ನಮಸ್ಕಾರ ಸ್ನೇಹಿತರೆ, ನೀವೇನಾದರೂ ತಾಂತ್ರಿಕ ಶಿಕ್ಷಣ ಮುಗಿಸಿ ರೈಲ್ವೆ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸುವ ಆಸಕ್ತಿಯನ್ನು ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ರೈಲ್ವೆ ನೇಮಕಾತಿ ಕೋಶವು ಅಪ್ರೆಂಟಿಕ್ ಕಾಯ್ದೆಯನ್ವಯ ಕೇಂದ್ರ ರೈಲ್ವೆಯ ವಿವಿಧ ಟ್ರೇಡ್ ಗಳ ಅಡಿಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
RRC CR Recruitment in Kannada
ಕೇಂದ್ರ ರೈಲ್ವೆ (RRC CR) ಅಲ್ಲಿ ಒಟ್ಟು 51 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು ಅಂದರೆ 10-03-2026 ರಿಂದಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು 09-04-2026 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿದೆ.
ಅಪ್ರೆಂಟಿಸ್ ಹುದ್ದೆಯು ಒಂದು ವರ್ಷದ ವೃತ್ತಿಪರ ತರಬೇತಿ ಆಗಿದ್ದು, ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಸಮಯದಲ್ಲಿ ಅತ್ಯಾಕರ್ಷಕ ಸ್ಟೈಫಂಡ್ ನೀಡಲಾಗುತ್ತದೆ. ಮಹಾರಾಷ್ಟ್ರ ಸರ್ಕಾರದ ಮುಂಬೈ, , ಪುಣೆ, ಸೋಲಾಪುರ, ಭೂಸವಾಲ್ ಗಳಲ್ಲಿ ವೃತ್ತಿಜೀವನ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ ಸೇರಿದಂತೆ ಇನ್ನಷ್ಟು ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ಪಡೆದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಹೊಸ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕಕ್ಕೆ ಭೇಟಿ ನೀಡಿ.
ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ ಹೆಸರು | ರೈಲ್ವೆ ನೇಮಕಾತಿ ಕೋಶ, ಕೇಂದ್ರ ರೈಲ್ವೆ (RRC CR) |
| ಹುದ್ದೆಯ ಹೆಸರು | ಅಪ್ರೆಂಟಿಸ್ |
| ಹುದ್ದೆಯ ಸಂಖ್ಯೆ | 51 ಹುದ್ದೆಗಳು |
| ಉದ್ಯೋಗ ಸ್ಥಳ | ಮುಂಬೈ, ಪುಣೆ, ಸೋಲಾಪುರ ಹಾಗೂ ಭೂಸಾವಲ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 09-04-2026 |
| ವಯೋಮಿತಿ ವಿವರ | ಕನಿಷ್ಠ 18 ವರ್ಷದಿಂದ ಗರಿಷ್ಟ 24 ವರ್ಷ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ರೈಲ್ವೆ ನೇಮಕಾತಿ ಕೋಶ, ಕೇಂದ್ರ ರೈಲ್ವೆ (RRC CR) ಯು ಒಟ್ಟು 51 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, 10 ನೇ ತರಗತಿ, ಹಾಗೂ ITI ನಲ್ಲಿ ಉತ್ತೀರ್ಣರಾಗಿರುವ ಕನಿಷ್ಠ 18 ವರ್ಷದಿಂದ ಗರಿಷ್ಟ 24 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಸಂಕ್ಷಿಪ್ತ ವಿವರ:
ಕೇಂದ್ರ ರೈಲ್ವೆ (RRC CR) ನೇಮಕಾತಿಯು ವಿವಿಧ ಟ್ರೇಡ್ ಗಳ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಯಾವ ಯಾವ ವಿಭಾಗದಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಸ್ಟೆನೋಗ್ರಾಫರ್ (ಮುಂಬೈ) | 28 ಹುದ್ದೆಗಳು |
| ಮೆಕ್ಯಾನಿಕ್ ರೆಫ್ರಿಜರೇಷನ್ ಮತ್ತು ಎಸಿ (ಸೋಲಾಪುರ) | 09 ಹುದ್ದೆಗಳು |
| ಸ್ಟೆನೋಗ್ರಾಫರ್ (ಭೂಸಾವಲ್) | 05 ಹುದ್ದೆಗಳು |
| ಮೇಸನ್ (ಸೋಲಾಪುರ) | 03 ಹುದ್ದೆಗಳು |
| ಸ್ಟೆನೋಗ್ರಾಫರ್ (ಪುಣೆ) | 03 ಹುದ್ದೆಗಳು |
| ಫಿಟ್ಟರ್ ಇಂಜಿನಿಯರಿಂಗ್ (ಸೋಲಾಪುರ) | 02 ಹುದ್ದೆಗಳು |
| ಸ್ಟೆನೋಗ್ರಾಫರ್ (ಸೋಲಾಪುರ) | 01 ಹುದ್ದೆ |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
RRC CR (ಕೇಂದ್ರ ರೈಲ್ವೆ) ಯ ಅಧಿಕೃತ ಅಧಿಸೂಚನೆಯ ಪ್ರಕಾರ, ವಿವಿಧ ಟ್ರೇಡ್ ಗಳ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳನ್ನು ಗಳಿಸಿ SSLC ಅಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸಂಬಂಧಿತ ವಿಷಯದಲ್ಲಿ NCVT/ SCVT ಯಿಂದ ನೀಡಲಾದ ITI ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕೇಂದ್ರ ರೇಲ್ವೆ (RRC CR) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10-03-2026 ರಂತೆ ಕನಿಷ್ಠ 15 ವರ್ಷದಿಂದ ಗರಿಷ್ಟ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.
- PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
RRC ಕೇಂದ್ರ ರೈಲ್ವೆ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಕೆಲವು ವರ್ಗದ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು, PwBD ಅಭ್ಯರ್ಥಿಗಳು, ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯ ಇರುವುದಿಲ್ಲ.
- ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳು ₹100/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
ವೇತನ ಶ್ರೇಣಿ:
ಅಪ್ರೆಂಟಿಸ್ ಕಾಯ್ದೆಯ ನಿಯಮಗಳ ಪ್ರಕಾರ, ವಿವಿಧ ಟ್ರೇಡ್ ಗಳ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ₹9,600 ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.
- SSLC ಅಂಕ ಪಟ್ಟಿ
- ಐಟಿಐ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಫೋಟೋ
- ವಯಸ್ಸಿನ ಪುರಾವೆ
- ಅಭ್ಯರ್ಥಿಗಳ ಸಹಿ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಂಡು ಅರ್ಜಿ ಸಲ್ಲಿಸಿ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು RRC CR ಅಧಿಕೃತ ವೆಬ್ಸೈಟ್ http://cr.indianrailways.gov.in/ ಗೆ ಭೇಟಿ ನೀಡಿ.
- ಆನ್ಲೈನ್ ಅಪ್ಲಿಕೇಶನ್ ಫಾರ್ ಅಪ್ರೆಂಟಿಸ್ ಎನ್ನುವ ಲಿಂಕ್ ಅನ್ನು ಕ್ಲಿಕ್ ಮಾಡಿ ಹೊಸ ಬಳಕೆದಾರರಾಗಿದ್ದರೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ, ರಿಜಿಸ್ಟೇಷನ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಇತರೆ ಅಗತ್ಯ ವಿವರಗಳನ್ನ ಭರ್ತಿ ಮಾಡಿ.
- ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಂತರ ನಿಮ್ಮ ವರ್ಗಕ್ಕೆ ಅನುಗುಣವಾದ ಅರ್ಜಿ ಶುಲ್ಕವನ್ನು ಪಾವತಿಸಿ.
- ನಂತರ, ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಅರ್ಜಿದಾರರು ನಿಗದಿ ಪಡಿಸಿದ ಕೊನೆಯ ದಿನಾಂಕ 09-04-2026 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ:
ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗೂ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ನಂತರ ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳ SSLC ಅಂಕ ಪಟ್ಟಿ, ಐಟಿಐ ಪ್ರಮಾಣಪತ್ರ ಹಾಗೂ ಇನ್ನಿತರ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.
- ವೈದ್ಯಕೀಯ ಪರೀಕ್ಷೆ:
ನಂತರ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಯನ್ನು ಪಡೆಯಲು ದೈಹಿಕ ಸಾಮರ್ಥ್ಯವನ್ನು ಹೊಂದಿದ್ದಾರೆಯೇ? ಇಲ್ಲವೇ? ಎಂದು ಪರೀಕ್ಷಿಸಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳು ರೈಲ್ವೆ ವೈದ್ಯರಿಂದ ಫಿಟ್ನೆಸ್ ಸರ್ಟಿಫಿಕೇಟ್ ಹೊಂದಿರಬೇಕಾಗುತ್ತದೆ.
- ಅಂತಿಮ ಆಯ್ಕೆ:
ಈ ಎಲ್ಲಾ ಹಂತದಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
| ವಿವರಗಳು | ದಿನಾಂಕ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 10-03-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 09-04-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
RRC ಕೇಂದ್ರ ರೈಲ್ವೆ (RRC CR) ನೇಮಕಾತಿಯು 2026 ರಲ್ಲಿ ಒಟ್ಟು 51 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಇದು ಖಾಯಂ ಸರ್ಕಾರಿ ಉದ್ಯೋಗವಲ್ಲ. ಒಂದು ವರ್ಷದ ವೃತ್ತಿಪರ ತರಬೇತಿ ಆಗಿದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೇಮಕಾತಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದರೆ, ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ ಗರಿಷ್ಟ 24 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗಿರುತ್ತದೆ.
ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಕ ಮಾಡುತ್ತಿರುವ ಸಂಸ್ಥೆ RRC ಕೇಂದ್ರ ರೈಲ್ವೆ (RRC CR) ಸಂಸ್ಥೆ.
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-04-2026.
ಹೌದು, ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಇತರೆ ಪ್ರಮುಖ ಲಿಂಕುಗಳು:
- Court job: ರೂ. 83,700/- ಕರ್ನಾಟಕ ಜಿಲ್ಲಾ ಕೋರ್ಟ್ ನಲ್ಲಿ ಭರ್ಜರಿ ಉದ್ಯೋಗವಕಾಶ! ಇಲ್ಲಿ ಅರ್ಜಿ ಸಲ್ಲಿಸಿ
- PUC: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಮುಂದೆ ಕಾಲೇಜಿನಲ್ಲೇ ಸಿಗಲಿದೆ ಉಚಿತ ಪಠ್ಯಪುಸ್ತಕಗಳು!
- 2026 Vacancy: 56,000+ ನೇಮಕಾತಿ ಪ್ರಕಟಣೆ! ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು? –ಇಲ್ಲಿದೆ ಪೂರ್ಣ ಮಾಹಿತಿ!


Hoskote Colony ratnapuri Raste
Mysore Taluk hunasur