ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿ | Inter Caste Marriage Scheme In Karnataka । ICMS

ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿ | Inter Caste Marriage Scheme In Karnataka

ಕರ್ನಾಟಕ ಸರ್ಕಾರವು ಸಾಕಷ್ಟು ಯೋಜನೆಯನ್ನು ಜಾರಿಗೆ ತಂದಿದೆ. ಅದರಲ್ಲಿಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆ ಒಂದಾಗಿದೆ. ಕರ್ನಾಟಕ ಸರ್ಕಾರವು ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯನ್ನು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಹೋಗಲಾಡಿಸಲು ಜಾರಿಗೆ ತಂದಿದೆ.

Inter Caste Marriage Scheme In Karnataka

ಈ ಒಂದು ಯೋಜನೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ನಮ್ಮ ವೆಬ್ ಸೈಟ್ ನೀಡ್ಸ್ ಆಫ್ ಕರ್ನಾಟಕಕ್ಕೆ ಭೇಟಿನೀಡಿ. ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಹ ಫಲಾನುಭವಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೊದಲು ಯೋಜನೆಯ ಉದ್ದೇಶ, ಯೋಜನೆಯ ಪ್ರಯೋಜನ, ಅಗತ್ಯ ದಾಖಲೆಗಳು,ಇನ್ನಷ್ಟು ಮಾಹಿತಿಯನ್ನು ಕೆಳಗಿನ ಹಂತದಲ್ಲಿ ನೀಡಿದ್ದು ಅದನ್ನು ಓದಿಕೊಂಡು ಅರ್ಜಿ ಸಲ್ಲಿಸಿ.

ಯೋಜನೆಯ ಅವಲೋಕನ:(Inter Caste Marriage Scheme In Karnataka)

ಯೋಜನೆಯ ಹೆಸರು ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆ
ಅರ್ಹ ಫಲಾನುಭವಿಗಳು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ವ್ಯಕ್ತಿಗಳು
ಒಟ್ಟು ಪ್ರೋತ್ಸಾಹಧನ ರೂ. 2,50,000-3,00,000
ಅರ್ಜಿಸಲ್ಲಿಸುವ ರಾಜ್ಯ ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್
Inter Caste Marriage Scheme In Karnataka

ಸಂಕ್ಷಿಪ್ತ ಮಾಹಿತಿ:

ಕರ್ನಾಟಕ ಸರ್ಕಾರವು ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯನ್ನು 2015 ರಿಂದ ಜಾರಿಗೆ ತಂದಿದ್ದು, ಈ ಯೋಜನೆಯ ಪ್ರಯೋಜನವನ್ನು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ವ್ಯಕ್ತಿಗಳಿಗೆ ಮಾತ್ರ ಪಡೆದುಕೊಳ್ಳಬಹುದು. ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ಮಹಿಳೆಯರು ಬೇರೆ ಜಾತಿಯ ಪುರುಷರನ್ನು ವಿವಾಹವಾದರೆ, ರೂ. 3,00,000 ಪ್ರೋತ್ಸಾಹಧನವನ್ನು ನೀಡಲಾಗುವುದು. ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ಪುರುಷರು ಬೇರೆ ಜಾತಿಯ ಮಹಿಳೆಯರನ್ನು ವಿವಾಹವಾದರೆ, ರೂ. 2,50,000 ಪ್ರೋತ್ಸಾಹಧನವನ್ನು ನೀಡಲಾಗುವುದು.

ಯೋಜನೆಯ ಉದ್ದೇಶ: Inter Caste Marriage Scheme In Karnataka

ಕರ್ನಾಟಕ ಸರ್ಕಾರವು ಸಮಾಜದಲ್ಲಿ ಜಾತಿ ಭೇದಭಾವವನ್ನು ತಡೆಯಲು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಕ್ತಿಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಬೆಂಬಲವನ್ನು ನೀಡಲು, ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯನ್ನು ಜಾರಿಗೆ ತಂದಿದೆ.

ಯೋಜನೆಯ ಪ್ರಯೋಜನ:

ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯಿಂದಾಗಿ ವಿವಾಹವಾದ ದಂಪತಿಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲಾಗುವುದು ಮತ್ತು ಸ್ವಾವಲಂಬಿ ಜೀವನವನ್ನು ನಡೆಸಲು ಜೊತೆಗೆ ಆರ್ಥಿಕ ಸಹಾಯದಿಂದಾಗಿ ದಂಪತಿಗಳು ಹೊಸ ಜೀವನವನ್ನು ನಡೆಸಲು ಸಹಾಯಕಾರಿಯಾಗುವುದು.

ಯೋಜನೆಯ ಅನುಕೂಲಗಳು:

  • ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯಿಂದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳಿಗೆ ಉತ್ತಮ ಸ್ಥಾನಮಾನ ದೊರೆಯುವುದು.
  • ಜಾತಿ ತಾರತಮ್ಯವನ್ನು ತಡೆಯಬಹುದು.
  • ಸರ್ಕಾರವು ದಂಪತಿಗಳಿಗೆ ಹಣಕಾಸಿನ ನೆರವನ್ನು ನೀಡುತ್ತದೆ.
Inter Caste Marriage Scheme In Karnataka
Inter Caste Marriage Scheme In Karnataka

ಯೋಜನೆಯ ಅನಾನುಕೂಲಗಳು: Inter Caste Marriage Scheme In Karnataka

  • ಅನ್ಯಜಾತಿ ಮತ್ತು ಪರಿಶಿಷ್ಟ ಜಾತಿ/ಪಂಗಡಗಳ ನಡುವೆ ಕಲಹ ಉಂಟಾಗಬಹುದು.
  • ಅರ್ಜಿ ಸಲ್ಲಿಸಿದ ನಂತರ ಸರ್ಕಾರದ ಯೋಜನೆಯಡಿಯಲ್ಲಿ ಮಂಜೂರಾದ ಪ್ರೋತ್ಸಾಹಧನವನ್ನು ಪಡೆಯಲು ಹಲವು ತಿಂಗಳುಗಳು ಬೇಕಾಗುತ್ತದೆ.

ಅರ್ಹತಾ ಮಾನದಂಡ:

  • ಕರ್ನಾಟಕದ ನಿವಾಸಿಗಳಾಗಿರಬೇಕು.
  • ವಿವಾಹವಾದ ದಂಪತಿಗಳಲ್ಲಿ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯಾಗಿರಬೇಕು.
  • ವಿವಾಹ ನೋಂದಣಿ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ.
  • ದಂಪತಿಗಳ ವಾರ್ಷಿಕ ಆದಾಯ ರೂ. 5,00,000 ಕ್ಕಿಂತ ಕಡಿಮೆ ಇರಬೇಕು.
  • ವಧುವಿನ ವಯಸ್ಸು ಕನಿಷ್ಠ 18, ವರನ ವಯಸ್ಸು ಕನಿಷ್ಠ 21 ಆಗಿರಬೇಕು.

ಅಗತ್ಯ ದಾಖಲೆಗಳು:

  • ವಿವಾಹ ನೋಂದಣಿ ಪ್ರಮಾಣಪತ್ರ
  • ವಧು ವರರ ಆಧಾರ್ ಕಾರ್ಡ್
  • ಜಾತಿ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಖಾತೆಯ ವಿವರ
  • ವಿವಾಹದ ಫೋಟೋ

ಅರ್ಜಿ ಸಲ್ಲಿಸುವ ವಿಧಾನ: Inter Caste Marriage Scheme In Karnataka

  • ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ http://swdservices.karnataka.gov.in/ ಗೆ ಭೇಟಿನೀಡಿ
  • ನೋಂದಣಿ ಆಯ್ಕೆಯನ್ನು ಕ್ಲಿಕ್ ಮಾಡಿ.
  • ನಂತರ ಆಧಾರ್ ಸಂಖ್ಯೆಯಿಂದ ನೋಂದಾಯಿಸಿಕೊಂಡು ಅಗತ್ಯ ಮಾಹಿತಿಗಳನ್ನು ಭರ್ತಿಮಾಡಿ
  • ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ
  • ಅಗತ್ಯವಿದ್ದರೆ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ

ತೀರ್ಮಾನ:

ಕರ್ನಾಟಕ ಸರ್ಕಾರವು ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯನ್ನು ಜಾರಿಗೆ ತಂದಿದ್ದು, SC/ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ವಿವಾಹವಾದ ದಂಪತಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ವಿವಾಹವಾದ 18 ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಿ.


ಇತರ ಯೋಜನೆಯ ಲಿಂಕುಗಳು :

ಉಚಿತ ಲ್ಯಾಪ್ಟಾಪ್ ಯೋಜನೆ 2026

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ

Leave a Reply

Your email address will not be published. Required fields are marked *