ನಮಸ್ಕಾರ ರೈತಭಾಂದವರೇ, ನೀವೇನಾದರೂ ನಿಮ್ಮ ಕೃಷಿ ಭೂಮಿಯಲ್ಲಿ ಕುರಿ ಮತ್ತು ಮೇಕೆ ಶೆಡ್ ನಿರ್ಮಾಣ ಮಾಡಬೇಕೆಂದಿದ್ದೀರಾ? ಹೈನುಗಾರಿಕೆ ಹಾಗೂ ಪಶುಸಂಗೋಪನೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ!
Goat Shed Subsidy in Kannada
ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಮೇಕೆ ಶೆಡ್ (Goat Shed) ನಿರ್ಮಾಣ ಮಾಡುವುವರಿಗೆ ಭಾರೀ ಮೊತ್ತದ ಸಬ್ಸಿಡಿ ಸಹಾಯಧನವನ್ನು ನೀಡುತ್ತಿದ್ದು, ನೀವೇನಾದರೂ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬೇಕೆಂದಿದ್ದರೆ ನಿಮಗೆ ಇದೊಂದು ಸುವರ್ಣಾವಕಾಶವಾಗಿದೆ.
ಕುರಿ ಮೇಕೆ ಶೆಡ್ (Goat Shed) ನಿರ್ಮಾಣಕ್ಕೆ ಸಹಾಯಧನವನ್ನು ಪಡೆದುಕೊಳ್ಳಲು ಸದ್ಯಕ್ಕೆ ಚಾಮರಾಜನಗರ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ನಂತರದ ದಿನಗಳಲ್ಲಿ ಇತರ ಜಿಲ್ಲೆಗಳಿಗೂ ವಿಸ್ತರಣೆ ಆಗಲಿದೆ. ಹಾಗಾಗಿ ಈ ಸೌಲಭ್ಯವನ್ನು ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು? ಎಷ್ಟು ಸಬ್ಸಿಡಿ ಸಹಾಯಧನ ಸಿಗಲಿದೆ? ಯಾರು ಅರ್ಹರು ಎನ್ನುವುದನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಿ. ನಂತರದ ದಿನಗಳಲ್ಲಿ ನೀವು ಅರ್ಜಿ ಸಲ್ಲಿಸಬೇಕಾದರೆ ಈ ಮಾಹಿತಿ ಹೆಲ್ಪ್ ಆಗಬಹುದು.
ನಂತರದ ದಿನಗಳಲ್ಲಿ ನಿಮ್ಮ ಜಿಲ್ಲೆಗಳಿಗೂ ಕೂಡ ಈ ಒಂದು ಅವಕಾಶ ಬಂದರೆ, ಅವುಗಳ ಅಪ್ಡೇಟ್ ಗಾಗಿ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕಕ್ಕೆ ಭೇಟಿ ನೀಡಿ.

ಪ್ರಮುಖ ಹೈಲೈಟ್ಸ್:
| 1. ಕರ್ನಾಟಕ ಸರ್ಕಾರದಿಂದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಡಿಯಲ್ಲಿ ಕುರಿ ಮತ್ತು ಮೇಕೆ ಶೆಡ್ (Goat Shed) ನಿರ್ಮಾಣಕ್ಕೆ ₹67,000 ಸಹಾಯಧನ. 2. ಈಗಾಗಲೇ ಪಶುಸಂಗೋಪನೆಯಲ್ಲಿ ತೊಡಗಿದ ರೈತರು, ಕೃಷಿ ಕಾರ್ಮಿಕರು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ದಿನಗೂಲಿ ಕಾರ್ಮಿಕರು ಈ ಸೌಲಭ್ಯ ಪಡೆಯಲು ಅರ್ಹರು. 3. ಅರ್ಹ ಫಲಾನುಭವಿಗಳಿಗೆ 10+1 ಮಾದರಿಯಲ್ಲಿ ಕುರಿ ಮತ್ತು ಮೇಕೆ ಘಟಕ ಸ್ಥಾಪನೆಗೆ ಆದ್ಯತೆ. 4. ಗ್ರಾಮೀಣ ಭಾಗದ ರೈತರ ಆದಾಯ ಹೆಚ್ಚಿಸುವುದು ಈ ಯೋಜನೆಯ ಗುರಿ. |
ಏನಿದು ಕುರಿ ಮತ್ತು ಮೇಕೆ ಶೆಡ್ ನಿರ್ಮಾಣ ಸಹಾಯಧನ ಯೋಜನೆ?
ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಡಿಯಲ್ಲಿ ಗ್ರಾಮೀಣ ಭಾಗದ ರೈತರಿಗೆ ಹಾಗೂ ನಿರುದ್ಯೋಗಿ ಯುವಕರಿಗೆ ಕುರಿ ಮತ್ತು ಮೇಕೆ ಶೆಡ್ ನಿರ್ಮಾಣಕ್ಕೆ ಭಾರೀ ಸಹಾಯಧನವನ್ನು ಒದಗಿಸುವ ಮೂಲಕ ಅವರು ಸ್ಥಿರ ಆದಾಯವನ್ನು ಗಳಿಸಿ ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕಲು ಅವಕಾಶ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಈ ಒಂದು ಯೋಜನೆಯು ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗಳೆಂಬ ಎರಡು ವಿಭಾಗಗಳಡಿಯಲ್ಲಿ ಜಾರಿಗೊಂಡಿದ್ದು, ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳು 10 ಹೆಣ್ಣು ಹಾಗೂ 1 ಗಂಡು ಕುರಿ ಅಥವಾ ಮೇಕೆಯನ್ನೊಳಗೊಂಡ ಘಟಕ ಸ್ಥಾಪನೆಗೆ ₹67,000 ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
ಯೋಜನೆಯ ಉದ್ದೇಶ:
ಕರ್ನಾಟಕ ಸರ್ಕಾರವು ಕುರಿ ಮತ್ತು ಮೇಕೆ ಶೆಡ್ (Goat Shed) ನಿರ್ಮಾಣಕ್ಕೆ ಭಾರೀ ಮೊತ್ತದ ಸಹಾಯಧನವನ್ನು ಒದಗಿಸುವುದರ ಹಿಂದಿನ ಉದ್ದೇಶವೇನು ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿಸಲಾಗಿದೆ.
- ಆರ್ಥಿಕ ಸಬಲೀಕರಣಕ್ಕೆ ಅವಕಾಶ:
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ, ಪಶುಸಂಗೋಪನೆಯಲ್ಲಿ ತೊಡಗಿರುವ ರೈತರಿಗೆ, ಕೃಷಿ ಕಾರ್ಮಿಕರಿಗೆ ಸ್ವಂತವಾಗಿ ಕುರಿ ಮತ್ತು ಮೇಕೆ ಶೆಡ್ ನಿರ್ಮಿಸಲು ಸಹಾಯಧನವನ್ನು ನೀಡುವ ಮೂಲಕ ಹೆಚ್ಚಿನ ಆದಾಯವನ್ನು ಗಳಿಸುವಂತೆ ಮಾಡಿ ಆರ್ಥಿಕ ಸಮಸ್ಯೆಗಳನ್ನು ತಡೆಗಟ್ಟುವುದು.
- ಮಾರುಕಟ್ಟೆಯ ಬೇಡಿಕೆಯನ್ನು ಪೂರೈಸುವುದು:
ಈ ಒಂದು ಯೋಜನೆಯಡಿಯಲ್ಲಿ ಉತ್ತಮ ಗುಣಮಟ್ಟದ ಕುರಿ ಮತ್ತು ಮೇಕೆಗಳನ್ನು ಸಾಕಲು ಉತ್ತೇಜನ ನೀಡುವ ಮೂಲಕ ಮಾಂಸ ಮತ್ತು ಉಣ್ಣೆಗಳ ಪ್ರಮಾಣವನ್ನು ಹೆಚ್ಚಿಸಿ ಮಾರುಕಟ್ಟೆಯ ಬೇಡಿಕೆಯನ್ನು ಪೂರೈಸುವುದು.
- ನಿರುದ್ಯೋಗ ಸಮಸ್ಯೆಗಳ ನಿವಾರಣೆ:
ಗ್ರಾಮೀಣ ಭಾಗದ ಎಷ್ಟೋ ಅಭ್ಯರ್ಥಿಗಳು ಉದ್ಯೋಗವಿಲ್ಲದೆ ಖಾಲಿ ಕುಳಿತಿದ್ದಾರೆ. ಅಂತಹವರಿಗೆ ಕುರಿ ಮತ್ತು ಮೇಕೆ ಶೆಡ್ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವ ಮೂಲಕ ಪಶುಸಂಗೋಪನೆ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ ಶಾಶ್ವತ ಉದ್ಯೋಗ ಕಲ್ಪಿಸುವುದು.
- ವೈಜ್ಞಾನಿಕ ಸಾಗಾಣಿಕೆಗೆ ಅವಕಾಶ:
ಅರ್ಹ ಫಲಾನುಭವಿಗಳಿಗೆ ಈ ಒಂದು ಯೋಜನೆಯಡಿಯಯಲ್ಲಿ ವೈಜ್ಞಾನಿಕವಾಗಿ ಸುಸಜ್ಜಿತ ಕುರಿ ಮತ್ತು ಮೇಕೆ ಶೆಡ್ ನಿರ್ಮಿಸಿಕೊಳ್ಳಲು ಅವಕಾಶವನ್ನು ಕಲ್ಪಿಸುವ ಮೂಲಕ ಸರಿಯಾದ ವಾತಾವರಣ ಹಾಗೂ ಸೌಲಭ್ಯಗಳಿಲ್ಲದೆ ಕುರಿ ಮತ್ತು ಮೇಕೆಗಳು ಮರಣಹೊಂದುವ ಪ್ರಮಾಣವನ್ನು ಕಡಿಮೆ ಮಾಡುವುದು.
ಯಾವ ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ?
ಕುರಿ ಮತ್ತು ಮೇಕೆ ಶೆಡ್ ನಿರ್ಮಾಣಕ್ಕೆ ಸದ್ಯಕ್ಕೆ ಹಾವೇರಿ, ಬಾಗಲಕೋಟೆ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಘಟಕಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳಬಹುದಾಗಿದೆ.
- ಹಾವೇರಿ ಜಿಲ್ಲೆ:
ಹಾವೇರಿ ಜಿಲ್ಲೆಗಳಲ್ಲಿ ಒಟ್ಟು 22 ಘಟಕಗಳನ್ನು ನಿರ್ಮಾಣ ಮಾಡಲು ಅವಕಾಶ ಕಲ್ಪಿಸಲಾಗಿದ್ದು,ಈ ಜಿಲ್ಲೆಗಳಲ್ಲಿ ರೈತರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಬಾಗಲಕೋಟೆ ಜಿಲ್ಲೆ:
ಬಾಗಲಕೋಟೆ ಜಿಲ್ಲೆಗಳಲ್ಲಿ SCP ಯೋಜನೆಯಡಿಯಲ್ಲಿ 18 ಘಟಕಗಳನ್ನು ಸ್ಥಾಪಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಜೊತೆಗೆ TCP ಯೋಜನೆಯಡಿಯಲ್ಲಿ 5 ಘಟಕಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ.
- ಚಾಮರಾಜನಗರ ಜಿಲ್ಲೆ:
ಚಾಮರಾಜನಗರ ಜಿಲ್ಲೆಗಳಲ್ಲಿ SCP ಯೋಜನೆಯಡಿಯಲ್ಲಿ ಒಟ್ಟು 16 ಘಟಕಗಳನ್ನು ಹಾಗೂ TCP ಯೋಜನೆಯಡಿಯಲ್ಲಿ 6 ಘಟಕಗಳನ್ನು ಸ್ಥಾಪಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಎಷ್ಟು ಸಹಾಯಧನ ಸಿಗಲಿದೆ?
ಕುರಿ ಮತ್ತು ಮೇಕೆ ಶೆಡ್ (Goat Shed) ನಿರ್ಮಾಣಕ್ಕೆ ಸಹಾಯಧನ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳು ಒಟ್ಟು ಘಟಕ ವೆಚ್ಚದಲ್ಲಿ 90% ವೆಚ್ಚವನ್ನು ಸರ್ಕಾರವೇ ಭರಿಸುವುದರಿಂದ ಕೇವಲ 10% ಸಹಾಯಧನವನ್ನು ಭರಿಸಿದರೆ ಸಾಕಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು?
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಅರ್ಜಿದಾರರು ಕರ್ನಾಟಕದ ಹಾವೇರಿ, ಚಾಮರಾಜನಗರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಸೇರಿದವರಾಗಿರಬೇಕು.
- ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿರಬೇಕು. ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರು, ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಟ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
- ಹಿಂದಿನ 5 ವರ್ಷಗಳಲ್ಲಿ ಯಾವುದೇ ಕುರಿ ಶೆಡ್ ಸಬ್ಸಿಡಿ ಸಹಾಯಧನವನ್ನು ಪಡೆದುಕೊಂಡಿರಬಾರದು.
- ಸಹಕಾರಿ ಸಂಘಗಳಲ್ಲಿ ಸದಸ್ಯತ್ವವನ್ನು ಹೊಂದಿರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಮೊದಲ ಆದ್ಯತೆಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್ ಪ್ರತಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- FRUITS ಐಡಿ
- ಸಹಕಾರಿ ಸಂಘದ ಸದಸ್ಯತ್ವ ಪ್ರಮಾಣಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಅರ್ಹ ಅಭ್ಯರ್ಥಿಗಳು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬೇಕಾದರೆ, ತಮ್ಮ ಹತ್ತಿರದ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯನ್ನು ಭೇಟಿ ನೀಡಿ. ಅಥವಾ ಸಹಾಯ ನಿರ್ದೇಶಕ ಕಚೇರಿಗೆ ಭೇಟಿ ನೀಡಿ.
- ಕುರಿ ಮತ್ತು ಮೇಕೆ ಶೆಡ್ ಸಹಾಯಧನಕ್ಕೆ ಸಂಬಂಧಿಸಿದ ಅರ್ಜಿ ಪ್ರತಿಯನ್ನು ಕೇಳಿ ಪಡೆದುಕೊಳ್ಳಿ.
- ನಂತರ, ಅರ್ಜಿ ಪ್ರತಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಿ. ನಂತರ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಿ.
ಅಂತಿಮ ತೀರ್ಮಾನ:
ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಭಾರೀ ಮೊತ್ತದ ಸಬ್ಸಿಡಿ ಸಹಾಯಧನವನ್ನು ನೀಡುತ್ತಿದ್ದು, ಈ ಯೋಜನೆಯಡಿಯಲ್ಲಿ ಪ್ರತಿ ಜಿಲ್ಲೆಗಳಿಗೂ ಲಾಭವನ್ನು ಪಡೆದುಕೊಳ್ಳಲು ಸೀಮಿತ ಗುರಿಗಳನ್ನು ನಿಗದಿಪಡಿಸಲಾಗಿದೆ. ಹಾಗೂ ಅರ್ಜಿ ಸಲ್ಲಿಸುವ ದಿನವೂ ಕೂಡ ಶೀಘ್ರದಲ್ಲಿ ಮುಕ್ತಾಯಗೊಳ್ಳಲಿದೆ. ಹಾಗಾಗಿ ನೀವೇನಾದರೂ ಕುರಿ ಹಾಗೂ ಮೇಕೆ ಶೆಡ್ ನಿರ್ಮಾಣ ಮಾಡಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂದಿದ್ದರೆ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಅರ್ಹ ಫಲಾನುಭವಿಗಳು ಕುರಿ ಮತ್ತು ಮೇಕ್ ಶೆಡ್ (Goat Shed) ನಿರ್ಮಾಣಕ್ಕೆ ಒಟ್ಟು ₹67,000 ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಫಲಾನುಭವಿಗಳು ಹಾಗೂ ಕೃಷಿ ಕಾರ್ಮಿಕರು ಅರ್ಹರಾಗಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಯೋಜನೆಯಡಿಯಲ್ಲಿ ₹67,000 ಸಹಾಯಧನ ಸಿಗಲಿದೆ.
ಪ್ರಮುಖ ಲಿಂಕುಗಳು:
- PUC: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಮುಂದೆ ಕಾಲೇಜಿನಲ್ಲೇ ಸಿಗಲಿದೆ ಉಚಿತ ಪಠ್ಯಪುಸ್ತಕಗಳು!
- LPG: ಸೌದಿ-ಇರಾನ್ ಸಂಘರ್ಷ, ಭಾರತದ ಅಡುಗೆ ಮನೆಗೆ ತಟ್ಟಿದ ಯುದ್ಧದ ಬಿಸಿ! ಸಿಲಿಂಡರ್ ಬುಕಿಂಗ್ಗೆ ಬಂತು ಹೊಸ ರೂಲ್ಸ್!
- Ganga Kalyana Scheme: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಿದ ಬಜೆಟ್! “ಬೋರ್ವೆಲ್ ಕೊರೆಯುವ ಮೊತ್ತವನ್ನು ₹1.5 ಲಕ್ಷದಿಂದ ₹2.5 ಲಕ್ಷ ಹೆಚ್ಚಳ
- RPLI: ಭಾರತೀಯ ಅಂಚೆ ಇಲಾಖೆಯ ಯೋಜನೆ, ಕೇವಲ ಹತ್ತು ವರ್ಷದ ಹೂಡಿಕೆಯಲ್ಲಿ ಲಕ್ಷಾಂತರ ರೂಪಾಯಿ ಲಾಭ ಸಿಗುತ್ತೆ!

