2026 Vacancy: 56,000+ ನೇಮಕಾತಿ ಪ್ರಕಟಣೆ! ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು? –ಇಲ್ಲಿದೆ ಪೂರ್ಣ ಮಾಹಿತಿ!

Big Recruitment

Big Recruitment: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ರಾಜ್ಯ ಸರ್ಕಾರವು ಒಟ್ಟು 56,000 ಕ್ಕೂ (Big Recruitment) ಹೆಚ್ಚು ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಮೊನ್ನೆ ನಡೆದ ಅಂದರೆ 26-02-2026 ರಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ವಿಷಯಗಳ ಕುರಿತು ನಿರ್ಣಯ ಕೈಗೊಂಡಿದ್ದು 32,132 ಕಲ್ಯಾಣ ಇಲಾಖೆಯ ಬ್ಯಾಕ್ ಲಾಗ್ ಹುದ್ದೆಗಳ ಹಾಗೂ 24,300 ಹುದ್ದೆಗಳು ಕಂದಾಯ ಇಲಾಖೆ, ಗೃಹ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸುವ ಮೂಲಕ ಸಾವಿರಾರು ಉದ್ಯೋಗಾಕಾಂಕ್ಷಿಗಳ ಕನಸಿಗೆ ನೀರೆರೆಚುವ ಪ್ರಯತ್ನ ಮಾಡಿದೆ.

Big Recruitment Details in Kannada

ಸಾವಿರಾರು ಯುವಕ ಯುವತಿಯರು ಉದ್ಯೋಗವಿಲ್ಲದೆ ಖಾಲಿ ಕುಳಿತಿರುವುದನ್ನು ಗಮನಿಸಿದ ರಾಜ್ಯ ಸರ್ಕಾರವು ಮುಂದಿನ 30 ದಿನಗಳ ಒಳಗಾಗಿ ನೇರ ನೇಮಕಾತಿ ಮೂಲಕ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ. ಈ ಹುದ್ದೆಗಳ ನೇಮಕಾತಿಯು ಶೇಕಡಾ 50% ಅಷ್ಟು ಮೀಸಲಾತಿ ಆಧಾರಿತ ನಡೆಯಲಿದ್ದು, ಅವುಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಹಂತದಲ್ಲಿ ತಿಳಿಸುಕೊಳ್ಳೋಣ.

ಇದೇ ರೀತಿಯ ಇನ್ನಷ್ಟು ಹೊಸ ಹೊಸ ವಿಷಯಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕಕ್ಕೆ ಭೇಟಿ ನೀಡಿ.

Big Recruitment
Big Recruitment

ಪ್ರಮುಖ ಹೈಲೈಟ್ಸ್:

1. ಮೊನ್ನೆ 26-02-2026 ರಲ್ಲಿ ನಡೆದ ಸಚಿವ ಸಂಪುಟದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ.
2. 50% ಮೀಸಲಾತಿ ಅನ್ವಯ ನೇಮಕಾತಿ.
3. ಮುಂದಿನ 30 ದಿನಗಳ ಒಳಗೆ ಹುದ್ದೆಗಳ ಭರ್ತಿ (Big Recruitment) ಗೆ ಅವಕಾಶ.

56,432 ಹುದ್ದೆಗಳ ಸಂಕ್ಷಿಪ್ತ ವಿವರ:

ರಾಜ್ಯ ಸರ್ಕಾರವು ಮೊನ್ನೆ 26-02-2026 ರಲ್ಲಿ ನಡೆಸಿದ ಸಚಿವ ಸಂಪುಟದಲ್ಲಿ ತಿಳಿಸಿರುವಂತೆ, KEA ಹಾಗೂ KPSC 4,409 ಹುದ್ದೆಗಳ ನೇಮಕಾತಿ ಈಗಾಗಲೇ ಪೂರ್ಣಗೊಂಡಿದ್ದು, 24,300 ಹುದ್ದೆಗಳು ಆರ್ಥಿಕ ಇಲಾಖೆಗೆ ಸಂಬಂಧಿಸಿದರೆ, ಇನ್ನು 32,132 ಹುದ್ದೆಗಳು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ನೇಮಕಾತಿಯು ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ನಡೆಯುತ್ತಲ್ಲದೆ, ಶೇಕಡಾ 50% ಅಷ್ಟು ನೇಮಕಾತಿಯು ಮೀಸಲಾತಿ ಆಧಾರಿತ ನಡೆಯುತ್ತದೆ. 50% ಮೀಸಲಾತಿಯಲ್ಲಿ SC ಅಭ್ಯರ್ಥಿಗಳಿಗೆ 15% ಮೀಸಲಾತಿಯನ್ನು ನಿಗದಿ ಪಡಿಸಲಾಗಿದೆ.

ಈ ಬೃಹತ್ ನೇಮಕಾತಿಗೆ ಮುಖ್ಯ ಕಾರಣಗಳು ಏನು?

ಇತ್ತೀಚಿಗೆ ಧಾರವಾಡದಲ್ಲಿ ಎಲ್ಲಾ ಉದ್ಯೋಗಾಕಾಂಕ್ಷಿಗಳು ಒಗ್ಗೂಡಿ ನಡೆದ ಬೃಹತ್ ಪ್ರತಿಭಟನೆಯನ್ನು ನಡೆಸಿತು. ಒಂದುವಾರದ ವರೆಗೆ ನಡೆಸಿದ ಪ್ರತಿಭಟನೆಯು ಸರ್ಕಾರವನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿತು. ಈ ಹೋರಾಟವು ಚುನಾವಣಾ ರಾಜಕೀಯದ ಮೇಲೆ ಪರಿಣಾಮ ಬೀರಬಹುದು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಮೊನ್ನೆ ಅಂದರೆ 26-02-2026 ರಲ್ಲಿ ನಡೆದ ಸಚಿವ ಸಂಪುಟದಲ್ಲಿ ಒಟ್ಟು 56,432 ಹುದ್ದೆಗಳ ನೇಮಕಾತಿಗೆ (Big Recruitment) ಅನುಮೋದನೆ ಸಿಕ್ಕಿದೆ.

ಇಲಾಖಾವಾರು ಹುದ್ದೆಗಳ ಶೈಕ್ಷಣಿಕ ಅರ್ಹತೆಗಳು:

1. ಕಲ್ಯಾಣ ಇಲಾಖೆ ಅಥವಾ ಬ್ಯಾಕ್ ಲಾಗ್ ಹುದ್ದೆಗಳಿಗೆ:

  • ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು:
    • ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
    • ವಿಜ್ಞಾನಿ ಅಥವಾ ಸಹಾಯಕ ಪ್ರಾದ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
  • ಗ್ರೂಪ್ ಸಿ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು:
    • ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಪಿಯೂಸಿ ಪೂರ್ಣಗೊಳಿಸಿರಬೇಕು ಅಥವಾ ಇದಕ್ಕೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
    • ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪಿಯೂಸಿ ಪೂರ್ಣಗೊಳಿಸಿರುವುದರ ಜೊತೆಗೆ ಕನ್ನಡ ಹಾಗೂ ಇಂಗ್ಲಿಷ್ ಟೈಪಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಗ್ರೂಪ್ ಡಿ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು:
    • ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು 7 ನೇ ತರಗತಿಯಲ್ಲಿ ಅಥವಾ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

2. ಕಂದಾಯ ಇಲಾಖೆಯ ವಿವಿಧ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆ:

  • ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪದವಿಯನ್ನು ಹೊಂದಿರಬೇಕು.
  • ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಪಿಯೂಸಿ ಪೂರ್ಣಗೊಳಿಸಿರಬೇಕು ಅಥವಾ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
  • ಗ್ರಾಮಾಡಳಿತ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಪಿಯೂಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

3. ಗೃಹ ಇಲಾಖೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಗಳು:

  • ಸುಬಿನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ.
  • ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಪಿಯೂಸಿ ಪೂರ್ಣಗೊಳಿಸಿರಬೇಕು ಅಥವಾ ಇದಕ್ಕೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಹುದ್ದೆಗಳಿಗೆ ಸಂಬಂಧಿಸಿದಂತೆ ವಯೋಮಿತಿ ವಿವರ:

ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೂ ಅರ್ಜಿ ಸಲ್ಲಿಸಬೇಕಾದರೆ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿಯನ್ನು ಹೊಂದಿರುವುದು ಕಡ್ಡಾಯ ಅದರಂತೆ ಆರ್ಥಿಕ ಇಲಾಖೆ ಹಾಗೂ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ವಯೋಮಿತಿ ವಿವರ ಈ ಕೆಳಗೆ ನೀಡಲಾಗಿದೆ.

  • ಕಂದಾಯ ಇಲಾಖೆ ಹಾಗೂ ಗೃಹ ಇಲಾಖೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ.
  • ಕಲ್ಯಾಣ ಇಲಾಖೆ ಅಥವಾ ಬ್ಯಾಕ್ಲಾಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷ.

ವೇತನ ಶ್ರೇಣಿ:

ಮೊನ್ನೆ ನಡೆದ ಸಚಿವ ಸಂಪುಟದಲ್ಲಿ ಒಟ್ಟು 56,432 ಹುದ್ದೆಗಳ ನೇಮಕಾತಿಗೆ ಅನುಮೋದನೆ ಸಿಕ್ಕಿದ್ದು, ಈ ನೇಮಕಾತಿಗಳು ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತದೆ. ಅದರಿಂದ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ವರ್ಗ ಹಾಗೂ ಇಲಾಖಾವಾರು ವೇತನ ನಿಗದಿ ಪಡಿಸಲಾಗಿದೆ. ಮುಖ್ಯವಾಗಿ ಈ ಎಲ್ಲ ವೇತನಗಳನ್ನು 7ನೇ ವೇತನ ಆಯೋಗದ ಅನ್ವಯ ನೀಡಲಾಗುತ್ತದೆ. ಅಂದಾಜು ವೇತನ ಎಷ್ಟಿರಬಹುದು ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

  • ಗ್ರೂಪ್ ಎ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭಿಕ ಹಂತದಲ್ಲೇ ಮಾಸಿಕ ವೇತನ ₹57,000 ವರೆಗೆ ನೀಡಲಾಗುತ್ತದೆ.
  • ಗ್ರೂಪ್ ಬಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ₹37,000 ದಿಂದ ₹70,000 ವೇತನವನ್ನು ನೀಡಲಾಗುತ್ತದೆ.
  • ಗ್ರೂಪ್ ಸಿ ಹುದ್ದೆಗಳಿಗೆ ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ₹27,000 ದಿಂದ ₹52,000 ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
  • ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹21,400 ದಿಂದ ₹36,000 ವೇತನವನ್ನು ನಿಗದಿಪಡಿಸಲಾಗಿದೆ.
    • ಈ ಮೇಲೆ ನೀಡಲಾದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವೇತನದ ಜೊತೆಗೆ ತುಟ್ಟಿ ಭತ್ಯೆ, ಆಹಾರ ಭತ್ಯೆ, ಮನೆ ಬಾಡಿಗೆಯ ಭತ್ಯೆ ಹಾಗೂ ಇನ್ನಿತರ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಹುದ್ದೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಹುದ್ದೆಗಳಿಗೆ ಮೀಸಲಾತಿ ಅನ್ವಯ ನೇಮಕ ಮಾಡಿಕೊಳ್ಳುವುದರಿಂದ ಈ ಕೆಳೆಗೆ ನೀಡಿರುವ ದಾಖಲೆಗಳು ಅಗತ್ಯವಾಗಿರುತ್ತದೆ.
    • ಕನ್ನಡ ಮಾಧ್ಯಮ ಪ್ರಮಾಣಪತ್ರ
    • ಗ್ರಾಮೀಣ ಅಭ್ಯರ್ಥಿ ಪ್ರಮಾಣಪತ್ರ
    • ಜಾತಿ ಮತ್ತು ಆದಾಯ ಪ್ರಮಾಣಪತ್ರ
    • ಹೈದರಾಬಾದ್ ಕರ್ನಾಟಕ ಪ್ರಮಾಣಪತ್ರ
  • ಶೈಕ್ಷಣಿಕ ಪ್ರಮಾಣಪತ್ರ
  • ಶೈಕ್ಷಣಿಕ ಅಂಕ ಪಟ್ಟಿ
  • ಆಧಾರ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಅಭ್ಯರ್ಥಿಯ ಸಹಿ
  • ಹಾಗೂ ಇತರೆ ದಾಖಲೆಗಳು

ಹುದ್ದೆಗೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

  • ಗ್ರೂಪ್ ಡಿ ಹಾಗೂ ಬ್ಯಾಕ್ಲಾಗ್ ಹುದ್ದೆಗಳಿಗೆ ಶೈಕ್ಷಣಿಕ ವರ್ಷಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ಮೆರಿಟ್ ಪಟ್ಟಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನಕ್ಕೆ ಕರೆಯುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
  • ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಿ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
  • ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದರೆ, ಲಿಖಿತ ಪರೀಕ್ಷೆಯನ್ನು ನಡೆಸುವ ಜೊತೆಗೆ ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದೈಹಿಕ ಸಹಿಷ್ಣುತಾ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:

ರಾಜ್ಯ ಸರ್ಕಾರವು 56,432 ಹುದ್ದೆಗಳ ನೇಮಕಾತಿಗೆ ಮುಂದಿನ 30 ದಿನಗಳ ಒಳಗೆ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸುವುದಾಗಿ ಮೊನ್ನೆ ನಡೆಸಿದ ಸಚಿವ ಸಂಪುಟದಲ್ಲಿ ತಿಳಿಸಿದ್ದು, ಅಧಿಸೂಚನೆಯನ್ನು ಹೊರಡಿಸಿದ ನಂತರವಷ್ಟೇ ಅರ್ಜಿ ಸಲ್ಲಿಸುವುದು ಹೇಗೆ? ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಸಾಮಾನ್ಯವಾಗಿ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ವಿವರಗಳುದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕಶೀಘ್ರದಲ್ಲೇ ನಿಗದಿತ ದಿನಾಂಕಗಳು ಪ್ರಕಟವಾಗಲಿದೆ
ಅರ್ಜಿ ಸಲ್ಲಿಸಲು ಮುಖ್ಯ ಕೊನೆಯ ದಿನಾಂಕಶೀಘ್ರದಲ್ಲೇ ನಿಗದಿತ ದಿನಾಂಕಗಳು ಪ್ರಕಟವಾಗಲಿದೆ

ಅಂತಿಮ ತೀರ್ಮಾನ:

ಕರ್ನಾಟಕ ಸರ್ಕಾರವು ಮೊನ್ನೆ ಅಂದರೆ 26-02-2026 ರಲ್ಲಿ ನಡೆದ ಸಚಿವ ಸಂಪುಟದಲ್ಲಿ ಒಟ್ಟು 56,432 ಹುದ್ದೆಗಳನ್ನು 50% ಮೀಸಲಾತಿ ಅನ್ವಯ ನೇಮಕಾತಿಗೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದ್ದು, ಮುಂದಿನ ಮೂವತ್ತು ದಿನಗಳ ಒಳಗೆ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸುವುದಾಗಿ ತಿಳಿಸಿದೆ. ಇದರಂತೆ ಮಾರ್ಚ್ ಕೊನೆಯ ವಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸುವ ಸಾಧ್ಯತೆಗಳಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಇಂದಿನಿಂದಲೇ ಸಿದ್ದತೆಯನ್ನು ಮಾಡಿಕೊಳ್ಳುವ ಮೂಲಕ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.

ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ನಂತರ ಈ ಹುದ್ದೆಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಒಂದು ವಾರದ ವರೆಗೆ ನಡೆಸಿದ ಬೃಹತ್ ಪ್ರತಿಭಟನೆಯ ಫಲವಾಗಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.

ರಾಜ್ಯ ಸರ್ಕಾರವು ಒಟ್ಟು 56,432 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ.

ರಾಜ್ಯ ಸರ್ಕಾರವು 26-02-2026 ರಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿತು.

ಹೌದು, ಶೇಕಡಾ 50% ಹುದ್ದೆಗಳನ್ನು ಮೀಸಲಾಗಿ ಅನ್ವಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.


ಇತರೆ ಪ್ರಮುಖ ಲಿಂಕುಗಳು:

Leave a Reply

Your email address will not be published. Required fields are marked *