ನೀವೇನಾದರೂ ಪದವಿ ಮುಗಿಸಿ ಒಂದೊಳ್ಳೆಯ ಉದ್ಯೋಗವನ್ನು ಹುಡುಕೊಟ್ಟಿದ್ದಿರಾ? ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಬಯಸುತ್ತಿದ್ದೀರಾ? ನಿಮಗಾಗಿ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ-ಆಪರೇಟಿವ್ ಲಿಮಿಟೆಡ್ ಸುವರ್ಣಾವಕಾಶವನ್ನು ಕಲ್ಪಿಸಿದೆ.
IFFCO Recruitment in Kannada
ಭಾರತದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ- ಆಪರೇಟಿವ್ ಲಿಮಿಟೆಡ್ 2025-26 ನೇ ಸಾಲಿನಲ್ಲಿ ಗ್ರಾಜುಯೇಟ್ ಇಂಜಿನಿಯರ್ ಟ್ರೈನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಮೆಕ್ಯಾನಿಕಲ್, ಕೆಮಿಕಲ್, ಎಲೆಕ್ಟ್ರಿಕಲ್, ಸಿವಿಲ್, ಐಟಿ, ಕಂಪ್ಯೂಟರ್ ಸೈನ್ಸ್ ಹಾಗೂ ಐನ್ಟ್ರುಮೆಂಟೇಷನ್ ವಿಭಾಗದಲ್ಲಿ ನಿರ್ದಿಷ್ಟ ಅಂಕಗಳೊಂದಿಗೆ ಇಂಜಿನಿಯರ್ ಪದವಿ ಪೂರ್ಣ ಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷಗಳ ವೃತ್ತಿಪರ ತರಬೇತಿಯನ್ನು ಪಡೆದುಕೊಳ್ಳಬಹುದು. ತರಬೇತಿ ಪಡೆದುಕೊಳ್ಳುವ ಸಮಯದಲ್ಲಿ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ಸ್ಟೈಫಂಡ್ ಗಳನ್ನು ನೀಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಹತೆಯನ್ನು ಖಚಿತಪಡಿಸಿಕೊಂಡು ದಿನಾಂಕ 30-04-2026 ರೊಳಗೆ ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಾಗಿ ಪ್ರಸ್ತುತ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ ಹೆಸರು | ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ- ಆಪರೇಟಿವ್ ಲಿಮಿಟೆಡ್ (IFFCO) |
| ಹುದ್ದೆಯ ಹೆಸರು | ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳು |
| ಹುದ್ದೆಯ ಸಂಖ್ಯೆ | ವಿವಿಧ ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ- ಆಪರೇಟಿವ್ ಲಿಮಿಟೆಡ್ (IFFCO) ಸಂಸ್ಥೆಯು ಕೆಮಿಕಲ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರುವ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಅರ್ಹರಾಗಿರುತ್ತಾರೆ.
ಹುದ್ದೆಯ ಸಂಕ್ಷಿಪ್ತ ವಿವರ:
ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ- ಆಪರೇಟಿವ್ ಲಿಮಿಟೆಡ್ (IFFCO) ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ಖಾಲಿ ಇರುವ ಹುದ್ದೆಗಳ ವಿಭಾಗ ಈ ಕೆಳಕಂಡಂತಿದೆ.
- ಸಿವಿಲ್ ಇಂಜಿನಿಯರಿಂಗ್
- ಕೆಮಿಕಲ್ ಇಂಜಿನಿಯರಿಂಗ್
- ಮೆಕ್ಯಾನಿಕಲ್ ಇಂಜಿನಿಯರಿಂಗ್
- ಎಲೆಕ್ಟ್ರಿಕಲ್ ಇಂಜಿನಿಯರಿಂಗ್
- ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್
- ಇನ್ಫರ್ಮೇಷನ್ ಟೆಕ್ನಾಲಜಿ
- ಆರ್ಟಿಫಿಷಿಯಲ್ ಇಂಟಲಿಜೆನ್ಸ್
- ಕಂಪ್ಯೂಟರ್ ಸೈನ್ಸ್
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಕೆಮಿಕಲ್, ಮೆಕ್ಯಾನಿಕಲ್, ಸಿವಿಲ್, ಇನ್ಸ್ಟ್ರುಮೆಂಟೇಷನ್, ಆರ್ಟಿಫಿಷಿಯಲ್ ಇಂಟಲಿಜೆನ್ಸ್, ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಷನ್ ಟೆಕ್ನಾಲಜಿ ವಿಭಾಗಗಳಲ್ಲಿ ಇಂಜಿನಿಯರಿಂಗ್ ಅಥವಾ ಬಿ.ಟೆಕ್ ಪದವಿ ಹೊಂದಿರಬೇಕು.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು 55% ಅಂಕಗಳೊಂದಿಗೆ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.
- ಅಭ್ಯರ್ಥಿಗಳು 2023 ನೇ ಶೈಕ್ಷಣಿಕ ವರ್ಷದಲ್ಲಿ ಅಥವಾ ನಂತರದ ವರ್ಷಗಳಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ- ಆಪರೇಟಿವ್ ಲಿಮಿಟೆಡ್ (IFFCO) ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅಭ್ಯರ್ಥಿಗಳ ವಯೋಮಿತಿಯನ್ನು ಏಪ್ರಿಲ್ 30, 2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ- ಆಪರೇಟಿವ್ ಲಿಮಿಟೆಡ್ (IFFCO) ನೇಮಕಾತಿ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ನಿಗದಿಪಡಿಸದ ಕಾರಣ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೆ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಯು ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷಗಳ ತರಬೇತಿ ಅವಧಿ ಇರುತ್ತದೆ. ಈ ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ರೂ. 65,000/- ದಂತೆ ತರಬೇತಿ ಅವಧಿ ಮುಗಿಯುವ ವರೆಗೂ ಸ್ಟೈಫಂಡ್ ಗಳನ್ನು ಪಡೆದುಕೊಳ್ಳಬಹುದಾಗಿದೆ.
ಇದರ ಜೊತೆಗೆ, ಮನೆ ಬಾಡಿಗೆಯ ಭತ್ಯೆ, ವಾಷಿಂಗ್ ಅಲೋವೆನ್ಸ್, ಕ್ಯಾಂಟೀನ್ ಸೌಲಭ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳು ಲಭ್ಯವಿರುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಇಂಜಿನಿಯರಿಂಗ್ ಪದವಿ ಅಂಕಪಟ್ಟಿ
- ಪದವಿ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಫೋಟೋ
- ವಯಸ್ಸಿನ ಪುರಾವೆ
- ಅಭ್ಯರ್ಥಿಗಳ ಸಹಿ
- ಜಾತಿ ಪ್ರಮಾಣಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ- ಆಪರೇಟಿವ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ https://www.iffco.in/en/corporate ಗೆ ಭೇಟಿ ನೀಡಿ.
- ನಂತರ ಅಲ್ಲಿ ಕಾಣುವ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ, ರಿಜಿಸ್ಟೇಷನ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಇತರೆ ಅಗತ್ಯ ವಿವರಗಳನ್ನ ಭರ್ತಿ ಮಾಡಿ.
- ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಂತರ, ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಅರ್ಜಿದಾರರು ನಿಗದಿ ಪಡಿಸಿದ ಕೊನೆಯ ದಿನಾಂಕ 30-04-2026 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- ಪೂರ್ವಭಾವಿ ಆನ್ಲೈನ್ ಪರೀಕ್ಷೆ:
ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪೂರ್ವಭಾವಿ ಆನ್ಲೈನ್ ಪರೀಕ್ಷೆಗಳನ್ನು ನಡೆದಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಮೊಬೈಲ್ ಅಥವಾ ಲ್ಯಾಪ್ಟಾಪ್ ಮೂಲಕ ಪರೀಕ್ಷೆಯನ್ನು ಬರೆಯಬಹುದಾಗಿದೆ.
- ಅಂತಿಮ ಆನ್ಲೈನ್ ಪರೀಕ್ಷೆ:
ಪೂರ್ವಭಾವಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ಆಧರಿಸಿ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಈ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಈ ಪರೀಕ್ಷೆಗೆ ಕರೆಯಲಾಗುತ್ತದೆ. IFFCO ನಿಗದಿಪಡಿಸಿದ ನಿರ್ದಿಷ್ಟ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
- ವೈಯಕ್ತಿಕ ಸಂದರ್ಶನ:
ಅಭ್ಯರ್ಥಿಗಳು ಅಂತಿಮ ಆನ್ಲೈನ್ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಸಿದ್ದಪಡಿಸಿ, ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ವೈದ್ಯಕೀಯ ಪರೀಕ್ಷೆ:
ನಂತರ ಕೊನೆಯ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
| ವಿವರಗಳು | ದಿನಾಂಕ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಈಗಾಗಲೇ ಆರಂಭಗೊಂಡಿದೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ನೀವೇನಾದರೂ ಇಂಜಿನಿಯರಿಂಗ್ ನಲ್ಲಿ ಪದವಿ ಹೊಂದಿದ್ದು, ಅತ್ಯಾಕರ್ಷಕ ವೇತನವನ್ನು ನೀಡುವ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ? ಹಾಗಿದ್ದರೆ ನಿಮಗೆ ಇದೊಂದು ಸುವರ್ಣಾವಕಾಶ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅರ್ಜಿ ಸಲ್ಲಿಸಲು ನಿಗಿದಿಪಡಿಸಿದ ಕೊನೆಯ ದಿನಾಂಕ 30-04-2026 ರ ವರೆಗೆ ಕಾಯದೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಅಭ್ಯರ್ಥಿಗಳು ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗಿರುತ್ತದೆ.
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡುತ್ತಿರುವ ಸಂಸ್ಥೆ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ- ಆಪರೇಟಿವ್ ಲಿಮಿಟೆಡ್.
ಇತರೆ ಪ್ರಮುಖ ಲಿಂಕುಗಳು:
- PUC: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಮುಂದೆ ಕಾಲೇಜಿನಲ್ಲೇ ಸಿಗಲಿದೆ ಉಚಿತ ಪಠ್ಯಪುಸ್ತಕಗಳು!
- Grihalakshmi Scheme: ಗೃಹಲಕ್ಷ್ಮಿ 27ನೇ ಕಂತು ಬಿಡುಗಡೆ! ನಿಮ್ಮ ಖಾತೆಗೆ ₹2,000 ಬಂದಿದೆಯಾ? ಈಗಲೇ ಚೆಕ್ ಮಾಡಿ

