ನಮಸ್ಕಾರ ಸ್ನೇಹಿತರೆ, ನೀವೇನಾದರೂ ಕೇಂದ್ರ ಸರ್ಕಾರದ ಅಡಿಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹಾಗೂ ನೋನ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
AVNL Job Alert 2026
ಈ ಒಂದು ಸಂಸ್ಥೆಯಲ್ಲಿ ಒಟ್ಟು 1213 ಜೂನಿಯರ್ ಟೆಕ್ನಿಷಿಯನ್, ಜೂನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಕಾನ್ಸಲ್ಟೆಂಟ್ ಹಾಗೂ ಇನ್ನು ವಿವಿಧ ಹುದ್ದೆಗಳು ಖಾಲಿ ಇದ್ದು, ಸಂಬಂಧಿತ ವಿಭಾಗಗಳಲ್ಲಿ ಹಾಗೂ ಟ್ರೇಡ್ ಗಳಲ್ಲಿ ಐಟಿಐ, ಡಿಪ್ಲೊಮಾ, ಬಿಇ/ ಬಿಟೆಕ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂಬಂಧಿತ ಟ್ರೇಡ್ ಗೆ ಅನುಗುಣವಾಗಿ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ. ಹಾಗೂ ಮ್ಯಾನೇಜರ್ ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1,20,000/- ವರೆಗೆ ಅತ್ಯಾಕರ್ಷಕ ವೇತನವನ್ನು ಸಹ ನೀಡಲಾಗುತ್ತದೆ.

ಹುದ್ದೆಯ ಕಿರು ಮಾಹಿತಿ:
| ನೇಮಕಾತಿ ಸಂಸ್ಥೆಯ ಹೆಸರು | ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ |
| ಹುದ್ದೆಗಳ ಹೆಸರು | ಜೂನಿಯರ್ ಟೆಕ್ನಿಷಿಯನ್, ಜೂನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಕನ್ಸಲ್ಟೆಂಟ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 1213 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-07-2026 |
| ಅಧಿಕೃತ ವೆಬ್ಸೈಟ್ ಲಿಂಕ್ | https://www.avnl.co.in/ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಸಂಸ್ಥೆಯು ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್, ಜೂನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಕನ್ಸಲ್ಟೆಂಟ್ ಸೇರಿದಂತೆ ಒಟ್ಟು 1213 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಆಯ್ಕೆದ ಅಭ್ಯರ್ಥಿಗಳಿಗೆ ಮಾಸಿಕ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗಿದೆ.
ಹುದ್ದೆಯ ವಿವರ:
ಆರ್ಮರ್ಡ್ ವೆಹಿಕಲ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹಾಗೂ ನೋನ್ ಎಕ್ಸಿಕ್ಯೂಟಿವ್ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
- ಎಕ್ಸಿಕ್ಯೂಟಿವ್ ಹುದ್ದೆಗಳು:
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಅಸಿಸ್ಟೆಂಟ್ ಮ್ಯಾನೇಜರ್ | 4 ಹುದ್ದೆಗಳು |
| ಹಿರಿಯ ಅಧಿಕಾರಿಗಳು (ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಕನ್ಸಲ್ಟೆಂಟ್) | 6 ಹುದ್ದೆಗಳು |
| ಡೆಪ್ಯೂಟಿ ಮ್ಯಾನೇಜರ್ | 33 ಹುದ್ದೆಗಳು |
| ಜೂನಿಯರ್ ಮ್ಯಾನೇಜರ್ | 165 ಹುದ್ದೆಗಳು |
- ನೋನ್ ಎಕ್ಸಿಕ್ಯೂಟಿವ್:
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಜೂನಿಯರ್ ಟೆಕ್ನಿಷಿಯನ್ | 1,005 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಅಸಿಸ್ಟೆಂಟ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ ಬಿಇ ಅಥವಾ ಬಿಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು.
- ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಟ್ರೇಡ್ ಗಳಲ್ಲಿ ತಾಂತ್ರಿಕ ಅರ್ಹತೆಯನ್ನು ಹೊಂದಿರಬೇಕು ಹಾಗೂ ಹುದ್ದೆಗೆ ಅನುಗುಣವಾಗಿ ಸಂಬಂಧಿತ ಕ್ಷೇತ್ರದಲ್ಲಿ 15 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಣಕಾಸು ಮತ್ತು ಲೆಕ್ಕಪರಿಶೋಧನೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕನಿಷ್ಠ 10 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ ಬಿಇ, ಬಿಟೆಕ್ ಅಥವಾ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
- ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸಂಬಂಧಿತ ಟ್ರೇಡ್ ಗಳಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ ವಿವರ:
- ಜೂನಿಯರ್ ಟೆಕ್ನಿಷಿಯನ್, ಜೂನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಸೀನಿಯರ್ ಮ್ಯಾನೇಜರ್, ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ, ಡೆಪ್ಯುಟಿ ಜನರಲ್ ಮ್ಯಾನೇಜರ್, ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 65 ವರ್ಷ ಮೀರಿರದಂತೆ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಸರ್ಕಾರದ ನಿಯಮಾವಳಿಗಳ ಪ್ರಕಾರ ವಿವರ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
- ಮಾಜಿ ಸೈನಿಕ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ಹುದ್ದೆಗಳು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ಹುದ್ದೆಗಳು
- ಅಂಗವಿಕಲ ಅಭ್ಯರ್ಥಿಗಳಿಗೆ: 10 ಹುದ್ದೆಗಳು
ಅರ್ಜಿ ಶುಲ್ಕ:
- ಮಾಜಿ ಸೈನಿಕ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ, ಇಡಬ್ಲ್ಯೂಎಸ್ ಒಬಿಸಿ ಅಭ್ಯರ್ಥಿಗಳಿಗೆ ರೂ. 300/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸುವುದಿಲ್ಲ.
ವೇತನ ಶ್ರೇಣಿ:
- ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 21,000/- ವೇತನವನ್ನು ನೀಡಲಾಗುತ್ತದೆ.
- ಜೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 30,000/- ವೇತನವನ್ನು ನೀಡಲಾಗುತ್ತದೆ.
- ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 40,000/- ವೇತನವನ್ನು ನೀಡಲಾಗುತ್ತದೆ.
- ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 50,000/- ವೇತನವನ್ನು ನೀಡಲಾಗುತ್ತದೆ.
- ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 70,000/- ವೇತನವನ್ನು ನೀಡಲಾಗುತ್ತದೆ.
- ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 80,000/- ವೇತನವನ್ನು ನೀಡಲಾಗುತ್ತದೆ.
- ಅಡಿಷನಲ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1,00,000/- ವೇತನವನ್ನು ನೀಡಲಾಗುತ್ತದೆ.
- ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1,20,000/- ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಶೈಕ್ಷಣಿಕ ಪ್ರಮಾಣಪತ್ರ
- ಶೈಕ್ಷಣಿಕ ಅಂಕಪಟ್ಟಿ
- ಜಾತಿ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅನುಭವ ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ಕೆರಿಯರ್ ವಿಭಾಗದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಮೂಲ ವಿವರಗಳನ್ನು ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ರಿಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ಹುದ್ದೆಗೆ ಸಂಬಂದಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ವಿವರ, ಅನುಭವ ವಿವರ, ವೈಯಕ್ತಿಕ ವಿಚಾರ ಸೇರಿದಂತೆ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಈ ಮೇಲೆ ನೀಡಲಾದ ಎಲ್ಲ ದಾಖಲೆಗಳನ್ನು ಅಪ್ಲೋಡ್ ಮಾಡಿ ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
- ಭರ್ತಿ ಮಾಡಿರುವ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಂತರ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
| ವಿವರಗಳು | ದಿನಾಂಕ |
| ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ | 30-06-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 11-07-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-07-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಫಾರ್ಮ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ಸಂಸ್ಥೆಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, AVNL ಅಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂದಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಇಲ್ಲಿ ಕ್ಲಿಕ್ ಮಾಡಿ: HPCL ನೇಮಕಾತಿ 2026: 116 ಹುದ್ದೆಗಳ ಭರ್ತಿ – ₹2.20 ಲಕ್ಷವರೆಗೆ ವೇತನ! ಡಿಪ್ಲೊಮಾ, ಪದವಿ ಹಾಗೂ ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ

