SSLC/PUC ಆದ್ರೆ ಸಾಕು! ಅಂಗನವಾಡಿಯಲ್ಲಿ ಸರ್ಕಾರಿ ಉದ್ಯೋಗಾವಕಾಶ ಒಟ್ಟು 412 ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!

anganwadi recruitment kalaburagi

ಸರ್ಕಾರಿ ಉದ್ಯೋಗ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ತುಂಬಾ ಜನ ಈ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಅಂತ ಕನಸು ಕಾಣ್ತಾ ಇರುತ್ತಾರೆ, ಅದರಲ್ಲೂ ಮಹಿಳೆಯರಿಗೆ ಸರ್ಕಾರಿ ಉದ್ಯೋಗವಕಾಶ ಅಂದರೆ ತುಂಬಾನೇ ಇಷ್ಟ, ಇದೀಗ ಮಹಿಳೆಯರಿಗೆ ಸಿಹಿ ಸುದ್ದಿ ಸರ್ಕಾರ ಕೊಟ್ಟಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ (anganwadi recruitment kalaburagi) ಖಾಲಿ ಇರುವಂತಹ ಭರ್ಜರಿ 412 ಅಂಗನವಾಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನೀವು ಕೇವಲ ಎಸ್ ಎಸ್ ಎಲ್ ಸಿ (SSLC), ಪಿಯುಸಿ (PUC) ಪಾಸಾದ ಮಹಿಳೆಯರು ಆಗಿದ್ದರೆ ನಿಮ್ಮೂರಿನಲ್ಲಿ ಇದುಕೊಂಡು ಆರ್ಥಿಕವಾಗಿ ಸ್ವಾಲಂಬಿ ಜೀವನವನ್ನು ನಡೆಸಲು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ ಈ ಸರ್ಕಾರಿ ಉದ್ಯೋಗಕ್ಕೆ ಈಗಲೇ ಅರ್ಜಿಯನ್ನು ಸಲ್ಲಿಸಿ.

ಈ ನೇಮಕಾತಿಯ ಬಗ್ಗೆ ಸಂಪೂರ್ಣವಾದ ಮಾಹಿತಿ, ತಾಲೂಕುವಾರು ಹುದ್ದೆಯ ವಿವರ, ಹುದ್ದೆಗಳ ಒಟ್ಟು ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಪೂರ್ತಿಯಾಗಿ ಕೊನೆತನಕ ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಸದುಪಯೋಗಪಡಿಸಿಕೊಳ್ಳಿ.

anganwadi recruitment kalaburagi
anganwadi recruitment kalaburagi

ಅಂಗನವಾಡಿ ಹುದ್ದೆಗಳ ಅವಲೋಕನ:

ಕಲಬುರ್ಗಿ ಜಿಲ್ಲೆಯಾದ್ಯಂತ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಒಟ್ಟು 412 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

  • ಅಂಗನವಾಡಿ ಕಾರ್ಯಕರ್ತೆ : 89 ಹುದ್ದೆಗಳು
  • ಅಂಗನವಾಡಿ ಸಹಾಯಕಿ : 323 ಹುದ್ದೆಗಳು

ಯಾವ ಜಿಲ್ಲೆಯ ತಾಲೂಕಿನಲ್ಲಿ ನೇಮಕಾತಿ ನಡೆಯುತ್ತಿದೆ?

ಕಲ್ಬುರ್ಗಿ ಜಿಲ್ಲೆಯ ಒಟ್ಟು 9 ತಾಲೂಕಿನ ಅಂಗನವಾಡಿಗಳಲ್ಲಿ ನೇಮಕಾತಿ ನಡೆಯುತ್ತಿದ್ದು ಈ ಹುದ್ದೆಗಳ ತಾಲೂಕುವಾರು ವಿವರ ಈ ಕೆಳಗಿನಂತಿದೆ.

ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆಗಳಿವೆ?

ಯಾರಿಗೆಲ್ಲ ಅರ್ಜಿ ಸಲ್ಲಿಸಲು ಅರ್ಹತೆ ಇದೆ:

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು.

  • ಶೈಕ್ಷಣಿಕ ವಿದ್ಯಾರ್ಹತೆಯ ವಿವರ:
    • ಅಂಗನವಾಡಿ ಕಾರ್ಯಕರ್ತೆ: PUC (12ನೇ ತರಗತಿ) ಉತ್ತೀರ್ಣರಾಗಿರಬೇಕು ಮತ್ತು SSLC ಯಲ್ಲಿ ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಒಂದು ವಿಷಯವನ್ನು ಓದಿರಬೇಕು.
    • ಅಂಗನವಾಡಿ ಸಹಾಯಕಿ: ಕನಿಷ್ಠ SSLC (10ನೇ ತರಗತಿ) ಉತ್ತೀರ್ಣರಾಗಿರಬೇಕು.
  • ವಯೋಮಿತಿ ಎಷ್ಟಿರಬೇಕು?
    • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರ್ಗಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳ
    • ಕನಿಷ್ಠ ವಯಸ್ಸು : 19 ವರ್ಷಗಳು
    • ಗರಿಷ್ಠ ವಯಸ್ಸು : 35 ವರ್ಷಗಳು
  • ವಯೋಮಿತಿ ಸಡಿಲಿಕೆ ವಿವರ:
    • PH ಅಭ್ಯರ್ಥಿಗಳು: 10 ವರ್ಷಗಳು
  • ವಿಶೇಷ ಸೂಚನೆ:
    • ಕಲ್ಬುರ್ಗಿ ಜಿಲ್ಲೆಯ ತಾಲೂಕುಗಳ ಆಯಾ ಗ್ರಾಮದ ಅಥವಾ ಊರಿನ ಅಂಗನವಾಡಿ ಕೇಂದ್ರದ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.

ಅರ್ಜಿ ಶುಲ್ಕದ ಬಗ್ಗೆ:

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲ್ಬುರ್ಗಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ಕಲ್ಪಿಸಲಾಗಿದ್ದು ಬೇರೆ ಯಾವುದೇ ರೀತಿಯ ಅರ್ಜಿ ಸಲ್ಲಿಸುವ ವಿಧಾನವನ್ನು ತಿರಸ್ಕರಿಸಲಾಗುತ್ತದೆ.

  • ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಕಲ್ಬುರ್ಗಿ ಜಿಲ್ಲೆಯನ್ನ ಆಯ್ಕೆ ಮಾಡಿಕೊಳ್ಳಿ ನಂತರ
  • ನಿಮ್ಮ ತಾಲೂಕು ಮತ್ತು ನಿಮ್ಮ ಗ್ರಾಮ ಅಥವಾ ವಾರ್ಡ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಆಯ್ಕೆ ಮಾಡಿ
  • ಕೇಳಲಾಗಿರುವ ಎಲ್ಲಾ ಮಾಹಿತಿಯನ್ನು ತಪ್ಪಿಲ್ಲದೆ ಭರ್ತಿ ಮಾಡಿ
  • ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
  • ನಂತರ ಅರ್ಜಿಯನ್ನು ಸಬ್ಮಿಟ್ ಮಾಡಿ
  • ಬಂದಿರುವಂತಹ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದುಕೊಳ್ಳಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-02-2026
  • ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 16 ಮಾರ್ಚ್ 2026

WCD ಕಲಬುರಗಿ ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: karnemakaone.kar.nic.in

ಕಲ್ಬುರ್ಗಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಆಯಾ ಸ್ಥಳೀಯ ತಾಲೂಕು ಹಾಗೂ ಗ್ರಾಮ, ವಾರ್ಡ್ ಅಭ್ಯರ್ಥಿ ಆಗಿರಬೇಕು ಈ ಹುದ್ದೆಗಳ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಿ.

One thought on “SSLC/PUC ಆದ್ರೆ ಸಾಕು! ಅಂಗನವಾಡಿಯಲ್ಲಿ ಸರ್ಕಾರಿ ಉದ್ಯೋಗಾವಕಾಶ ಒಟ್ಟು 412 ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!

Leave a Reply

Your email address will not be published. Required fields are marked *