ನಮಸ್ಕಾರ ಸ್ನೇಹಿತರೆ, ಭಾರತ ಸರ್ಕಾರದ ಅಂಚೆ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ 2026 ನೇ ಸಾಲಿನಲ್ಲಿ ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
IPPB Recruitment 2026
ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 01-05-2026 ದಿಂದ ಆರಂಭಗೊಂಡಿದ್ದು 21-05-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಪ್ರಸ್ತುತ ಲೇಖನದಲ್ಲಿ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಇವುಗಳನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಕಿರು ಪರಿಚಯ:
| ನೇಮಕಾತಿ ಸಂಸ್ಥೆ | ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) |
| ಹುದ್ದೆಯ ಹೆಸರು | ಚೀಫ್ ಆಪರೇಟಿಂಗ್ ಆಫೀಸರ್ |
| ಹುದ್ದೆಗಳ ಸಂಖ್ಯೆ | 1 ಹುದ್ದೆ |
| ಉದ್ಯೋಗ ಸ್ಥಳ | ನವದೆಹಲಿ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-05-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿ ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರದಲ್ಲಿ ವೃತ್ತಿಪರ ಅನುಭವ ಹೊಂದಿರುವ ಕನಿಷ್ಠ 40 ವರ್ಷದಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಯ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಚೀಫ್ ಆಪರೇಟಿಂಗ್ ಆಫೀಸರ್ | 01 ಹುದ್ದೆ |
ಇದನ್ನು ಗಮನಿಸಿ: “ಈ ಹುದ್ದೆಯು ಒಪ್ಪಂದದ ಆಧಾರದ ಮೇಲೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಅವರ ಕಾರ್ಯಕ್ಷಮತೆ ಆಧರಿಸಿ ಇನ್ನು ಎರಡು ವರ್ಷ ವಿಸ್ತರಿಸಲಾಗುತ್ತದೆ.”
ಶೈಕ್ಷಣಿಕ ಅರ್ಹತೆ:
- ಚೀಫ್ ಆಪರೇಟಿಂಗ್ ಆಫೀಸರ್:
- ಶೈಕ್ಷಣಿಕ ಅರ್ಹತೆ:
- ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 55% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
- ಐಐಟಿ ಸಂಸ್ಥೆಗಳಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಹಾಗೂ
- ಎಂಕಾಂ, ಫೈನಾನ್ಸ್ ಅಥವಾ ಸ್ಟ್ಯಾಟಿಸ್ಟಿಕ್ಸ್ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೂ ವಿಶೇಷ ಆದ್ಯತೆ ನೀಡಲಾಗುತ್ತದೆ.
- ಅನುಭವ:
- ಅಭ್ಯರ್ಥಿಗಳು ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರದಲ್ಲಿ ಕನಿಷ್ಠ 18 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಈ ಅನುಭವದಲ್ಲಿ ಕನಿಷ್ಠ 10 ವರ್ಷಗಳ ಕಾಲ ಬ್ಯಾಂಕಿಂಗ್ ಕಾರ್ಯಾಚರಣೆ ಮತ್ತು ವ್ಯವಹಾರ ಪ್ರಕ್ರಿಯೆಗಳನ್ನು ನಿರ್ವಹಿಸಿರಬೇಕು.
- ಕಳೆದ ಐದು ವರ್ಷಗಳಲ್ಲಿ ಕನಿಷ್ಠ 2 ವರ್ಷಗಳ ಕಾಲ ಸಾರ್ವಜನಿಕ ಅಥವಾ ಖಾಸಗಿ ವಲಯದ ಬ್ಯಾಂಕ್ ಗಳಲ್ಲಿ ಎಂಡಿ ಅಥವಾ ಸಿಇಒ ಅವರಿಗಿಂತ ಎರಡು ಹಂತಗಳ ಕೆಳಗಿನ ಹುದ್ದೆಗಳಲ್ಲಿ ಕೆಲಸ ಮಾಡಿರಬೇಕು.
ವಯೋಮಿತಿ ವಿವರ:
ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 01-04-2026 ಕ್ಕೆ ಅನ್ವಯವಾಗುವಂತೆ ಲೆಕ್ಕಹಾಕಲಾಗುತ್ತದೆ.
- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 55 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ ವಿವರ:
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿಶೇಷ ವಯೋಮಿತಿ ಸಡಿಲಿಕೆ ಸೌಲಭ್ಯಗಳು ಲಭ್ಯವಿರುವುದಿಲ್ಲ.
ಅರ್ಜಿ ಶುಲ್ಕ:
- ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೆ ರೂ. 750/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದಾಗಿದ್ದು, ಇಂಟರ್ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಯುಪಿಐ ಬಳಸಿಕೊಂಡು ಪಾವತಿಸಬೇಕಾಗುತ್ತದೆ
- ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸುವುದಿಲ್ಲ.
ವೇತನ ಶ್ರೇಣಿ:
ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅವರು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವಗಳ ಆಧಾರದ ಮೇಲೆ ಬ್ಯಾಂಕಿಂಗ್ ಮಾರುಕಟ್ಟೆಯ ಮಾನದಂಡಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ವೇತನವನ್ನು ನೀಡಲಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಶೈಕ್ಷಣಿಕ ಪ್ರಮಾಣಪತ್ರ
- ಪದವಿ ಅಂಕಪಟ್ಟಿ
- ಅನುಭವ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಫೋಟೋ
- ವಯಸ್ಸಿನ ಪುರಾವೆ
- ಅಭ್ಯರ್ಥಿಗಳ ಸಹಿ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ:
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಅಲ್ಲಿ ಕರೆಂಟ್ ಒಪೆನಿಂಗ್ಸ್ ವಿಭಾಗವನ್ನು ಆಯ್ಕೆ ಮಾಡಿಕೊಂಡು ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಯ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ರೆಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರ ಹಾಗೂ ಇತರೆ ಅಗತ್ಯ ವಿವರಗಳನ್ನ ಭರ್ತಿ ಮಾಡಿ.
- ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ , ಎಡಗೈ ಹೆಬ್ಬೆರಳಿನ ಗುರುತು, ಹ್ಯಾಂಡ್ ರೈಟಿಂಗ್ ಡಿಕ್ಲೆರೇಷನ್ ಹಾಗೂ ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಂತರ, ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ನೆನಪಿರಲಿ ದಿನಾಂಕ 21-05-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವಗಳ ಆಧಾರದ ಮೇಲೆ ಮೊದಲ ಹಂತದ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.
- ಸೈಕೋಮೆಟ್ರಿಕ್ ಟೆಸ್ಟ್:
ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೈಕೋಮೆಟ್ರಿಕ್ ಟೆಸ್ಟ್ ಅನ್ನು ನಡೆಸಲಾಗುತ್ತದೆ. ಇದು ಅಭ್ಯರ್ಥಿಗಳ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹಾಗೂ ನಾಯಕತ್ವ ಗುಣವನ್ನು ಅಳೆಯಲಾಗುತ್ತದೆ.
- ಸಂದರ್ಶನ:
ಸೈಕೋಮೆಟ್ರಿಕ್ ಟೆಸ್ಟ್ ನಲ್ಲಿ ಭಾಗವಹಿಸಿದ ನಂತರ ಅಭ್ಯರ್ಥಿಗಳಿಗೆ 100 ಅಂಕಗಳ ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುತ್ತದೆ.
- ಅಂತಿಮ ಮೆರಿಟ್ ಪಟ್ಟಿ:
ಸೈಕೋಮೆಟ್ರಿಕ್ ಟೆಸ್ಟ್ ಗೆ 25% ಹಾಗೂ ಸಂದರ್ಶನಕ್ಕೆ 75% ವೈಟೇಜ್ ನೀಡಿ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
- ವೇತನ ಮಾತುಕತೆ:
ಅಂತಿಮ ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಟಿಸಿ ಮಾತುಕತೆಯನ್ನು ನಡೆಸಲಾಗುತ್ತದೆ. ಇದಕ್ಕೆ ಅಭ್ಯರ್ಥಿಗಳು ಒಪ್ಪದಿದ್ದರೆ ಮುಂದಿನ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
| ವಿವರಗಳು | ದಿನಾಂಕ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-05-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 21-05-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ದಿನಾಂಕ 21-05-2026 ರೊಳಗೆ ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ತಮ್ಮದಾಗಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-05-2026.
ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 40 ವರ್ಷದಿಂದ ಗರಿಷ್ಟ 55 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಇತರೆ ಪ್ರಮುಖ ಲಿಂಕುಗಳು:
- Court Job: ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ! SSLC / PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
- Bank Job: ಬಾಗಲಕೋಟೆ ಸಹಕಾರಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ 2026! ಏಪ್ರಿಲ್ 30 ಕೊನೆಯ ದಿನಾಂಕ । ಈಗಲೇ ಅಪ್ಲೈ ಮಾಡಿ
- High Court: ₹69,100 ವೇತನ! SSLC ಪಾಸ್ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಭರ್ಜರಿ ನೇಮಕಾತಿ । ಮೇ 21 ಕೊನೆಯ ದಿನಾಂಕ
- IFFCO: ₹65,000 ವೇತನ! ಪದವೀಧರ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ । ಏಪ್ರಿಲ್ 30 ಕೊನೆಯ ದಿನಾಂಕ

