IRIDO: ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯಲ್ಲಿ 6000+ ಹುದ್ದೆಗಳ ಬೃಹತ್ ನೇಮಕಾತಿ 2026! ಮೇ 31 ಕೊನೆಯ ದಿನಾಂಕ

IRIDO

ಉದ್ಯೋಗವಿಲ್ಲದೆ ಖಾಲಿ ಕುಳಿತಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳ ಪಾಲಿಗೆ ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ ನೇಮಕಾತಿ ಹೊಸ ಭರವಸೆಯನ್ನು ಮೂಡಿಸಿದೆ. IRIDO ಸಂಸ್ಥೆಯು 2026 ನೇ ಸಾಲಿನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, 6300 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

IRIDO Recruitment 2026

ಇಲ್ಲಿ ಪ್ರಾಜೆಕ್ಟ್ ಮ್ಯಾನೇಜರ್, ಮಾರ್ಕೆಟಿಂಗ್ ಮ್ಯಾನೇಜರ್, ರೀಜನಲ್ ಮ್ಯಾನೇಜರ್, ಡ್ರೈವರ್, ಕ್ಲರ್ಕ್, ಪ್ಯೂನ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದ್ದು, ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಹಾಗೂ ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 01-05-2026 ರಿಂದ ಆರಂಭಗೊಂಡು ದಿನಾಂಕ 31-05-2026 ವರೆಗೂ ಕೊನೆಗೊಳ್ಳಲಿದೆ. ದೇಶದಾದ್ಯಂತ ಎಲ್ಲಾ ಅಭ್ಯರ್ಥಿಗಳಿಗೂ ಕೂಡ IRIDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

IRIDO

ಹುದ್ದೆಯ ವಿಶ್ಲೇಷಣೆ:

ನೇಮಕಾತಿ ಸಂಸ್ಥೆ ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO)
ಹುದ್ದೆಯ ಹೆಸರು ಪ್ರಾಜೆಕ್ಟ್ ಮ್ಯಾನೇಜರ್, ರೀಜನಲ್ ಮ್ಯಾನೇಜರ್, ಮಾರ್ಕೆಟಿಂಗ್ ಮ್ಯಾನೇಜರ್, ಕಂಪ್ಯೂಟರ್ ಆಪರೇಟರ್, ಕ್ಲಿರ್ಕ್, ಅಕೌಂಟೆಂಟ್, ಅಪ್ರೆಂಟಿಸ್ ಹಾಗೂ ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ 6300 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-05-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO) ಯು ಪ್ರಾಜೆಕ್ಟ್ ಮ್ಯಾನೇಜರ್, ಕ್ಲರ್ಕ್, ಡ್ರೈವರ್, ಮಾರ್ಕೆಟಿಂಗ್ ಮ್ಯಾನೇಜರ್, ಅಕೌಂಟೆಂಟ್, ಕಂಪ್ಯೂಟರ್ ಆಪರೇಟರ್, ಅಪ್ರೆಂಟಿಸ್ ಸೇರಿದಂತೆ ಸುಮಾರು 6300 ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, 8 ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ವಿವರ:

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO) ಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಜೆಕ್ಟ್ ಮ್ಯಾನೇಜರ್ 56 ಹುದ್ದೆಗಳು
ರೀಜನಲ್ ಮ್ಯಾನೇಜರ್ 85 ಹುದ್ದೆಗಳು
ಮಾರ್ಕೆಟಿಂಗ್ ಮ್ಯಾನೇಜರ್ 104 ಹುದ್ದೆಗಳು
ಎಕ್ಸಿಕ್ಯೂಟಿವ್ ಮ್ಯಾನೇಜರ್ 259 ಹುದ್ದೆಗಳು
ಬ್ರಾಂಚ್ ಮ್ಯಾನೇಜರ್ 273 ಹುದ್ದೆಗಳು
ಅಸಿಸ್ಟೆಂಟ್ ಬ್ರಾಂಚ್ ಮ್ಯಾನೇಜರ್ 273 ಹುದ್ದೆಗಳು
ಡಿವಿಷನಲ್ ಮ್ಯಾನೇಜರ್ 311 ಹುದ್ದೆಗಳು
ಡಿಸ್ಟ್ರಿಕ್ಟ್ ಮ್ಯಾನೇಜರ್ 611 ಹುದ್ದೆಗಳು
ತಹಶೀಲ್ ಮ್ಯಾನೇಜರ್ 880 ಹುದ್ದೆಗಳು
ಟ್ರೈನಿ ಆಫೀಸರ್ 123 ಹುದ್ದೆಗಳು
ಫೀಲ್ಡ್ ಆಫೀಸರ್ 249 ಹುದ್ದೆಗಳು
ಕಂಪ್ಯೂಟರ್ ಆಪರೇಟರ್ 225 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ 234 ಹುದ್ದೆಗಳು
ಸ್ಟೋರ್ ಸೂಪರ್ ವೈಸರ್ 145 ಹುದ್ದೆಗಳು
ಲ್ಯಾಬ್ ಅಟೆಂಡೆಂಟ್ 143 ಹುದ್ದೆಗಳು
ಅಕೌಂಟೆಂಟ್ 156 ಹುದ್ದೆಗಳು
ಅಪ್ರೆಂಟಿಸ್ 754 ಹುದ್ದೆಗಳು
ಎಲೆಕ್ಟ್ರಿಷಿಯನ್ 160 ಹುದ್ದೆಗಳು
ಟೀಮ್ ಲೀಡರ್ 489 ಹುದ್ದೆಗಳು
ಕ್ಲರ್ಕ್ 114 ಹುದ್ದೆಗಳು
ಹೆಲ್ಪರ್ 280 ಹುದ್ದೆಗಳು
ಡ್ರೈವರ್ 90 ಹುದ್ದೆಗಳು
ಪ್ಯೂನ್ 78 ಹುದ್ದೆಗಳು
ಗಾರ್ಡ್ 208 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
  • ಮಾರ್ಕೆಟಿಂಗ್ ಮ್ಯಾನೇಜರ್, ರೀಜನಲ್ ಮ್ಯಾನೇಜರ್, ಡಿವಿಷನಲ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಮ್ಯಾನೇಜರ್ ಹಾಗೂ ಡಿಸ್ಟ್ರಿಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
  • ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಣಿಜ್ಯ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
  • ಬ್ರಾಂಚ್ ಮ್ಯಾನೇಜರ್, ತಹಶೀಲ್ ಮ್ಯಾನೇಜರ್, ಅಸಿಸ್ಟೆಂಟ್ ಬ್ರಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
  • ಲ್ಯಾಬ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ವಿಷಯದಲ್ಲಿ ಪಿಯೂಸಿ ಪೂರ್ಣಗೊಳಿಸಿರಬೇಕು.
  • ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು ಜೊತೆಗೆ ಕಂಪ್ಯೂಟರ್ ಡಿಪ್ಲೊಮಾ ಪ್ರಮಾಣಪತ್ರ ಹೊಂದಿರಬೇಕು.
  • ಫೀಲ್ಡ್ ಆಫೀಸರ್, ಟ್ರೈನಿ ಆಫೀಸರ್, ಸ್ಟೋರ್ ಸೂಪರ್ ವೈಸೆರ್, ಅಪ್ರೆಂಟಿಸ್ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಲ್ಲಿ ಪಾಸ್ ಆಗಿರಬೇಕು.
  • ಎಲೆಕ್ಟ್ರಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 8 ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
  • ಗಾರ್ಡ್, ಪ್ಯೂನ್ ಹಾಗೂ ಹೆಲ್ಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 8 ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ಗಮನಿಸಿ: “ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದಿಂದ ಗರಿಷ್ಟ 5 ವರ್ಷ ವೃತ್ತಿಪರ ಅನುಭವ ಹೊಂದಿರಬೇಕು.”

ವಯೋಮಿತಿ ವಿವರ:

ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳುವ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18, 25 ಅಥವಾ 30 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಟ 40 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು.

ಅಭ್ಯರ್ಥಿಗಳ ವಯೋಮಿತಿಯನ್ನು 31-03-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ : 5 ವರ್ಷ
  • ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ

ಅರ್ಜಿ ಶುಲ್ಕ:

IRIDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ವರ್ಗವರು ಈ ಕೆಳಗೆ ನೀಡಲಾದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟೆರ್ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್ ಬಳಸಿ ಪಾವತಿಸಬೇಕಾಗುತ್ತದೆ.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ₹350/-
  • ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ: ₹690/-

ವೇತನ ಶ್ರೇಣಿ:

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ವೇತನವನ್ನು ನಿಗದಿಪಡಿಸಲಾಗುತ್ತದೆ.

  • ಪ್ರಾಜೆಕ್ಟ್ ಮ್ಯಾನೇಜರ್: ₹1,23,100 – ₹2,15,900
  • ರೀಜನಲ್ ಮ್ಯಾನೇಜರ್: ₹78,800 – ₹2,09,200
  • ಮಾರ್ಕೆಟಿಂಗ್ ಮ್ಯಾನೇಜರ್: ₹67,700 – ₹2,08,700
  • ಎಕ್ಸಿಕ್ಯೂಟಿವ್ ಮ್ಯಾನೇಜರ್: ₹56,100 – ₹1,77,500
  • ತಹಶೀಲ್ ಮ್ಯಾನೇಜರ್: ₹44,900 – ₹1,42,400
  • ಕ್ಲರ್ಕ್ ಮತ್ತು ಕಂಪ್ಯೂಟರ್ ಆಪರೇಟರ್: ₹19,900 – ₹63,200
  • ಮಲ್ಟಿ ಟಾಸ್ಕಿಂಗ್ ಸ್ಟಾಫ್, ಡ್ರೈವರ್ ಹಾಗೂ ಹೆಲ್ಪರ್: ₹18,000 – ₹56,900

ಅಭ್ಯರ್ಥಿಗಳು ಮೂಲ ವೇತನಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ನಗರ ಪರಿಹಾರ ಭತ್ಯೆ ಹಾಗೂ ಇತರೆ ಸೌಲಭ್ಯಗಳು ಲಭ್ಯವಿರುತ್ತದೆ.

ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಶೈಕ್ಷಣಿಕ ಪ್ರಮಾಣಪತ್ರ
  • ಶೈಕ್ಷಣಿಕ ಅಂಕಪಟ್ಟಿ
  • ವಾಹನ ಚಾಲನಾ ಪರವಾನಗಿ
  • ಅನುಭವ ಪ್ರಮಾಣಪತ್ರ
  • ಆಧಾರ್ ಕಾರ್ಡ್
  • ಪಾಸ್ಪೋರ್ಟ್ ಅಳತೆಯ ಫೋಟೋ
  • ವಯಸ್ಸಿನ ಪುರಾವೆ
  • ಅಭ್ಯರ್ಥಿಗಳ ಸಹಿ
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:

  • IRIDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ಅಪ್ಲೈ ಫಾರ್ ಜಾಬ್ ಎಂಬ ಲಿಂಕ್ ಕ್ಲಿಕ್ ಮಾಡಿ.
  • ನಂತರ ರೆಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಇತರೆ ಅಗತ್ಯ ವಿವರಗಳನ್ನ ಭರ್ತಿ ಮಾಡಿ.
  • ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ , ಹಾಗೂ ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನಂತರ, ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

  • ಸೈಕೋಮೆಟ್ರಿಕ್ ಟೆಸ್ಟ್:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೈಕೋಮೆಟ್ರಿಕ್ ಟೆಸ್ಟ್ ಅನ್ನು ನಡೆಸಲಾಗುತ್ತದೆ. ಇದು ಅಭ್ಯರ್ಥಿಗಳ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹಾಗೂ ನಾಯಕತ್ವ ಗುಣವನ್ನು ಅಳೆಯಲಾಗುತ್ತದೆ.

  • ಸಂದರ್ಶನ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.

  • ದಾಖಲೆಗಳ ಪರಿಶೀಲನೆ:

ಸಂದರ್ಶನದ ಸಮಯದಲ್ಲಿ ಅಭ್ಯರ್ಥಿಗಳು ಸಲ್ಲಿಸಿದ ಮೂಲ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.

  • ಅಂತಿಮ ಆಯ್ಕೆ:

ಅಂತಿಮವಾಗಿ ಅಭ್ಯರ್ಥಿಗಳು ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಆಧರಿಸಿ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅಭ್ಯರ್ಥಿಗಳನ್ನು ಒಂದು ವರ್ಷದ ಪ್ರೊಬೆಷನರಿ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ವಿವರಗಳುದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 01-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31-05-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 31-05-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :

ವಿವರಗಳುಲಿಂಕ್
ಅಧಿಕೃತ ವೆಬ್ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು ಸುಮಾರು 6300 ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳು ಆಯ್ಕೆಮಾಡಿಕೊಳ್ಳುವ ಹುದ್ದೆಗಳಿಎ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31-05-2026 ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-05-2026.

ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಣಿಜ್ಯ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.


ಇತರೆ ಪ್ರಮುಖ ಲಿಂಕುಗಳು:

This entry was posted in Jobs and tagged .

Leave a Reply

Your email address will not be published. Required fields are marked *