VS Bank: ₹92,500/- ವೇತನ! ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಬೃಹತ್ ನೇಮಕಾತಿ 2026 | ಇಂದೇ ಅಪ್ಲೈ ಮಾಡಿ

VS Bank

VS Bank: ಬೆಂಗಳೂರಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

VS Bank Recruitment in Kannada

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕು ಎನ್ನುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದ್ದು, ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಿತಿ ವಿವರ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

VS Bank

ಹುದ್ದೆಯ ಕಿರು ಪರಿಚಯ:

ನೇಮಕಾತಿ ಸಂಸ್ಥೆ ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ (VS Bank), ವಿಜಯನಗರ, ಬೆಂಗಳೂರು
ಹುದ್ದೆಯ ಹೆಸರು ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ ಹುದ್ದೆಗಳು
ಹುದ್ದೆಗಳ ಸಂಖ್ಯೆ 12 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-05-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ (VS Bank) ಪ್ರಸ್ತುತ ಸಾಲಿನಲ್ಲಿ ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ ಸೇರಿದಂತೆ ಒಟ್ಟು 12 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, SSLC ಹಾಗೂ ಪದವಿ ಪೂರ್ಣಗೊಳಿಸಿದ ಕನಿಷ್ಠ 18 ರಿಂದ 40 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ವಿವರ:

ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ (VS Bank) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾದ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಜೂನಿಯರ್ ಅಸಿಸ್ಟೆಂಟ್ 10 ಹುದ್ದೆಗಳು
ಅಟೆಂಡರ್ 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಜೂನಿಯರ್ ಅಸಿಸ್ಟೆಂಟ್:
    • ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
    • ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
    • ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡವನ್ನು ಓದಲು, ಬೆರೆಯಲು ಹಾಗೂ ಮಾತನಾಡಲು ಬರಬೇಕು.
    • ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಕನ್ನಡವನ್ನು ಒಂದು ಐಚ್ಚಿಕ ಭಾಷೆಯಾಗಿ ಓದಿರಬೇಕು.
  • ಅಟೆಂಡರ್:
    • ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
    • ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಕನ್ನಡವನ್ನು ಒಂದು ಐಚ್ಚಿಕ ಭಾಷೆಯಾಗಿ ಓದಿರಬೇಕು.

ವಯೋಮಿತಿ ವಿವರ:

ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ (2A, 2B, 3A, 3B): 3 ವರ್ಷ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ- 1 ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:

  • ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು:
    • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ (2A, 2B, 3A, 3B): ರೂ. 2,360/- (2,000/- ಶುಲ್ಕ + 360/- GST)
    • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ- 1 ಅಭ್ಯರ್ಥಿಗಳಿಗೆ: 1,180/- (1000/- ಶುಲ್ಕ + 180 GST )
  • ಅಟೆಂಡರ್:
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ (2A, 2B, 3A, 3B): ರೂ. 1,180/- (1000/- ಶುಲ್ಕ + 180 GST)
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ- 1 ಅಭ್ಯರ್ಥಿಗಳಿಗೆ: 590/- (500 ಶುಲ್ಕ + 90 GST)

ಅಭ್ಯರ್ಥಿಗಳು ಈ ಮೇಲೆ ನೀಡಲಾದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, UPI ಬಳಸಿ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ ನ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

  • ಜೂನಿಯರ್ ಅಸಿಸ್ಟೆಂಟ್: ರೂ. 49,050/- ದಿಂದ ರೂ. 92,500/-
  • ಅಟೆಂಡೆಂಟ್: ರೂ. 34,100/- ರಿಂದ ರೂ. 67,600/-

ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಶೈಕ್ಷಣಿಕ ಪ್ರಮಾಣಪತ್ರ
  • ಪದವಿ ಅಂಕಪಟ್ಟಿ
  • SSLC ಅಂಕಪಟ್ಟಿ
  • ಆಧಾರ್ ಕಾರ್ಡ್
  • ಪಾಸ್ಪೋರ್ಟ್ ಅಳತೆಯ ಫೋಟೋ
  • ವಯಸ್ಸಿನ ಪುರಾವೆ
  • ಅಭ್ಯರ್ಥಿಗಳ ಸಹಿ
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:

  • ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ವೀರಶೈವ ಸಹಕಾರಿ ಬ್ಯಾಂಕ್ (VS Bank) ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಇತರೆ ಅಗತ್ಯ ವಿವರಗಳನ್ನ ಭರ್ತಿ ಮಾಡಿ.
  • ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನಂತರ, ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಜೂನಿಯರ್ ಅಸಿಸ್ಟೆಂಟ್:

ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಒಟ್ಟು 200 ಅಂಕಗಳ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಸಾಮಾನ್ಯ ಇಂಗ್ಲಿಷ್, ಕನ್ನಡ, ಸಾಮಾನ್ಯ ಜ್ಞಾನ, ಸಹಕಾರಿ ವಿಷಯಗಳು, ಬ್ಯಾಂಕಿಂಗ್ ಚಟುವಟಿಕೆಗಳು, ಭಾರತೀಯ ಸಂವಿಧಾನಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳು ಇರುತ್ತದೆ. ಪರೀಕ್ಷೆಯ ಅವಧಿ 2 ಗಂಟೆ.

  • ಅಟೆಂಡೆಂಟ್:

ಅಟೆಂಡೆಂಟ್ ಹುದ್ದೆಗಳಿಗೆ ಒಟ್ಟು 100 ಅಂಕಗಳ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಕನ್ನಡ ಭಾಷೆ, ಸಾಮಾನ್ಯ ಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳು ಇರುತ್ತದೆ. ಪರೀಕ್ಷೆಯ ಅವಧಿ 1 ಗಂಟೆ.

  • ಸಂದರ್ಶನ:

ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

  • ಅಂತಿಮ ಮೆರಿಟ್ ಪಟ್ಟಿ:

ಸೈಕೋಮೆಟ್ರಿಕ್ ಟೆಸ್ಟ್ ಗೆ 25% ಹಾಗೂ ಸಂದರ್ಶನಕ್ಕೆ 75% ವೈಟೇಜ್ ನೀಡಿ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

  • ಅಂತಿಮ ಆಯ್ಕೆ:

ಲಿಖಿತ ಪರೀಕ್ಷೆಯ ಅಂಕಗಳಿಗೆ 85% ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳಲ್ಲಿ 15% ವೇಟೇಜ್ ನೀಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ವಿವರಗಳುದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 27-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ27-05-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :

ವಿವರಗಳುಲಿಂಕ್
ಅಧಿಕೃತ ವೆಬ್ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ (VS Bank) ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ, ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಂತರ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Reply

Your email address will not be published. Required fields are marked *