ಭಾರತದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 821 ಸಮಕಾಲೀನ ಲೆಕ್ಕಪರಿಶೋಧಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿವೃತ್ತ ಅಧಿಕಾರಿಗಳಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದ್ದು, ನೇಮಕಾತಿಯನ್ನು ಒಪ್ಪಂದದ ಆಧಾರದ ಮೇಲೆ ನಡೆಸಲಾಗುತ್ತದೆ.
SBI Recruitment 2026 in Kannada
ಸಮಕಾಲೀನ ಲೆಕ್ಕಪರಿಶೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಿದ್ದು, ಗರಿಷ್ಟ 65 ವರ್ಷದೊಳಗಿನ ಎಲ್ಲಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 14-05-2026 ರಿಂದ ಆರಂಭಗೊಂಡು 11-06-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ನೀಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ ಹೆಸರು | ಭಾರತೀಯ ಸ್ಟೇಟ್ ಬ್ಯಾಂಕ್ (SBI) |
| ಹುದ್ದೆಗಳ ಹೆಸರು | ಕಾಂಕರೆಂಟ್ ಆಡಿಟರ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 821 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11-06-2026 |
ಹುದ್ದೆಯ ಸಂಕ್ಷಿಪ್ತ ವಿವರ:
ಭಾರತೀಯ ಸ್ಟೇಟ್ ಬ್ಯಾಂಕ್ (SBI) ಪ್ರಸ್ತುತ ಸಾಲಿನಲ್ಲಿ ಕಾಂಕರೆಂಟ್ ಆಡಿಟರ್ ಹುದ್ದೆಗಳನ್ನು ಬ್ಯಾಕ್ ಲಾಗ್ ಹಾಗೂ ನಿಯಮಿತ ಹುದ್ದೆಗಲಾಗಿ ವಿಂಗಡಣೆ ಮಾಡಿದ್ದು, ಒಟ್ಟು 821 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ.
| SBI ವೃತ್ತ | ಹುದ್ದೆಗಳ ಒಟ್ಟು ಸಂಖ್ಯೆ |
| ಜೈಪುರ | 95 ಹುದ್ದೆಗಳು |
| ಬೆಂಗಳೂರು | 64 ಹುದ್ದೆಗಳು |
| ಮಹಾರಾಷ್ಟ್ರ | 61 ಹುದ್ದೆಗಳು |
| ತಿರುವನಂತಪುರಂ | 59 ಹುದ್ದೆಗಳು |
| ಮುಂಬೈ ಮೆಟ್ರೋ | 80 ಹುದ್ದೆಗಳು |
| ಭುವನೇಶ್ವರ | 57 ಹುದ್ದೆಗಳು |
| ಭೋಪಾಲ್ | 38 ಹುದ್ದೆಗಳು |
| ಅಮರಾವತಿ | 21 ಹುದ್ದೆಗಳು |
| ಚನ್ನೈ | 54 ಹುದ್ದೆಗಳು |
| ಚಂಡೀಗಢ | 47 ಹುದ್ದೆಗಳು |
| ಗಾಂಧಿನಗರ | 36 ಹುದ್ದೆಗಳು |
| ಹೈದರಾಬಾದ್ | 26 ಹುದ್ದೆಗಳು |
| ಲಕ್ನೋ | 30 ಹುದ್ದೆಗಳು |
| ಕೋಲ್ಕತ್ತಾ | 44 ಹುದ್ದೆಗಳು |
| ಗುವಾಹಟಿ | 21 ಹುದ್ದೆಗಳು |
| ನವದೆಹಲಿ | 50 ಹುದ್ದೆಗಳು |
| ಪಾಟ್ನಾ | 38 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SBI ಅಧಿಕೃತ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿವೃತ್ತ ಅಧಿಕಾರಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತದೆ.
- ಅಭ್ಯರ್ಥಿಗಳು ಕ್ರೆಡಿಟ್, ಆಡಿಟ್ ಅಥವಾ ಫಾರೆಕ್ಸ್ ವಿಭಾಗದಲ್ಲಿ ಕೆಲಸದ ಅನುಭವ ಹೊಂದಿರುವುದು ಕಡ್ಡಾಯವಾಗಿದೆ.
- ಅಭ್ಯರ್ಥಿಗಳು ಕಡ್ಡಾಯವಾಗಿ MMGS -III, SMGS -IV /V TEGS -IV ಹುದ್ದೆಗಳಿಂದ ನಿವೃತ್ತರಾಗಿರಬೇಕು.
ವಯೋಮಿತಿ ವಿವರ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಕಾಂಕರೆಂಟ್ ಆಡಿಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 14-05-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಕಾಂಕರೆಂಟ್ ಆಡಿಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಯೋಮಿತಿ ಸಡಿಲಿಕೆ ಇರುವುದಿಲ್ಲ.
ಅರ್ಜಿ ಶುಲ್ಕ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಅಭ್ಯರ್ಥಿಗಳು ಈ ಹಿಂದೆ ನಿವೃತ್ತಿ ಹೊಂದಿರುವ ಗ್ರೇಡ್ ಗೆ ಅನುಗುಣವಾಗಿ ಕಾಂಕರೆಂಟ್ ಆಡಿಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಲಾದ ವೇತನವನ್ನು ನೀಡಲಾಗುತ್ತದೆ.
| ನಿವೃತ್ತಿ ಗ್ರೇಡ್ ಹೆಸರು | ವೇತನ ಶ್ರೇಣಿ |
| TEGS -IV | ರೂ. 80,000/- |
| SMGS -V | ರೂ. 65,000/- |
| SMGS -IV | ರೂ. 50,000/- |
| MMGS -III | ರೂ. 45,000/- |
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- ಐಡಿ ಪ್ರೂಫ್
- ಅನುಭವ ಪ್ರಮಾಣಪತ್ರ
- ಅಭ್ಯರ್ಥಿಗಳ ಸಹಿ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಜನ್ಮ ದಿನಾಂಕ ಪ್ರಮಾಣಪತ್ರ
- ಹಾಗೂ ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿರುವ ಕಾಂಕರೆಂಟ್ ಆಡಿಟರ್ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಅಪ್ಲೈ ಆನ್ಲೈನ್ ಲಿಂಕ್ ಕ್ಲಿಕ್ ಮಾಡಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಇತರೆ ಅಗತ್ಯ ವಿವರಗಳನ್ನ ಭರ್ತಿ ಮಾಡಿ.
- ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಂತರ, ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ಹೊಂದಿರುವ ಅರ್ಹತಾ ಮಾನದಂಡಗಳು, ಅನುಭವ ಹಾಗೂ ಸೂಕ್ತತೆಗೆ ಅನುಗುಣವಾಗಿ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.
- ಸಂದರ್ಶನ:
ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಒಂದು ಸಂದರ್ಶನವು 100 ಅಂಕಗಳನ್ನು ಒಳಗೊಂಡಿರುತ್ತದೆ.
- ಮೆರಿಟ್ ಪಟ್ಟಿ:
ಅಭ್ಯರ್ಥಿಗಳು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇಬ್ಬರು ಅಭ್ಯರ್ಥಿಗಳು ಸಮಾನ ಅಂಕವನ್ನು ಗಳಿಸಿದ್ದರೆ ಹೆಚ್ಚು ವಯೋಮಿತಿ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
| ವಿವರಗಳು | ದಿನಾಂಕ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 14-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11-06-2026 |
| ಸಂದರ್ಶನ ನಡೆಯುವ ದಿನಾಂಕ | ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿವೃತ್ತ ಅಧಿಕಾರಿಗಳಿಗೆ SBI ಈ ನೇಮಕಾತಿ ಮೂಲಕ ಉತ್ತಮ ಅವಕಾಶವನ್ನು ಒದಗಿಸಿದೆ. ವಿಶೇಷವಾಗಿ ಆಡಿಟ್ ಹಾಗೂ ಕ್ರೆಡಿಟ್ ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ಹೆಚ್ಚಿನ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- VS Bank: ₹92,500/- ವೇತನ! ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಬೃಹತ್ ನೇಮಕಾತಿ 2026 | ಇಂದೇ ಅಪ್ಲೈ ಮಾಡಿ
- IRIDO: ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯಲ್ಲಿ 6000+ ಹುದ್ದೆಗಳ ಬೃಹತ್ ನೇಮಕಾತಿ 2026! ಮೇ 31 ಕೊನೆಯ ದಿನಾಂಕ
- IPPB: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನಲ್ಲಿ ಭರ್ಜರಿ ಅವಕಾಶ! COO ಹುದ್ದೆಗೆ ಅರ್ಜಿ ಆಹ್ವಾನ । ಇಂದೇ ಅಪ್ಲೈ ಮಾಡಿ
- Court Job: ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ! SSLC / PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ

