ಉದ್ಯೋಗದ ಕನಸ್ಸು ಕಾಣುತ್ತಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗಾವಕಾಶ! ಬಾಗಲಕೋಟೆ ಜಿಲ್ಲೆಯ ಎಸ್.ಬಿ ತಿಮ್ಮಾಪೂರ ಸಹಕಾರಿ ಸಂಘವು 2026 ನೇ ಸಾಲಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
Bank Job Recruitment in Kannada
ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಬ್ಯಾಂಕಿಂಗ್ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಭದ್ರ ಹಾಗೂ ಗೌರವಾನ್ವಿತ ಹುದ್ದೆಗಳಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಹಾಗೂ ಅರ್ಜಿ ಶುಲ್ಕ ಇರುವುದಿಲ್ಲ. ಈ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಸಲ್ಲಿಸುವ ವಿಧಾನ, ಹಾಗೂ ಇನ್ನಿತರ ವಿವರಗಳನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ಪರಿಚಯ:
| ನೇಮಕಾತಿ ಸಂಸ್ಥೆ | ಎಸ್.ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಬಾಗಲಕೋಟೆ |
| ಹುದ್ದೆಯ ಹೆಸರು | ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಹಾಗೂ ಅಟೆಂಡರ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | 4 ಹುದ್ದೆಗಳು |
| ಉದ್ಯೋಗ ಸ್ಥಳ | ನವನಗರ – ಬಾಗಲಕೋಟೆ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 |
| ಆಯ್ಕೆ ಪ್ರಕ್ರಿಯೆ | ನೇರ ಸಂದರ್ಶನ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಎಸ್.ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತವು ತಮ್ಮ ವಿಭಾಗದಲ್ಲಿ ಖಾಲಿ ಇರುವ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, SSLC, ಬಿಕಾಂ, ಎಂಕಾಂ, ಎಂಬಿಎ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಕನಿಷ್ಠ 18 ರಿಂದ 35 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಎಸ್,ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತ ನೇಮಕಾತಿ ಅಧಿಸೂಚನೆಯಲ್ಲಿ ಹೊರಡಿಸಿದ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ | 01 ಹುದ್ದೆ |
| ಜೂನಿಯರ್ ಅಸಿಸ್ಟೆಂಟ್ | 01 ಹುದ್ದೆ |
| ಪಿಗ್ಮಿ ಏಜೆಂಟ್ | 01 ಹುದ್ದೆ |
| ಅಟೆಂಡರ್ | 01 ಹುದ್ದೆ |
ಶೈಕ್ಷಣಿಕ ಅರ್ಹತೆ:
ಚೀಫ್ ಎಕ್ಸಿಕ್ಯೂಟಿವ್ ಆಫೀಸರ್:
- ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ, ಎಂಕಾಂ, ಎಂಬಿಎ ಪದವಿ ಹೊಂದಿರಬೇಕು.
- ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಹಾಗೂ ಸಂಬಂಧಿತ ಕ್ಷೇತ್ರದಲ್ಲಿ 2 ರಿಂದ 5 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ಜೂನಿಯರ್ ಅಸಿಸ್ಟೆಂಟ್:
- ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ ಎಂಕಾಂ ಹಾಗೂ ಎಂಬಿಎ ಪದವಿ ಹೊಂದಿರಬೇಕು.
- ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಪಿಗ್ಮಿ ಏಜೆಂಟ್:
- ಪಿಂಗ್ನಿ ಏಜೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು.
- ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಅಟೆಂಡರ್:
ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ:
ಎಸ್,ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಹಾಗೂ ಎಸ್,ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘಗಳ ನಿಯಮಗಳ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ಪ್ರವರ್ಗ 2A, 2B, 3A, 3B ಹಾಗೂ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : 200/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : 100/-
- ಎಲ್ಲ ವರ್ಗಗಳ ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ಗೇಟ್ ವೇ ಮೂಲಕ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸುವುದಿಲ್ಲ.
ವೇತನ ಶ್ರೇಣಿ:
ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್, ಅಟೆಂಡರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವ, ಹುದ್ದೆಯ ಜವಾಬ್ದಾರಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಶೈಕ್ಷಣಿಕ ಪ್ರಮಾಣಪತ್ರ
- SSLC ಅಂಕಪಟ್ಟಿ
- ಪದವಿ ಅಂಕಪಟ್ಟಿ
- ಅನುಭವ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಫೋಟೋ
- ವಯಸ್ಸಿನ ಪುರಾವೆ
- ಅಭ್ಯರ್ಥಿಗಳ ಸಹಿ
- ಜಾತಿ ಪ್ರಮಾಣಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:
- ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಹಾಗೂ ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲು ಎಸ್,ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಸರಿಯಾಗಿ ಓದಿಕೊಳ್ಳಿ.
- ನಂತರ ಅನುಭವ ಪ್ರಮಾಣಪತ್ರ, ಶೈಕ್ಷಣಿಕ ಪ್ರಮಾಣಪತ್ರ, ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
- ನಂತರ ಬಾಗಲಕೋಟೆಯ ನವನಗರದಲ್ಲಿರುವ ಎಸ್.ಬಿ ತಿಮ್ಮಾಪೂರ ಸೌಹಾರ್ದ ಸಹಕಾರ ಸಂಘ ನಿಯಮಿತ ಇದರ ಪ್ರಧಾನ ಕಚೇರಿಗೆ ಖುದ್ದಾಗಿ ಭೇಟಿ ನೀಡಿ.
- ನಂತರ ಅಲ್ಲಿ ನೀಡಲಾಗುವ ಅರ್ಜಿ ಪ್ರತಿಯನ್ನು ಭರ್ತಿ ಮಾಡಿ. ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಪ್ರತಿಯನ್ನು ಕಚೇರಿಗೆ ಸಲ್ಲಿಸಿ.
ಕಚೇರಿಯ ವಿಳಾಸ: ಸೆಕ್ಟರ್ ನಂ. 19, ನಗರಸಭೆ ಕಾಂಪ್ಲೆಕ್ಸ್, ಎ ಬ್ಲಾಕ್ ನಂ. 1 ರಿಂದ 5, ಮೊದಲ ಮಹಡಿ, ಕೋರ್ಟ್ ಹತ್ತಿರ, ನವನಗರ – ಬಾಗಲಕೋಟೆ
ಆಯ್ಕೆ ಪ್ರಕ್ರಿಯೆ:
- ನೇರ ಸಂದರ್ಶನ:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳು ಹೊಂದಿರುವ ಕಂಪ್ಯೂಟರ್ ಜ್ಞಾನ, ಸಂವಹನ ಕಲೆ, ಅಭ್ಯರ್ಥಿಗಳು ಹೊಂದಿರುವ ಅನುಭವಗಳನ್ನು ಪರೀಕ್ಷಿಸಲಾಗುತ್ತದೆ. ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳಿಗೆ ಆಡಳಿತಾತ್ಮಕ ಕೌಶಲ್ಯವನ್ನು ಹಾಗೂ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಬ್ಯಾಂಕಿಂಗ್ ವ್ಯವಹಾರಗಳ ತಿಳುವಳಿಕೆಯನ್ನು ಪರೀಕ್ಷಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
| ವಿವರಗಳು | ದಿನಾಂಕ |
| ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ | 21-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 (ಮಧ್ಯಾಹ್ನ 2 ಗಂಟೆ) |
| ಸಂವಹನ ನಡೆಯುವ ದಿನಾಂಕ ಮತ್ತು ಸಮಯ | 30-04-2026 (ಮಧ್ಯಾಹ್ನ 2 ಗಂಟೆ ನಂತರ) |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಎಸ್,ಬಿ ತಿಮ್ಮಾಪೂರ ಸೌಹಾರ್ದ ಸಹಕಾರ ಸಂಘ ನಿಯಮಿತ ತಮ್ಮ ವಿಭಾಗದಲ್ಲಿ ಖಾಲಿ ಇರುವ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹ ಮಾನದಂಗಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಂತರ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಅಭ್ಯರ್ಥಿಗಳು ಪಿಗ್ಮಿ ಏಜೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಕನಿಷ್ಠ SSLC ಪಾಸ್ ಹಾಗೂ ಕಂಪ್ಯೂಟರ್ ಜ್ಞಾನ.
ಎಸ್.ಬಿ ತಿಮ್ಮಾಪೂರ ಸೌಹಾರ್ದ ಸಹಕಾರ ಸಂಘ ನಿಯಮಿತದಲ್ಲಿ ಒಟ್ಟು 4 ಹುದ್ದೆಗಳು ಖಾಲಿ ಇದೆ.
ಇತರೆ ಪ್ರಮುಖ ಲಿಂಕುಗಳು:
- IFFCO: ₹65,000 ವೇತನ! ಪದವೀಧರ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ । ಏಪ್ರಿಲ್ 30 ಕೊನೆಯ ದಿನಾಂಕ
- PUC: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಮುಂದೆ ಕಾಲೇಜಿನಲ್ಲೇ ಸಿಗಲಿದೆ ಉಚಿತ ಪಠ್ಯಪುಸ್ತಕಗಳು!
- Grihalakshmi Scheme: ಗೃಹಲಕ್ಷ್ಮಿ 27ನೇ ಕಂತು ಬಿಡುಗಡೆ! ನಿಮ್ಮ ಖಾತೆಗೆ ₹2,000 ಬಂದಿದೆಯಾ? ಈಗಲೇ ಚೆಕ್ ಮಾಡಿ

