ಸಮಾಜದಲ್ಲಿ ಸಮಾನ ಅವಕಾಶ ಹಾಗೂ ಗೌರವಯುತ ಸ್ಥಾನಮಾನ ಸಿಗುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

  • ಸ್ವಯಂ ಚಲನೆಗೆ ಅವಕಾಶ:

ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಈ ಒಂದು ಯೋಜನೆಯಡಿಯಲ್ಲಿ ಯಂತ್ರ ಚಾಲಿತ ದ್ವಿಚಕ್ರ ವಾಹನ (Scooter) ಗಳನ್ನು ನೀಡುವ ಮೂಲಕ ಬೇರೆ ಸ್ಥಳಗಳಿಗೆ ಓಡಾಡಬೇಕಾದರೆ ಇತರರ ಮೇಲೆ ಅವಲಂಬಿತರಾಗುವುದನ್ನು ತಪ್ಪಿಸಿ, ಯಾರ ನೆರವಿಲ್ಲದೆ ಸ್ವತಂತ್ರರಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಚಲಿಸಲು ಅವಕಾಶ ಕಲ್ಪಿಸುವುದು.

  • ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು:

ಅಂಗವಿಕಲರಿಗೆ ಈ ಒಂದು ಯೋಜನೆಯಡಿಯಲ್ಲಿ ಯಂತ್ರ ಚಾಲಿತ ದ್ವಿಚಕ್ರ ವಾಹನ (Scooter) ವನ್ನು ನೀಡುವ ಮೂಲಕ ಸ್ವಂತ ಉದ್ಯೋಗವನ್ನು ಮಾಡಲು ಅಥವಾ ಉದ್ಯೋಗ ಹುಡುಕಿಕೊಂಡು ಹೋಗಲು ಅವಕಾಶ ಕಲ್ಪಿಸುವ ಮೂಲಕ ಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹೆಚ್ಚಿನ ಆದಾಯವನ್ನು ಗಳಿಸಿ ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಅವಕಾಶ ಕಲ್ಪಿಸುವುದು.

  • ಶಿಕ್ಷಣಕ್ಕೆ ನೆರವು:

ಉನ್ನತ ಶಿಕ್ಷಣ ಪಡೆಯುತ್ತಿರುವ ಅಂಗವಿಕಲ ವಿದ್ಯಾರ್ಥಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಉಚಿತವಾಗಿ ನೀಡುವ ಮೂಲಕ ಕಾಲೇಜುಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ಸಂಚರಿಸಲು ಅವಕಾಶ ನೀಡಿ ಅಂಗವಿಕಲರು ತಮ್ಮ ಶೈಕ್ಷಣಿಕ ಗುರಿಗಳನ್ನು ತಲುಪಲು ಅವಕಾಶ ಕಲ್ಪಿಸಲಾಗಿದೆ.

ಅಂಗವಿಕಲರಿಗಾಗುವ ಪ್ರಯೋಜನಗಳು:

  • ಅಂಗವಿಕಲರು ತಮ್ಮ ಮನೆಯ ನಾಲ್ಕು ಮೂಲಗಳ ಮಧ್ಯೆ ಜೀವನವನ್ನು ಸಾಗಿಸುವ ಬದಲು ಯಂತ್ರಚಾಲಿತ ವಾಹನವನ್ನು ಬಳಸುವ ಮೂಲಕ ಯಾರ ಸಹಾಯವಿಲ್ಲದೆ, ಯಾರ ಮೇಲೂ ಅವಲಂಬಿತರಾಗದೆ ಅಂಗಡಿಗಳಿಗಾಗಲಿ, ಆಸ್ಪತ್ರೆಗಳಿಗಾಗಲಿ ಸ್ವತಂತ್ರವಾಗಿ ಚಲಿಸಬಹುದಾಗಿದೆ.
  • ಸ್ವಂತ ಉದ್ಯೋಗ ಮಾಡುವ ಅಥವಾ ಸಣ್ಣ ಪುಟ್ಟ ವ್ಯಾಪಾರ ಮಾಡುವ ಅಂಗವಿಕಲರು ತಮ್ಮ ಉದ್ಯೋಗ ಸ್ಥಳಕ್ಕೆ ಅಥವಾ ವ್ಯಾಪಾರ ಸ್ಥಳಕ್ಕೆ ಸುಲಭವಾಗಿ ಸಂಚಾರ ಮಾಡುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಯಾಗಿ ಜೀವನವನ್ನು ನಡೆಸಬಹುದಾಗಿದೆ.
  • ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಸ್ವಂತವಾಗಿ ಯಾಂತ್ರೀಕೃತ ವಾಹನವನ್ನು ಹೊಂದಿರುವ ಮೂಲಕ ಸಮಯಕ್ಕೆ ಸರಿಯಾಗಿ ಕಾಲೇಜುಗಳಿಗೆ ಹಾಜರಾಗಲು ಸಾಧ್ಯವಾಗುತ್ತದೆ.
  • ಅಂಗವಿಕಲರು ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಪಡೆದುಕೊಳ್ಳುವ ಮೂಲಕ ಆಟೋ ಹಾಗೂ ಬಸ್ ಹತ್ತಲು ಪಡುವ ದೈಹಿಕ ಶ್ರಮದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಇದರಿಂದಾಗಿ ಹೆಚ್ಚಿನ ಶ್ರಮ ಅಗತ್ಯ ಇರುವುದಿಲ್ಲ ಹಾಗೂ ಸಮಯದ ಉಳಿತಾಯವಾಗಿರುತ್ತದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು?

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿದ್ದು, 10 ವರ್ಷಗಳ ಕಾಲ ವಾಸವಿರಬೇಕು.
  • ಅರ್ಜಿದಾರರು ವಾಹನ ಚಾಲನೆ ಮಾಡಲು ಸದೃಢರಾಗಿರಬೇಕು.
  • ಅರ್ಜಿದಾರರು ಶೇಕಡಾ 75% ಗಿಂತ ಹೆಚ್ಚು ದೈಹಿಕ ಅಂಗವಿಕಲತೆಯನ್ನು ಹೊಂದಿರಬೇಕು.
  • ಅರ್ಜಿದಾರರು ಕನಿಷ್ಠ 20 ವರ್ಷದಿಂದ ಗರಿಷ್ಟ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು ₹2 ಲಕ್ಷ ಮೀರಿರಬಾರದು.
  • ಅರ್ಜಿದಾರರು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
  • ಅರ್ಜಿದಾರರು ಈ ಹಿಂದೆ ಯಾವುದೇ ಇಲಾಖೆಯಡಿಯಲ್ಲಿ ಈ ಒಂದು ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಂಡಿರಬಾರದು.
  • ಅರ್ಜಿದಾರರು ಕಡ್ಡಾಯವಾಗಿ ಅಂಗವಿಕಲ ಪ್ರಮಾಣಪತ್ರವನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಆಧಾರ್ ಕಾರ್ಡ್ ಪ್ರತಿ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ಅಂಗವಿಕಲ ಪ್ರಮಾಣಪತ್ರ
  • ಪಾಸ್ಪೋರ್ಟ್ ಅಳತೆಯ ಫೋಟೋ
  • ನಿವಾಸ ದೃಢೀಕರಣ ಪತ್ರ
  • ವಯಸ್ಸಿನ ಪುರಾವೆ
  • ವಾಹನ ಚಾಲನಾ ಪರವಾನಗಿ
  • UDID ಕಾರ್ಡ್

ಅರ್ಜಿ ಸಲ್ಲಿಸುವುದು ಹೇಗೆ?

ಅಂಗವಿಕಲರು ಯಂತ್ರ ಚಾಲಿತ ದ್ವಿಚಕ್ರ ವಾಹನ (Scooter) ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬೇಕಾದರೆ ಈ ಕೆಳಗೆ ನೀಡಿರುವಂತೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿದಾರರು ಸೇವಾ ಸಿಂಧೂ ಅಧಿಕೃತ ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ.
  • ಹೊಸ ಬಳಕೆದಾರರಾಗಿದ್ದರೆ, ಮೊಬೈಲ್ ಸಂಖ್ಯೆ ಹಾಗೂ ಒಟಿಪಿ ಬಳಸಿ ನೋಂದಣಿ ಪೂರ್ಣಗೊಳಿಸಿ.
  • ನಂತರ ಪಾಸ್ವರ್ಡ್ ಹಾಗೂ ಯೂಸರ್ ಐಡಿ ಬಳಸಿ ಲಾಗಿನ್ ಆಗಿ.
  • ಯಂತ್ರಚಾಲಿತ ದ್ವಿಚಕ್ರ ವಾಹನ ಎಂದು ಟೈಪ್ ಮಾಡಿ ಸ್ಕೀಮ್ ಆಯ್ಕೆಮಾಡಿಕೊಳ್ಳಿ.
  • ನಂತರ, ಅಪ್ಲಿಕೇಶನ್ ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರಗಳು, UDID ಕಾರ್ಡ್ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಿ. ನಂತರ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಿ.

ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ನೀವೇನಾದರೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ಕಚೇರಿಗೆ ಭೇಟಿ ನೀಡಿ.
  • ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆದುಕೊಳ್ಳಿ.
  • ನಂತರ, ಅಪ್ಲಿಕೇಶನ್ ಫಾರ್ಮ್ ಅಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಈ ಮೇಲೆ ತಿಳಿಸಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ಗೆ ಲಗತ್ತಿಸಿ ಕಚೇರಿಗೆ ಸಲ್ಲಿಸಿ. ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಿ.

ಅಂತಿಮ ತೀರ್ಮಾನ:

ಕರ್ನಾಟಕ ಸರ್ಕಾರವು ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿಯಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ (Scooter) ವನ್ನು ಉಚಿತವಾಗಿ ನೀಡಲು ಮುಂದಾಗಿದ್ದು, ಒಬ್ಬ ವಿಕಲಚೇತನ ಅಭ್ಯರ್ಥಿಯು ತಮ್ಮ ಜೀವಿತಾವಧಿಯಲ್ಲಿ ಒಂದು ಬಾರಿ ಮಾತ್ರ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದುಕೊಳ್ಳಬಹುದಾಗಿದೆ.

ಸೀಮಿತ ವಾಹನಗಳು ಇರುವುದರಿಂದ ಮೊದಲು ಅರ್ಜಿ ಹಾಕಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಹಾಗಾಗಿ ನೀವು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಅರ್ಹರಾಗಿದ್ದರೆ ಸಮಯವನ್ನು ವ್ಯರ್ಥ ಮಾಡದೇ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

75% ಕಿಂತ ಹೆಚ್ಚು ದೈಹಿಕ ವಿಕಲತೆಯನ್ನು ಹೊಂದಿರುವ ಕನಿಷ್ಠ 20 ವರ್ಷದಿಂದ 60 ವರ್ಷದೊಳಗಿನ ಅಭ್ಯರ್ಥಿಗಳು ಈ ಒಂದು ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಅಂಗವಿಕಲಲರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಅರ್ಹ ಫಲಾನುಭವಿಗಳು ಯಂತ್ರ ಚಾಲಿತ ದ್ವಿಚಕ್ರ ವಾಹನ (Scooter) ಯೋಜನೆಗೆ ಸೇವಾ ಸಿಂಧೂ ಅಧಿಕೃತ ಪೋರ್ಟಲ್ ಮೂಲಕ ಅಥವಾ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಪ್ರಮುಖ ಲಿಂಕುಗಳು:

Leave a Reply

Your email address will not be published. Required fields are marked *