RRB Group D : ರೂ18,000/- ನಿರುದ್ಯೋಗಿಗಳಿಗೆ ಗೋಲ್ಡನ್ ಚಾನ್ಸ್! ಅರ್ಜಿ ಸಲ್ಲಿಸೋ ಡೈರೆಕ್ಟ್ ಲಿಂಕ್ ಇಲ್ಲಿದೆ!

RRB Group D

RRB Group D : ನೀವೇನಾದರೂ ಉದ್ಯೋಗವಿಲ್ಲದೆ ಹಾಗೆ ಕುಳಿತಿದ್ದೀರಾ? ನೀವು ನಿರೀಕ್ಷಿಸಿದ ಸರ್ಕಾರಿ ಹುದ್ದೆ ನಿಮಗೆ ಸಿಗಲಿಲ್ಲವೇ? ಹಾಗಿದ್ದರೆ ಇಲ್ಲಿದೆ ನೋಡಿ ಗೋಲ್ಡನ್ ಚಾನ್ಸ್. ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು 2026 ರ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ D ಸಹಾಯಕ (RRB Group D)ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲ್ಲಿಸಲು ಅವಕಾಶವನ್ನು ಕಲ್ಪಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಇಂದೇ ಅರ್ಜಿ ಸಲ್ಲಿಸಿ.

RRB Group D In Kannada

RRB Group D

ರೈಲ್ವೆ ನೇಮಕಾತಿ ಮಂಡಳಿಯು ಒಟ್ಟು 21997 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಹೆಚ್ಚಿನ ಪದವಿ ಪಡೆದಿರುವ ಅಗತ್ಯವಿಲ್ಲದೆ ಕೇವಲ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದರೆ ಸಾಕಾಗುತ್ತದೆ. 10th ಪಾಸಾಗಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಭರ್ಜರಿ ಗುಡ್ ನ್ಯೂಸ್!

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 02, 2026 ರ ವರೆಗೆ ಅವಕಾಶವಿದೆ. ಈ ಹುದ್ದೆಗೆ ಸಂಬಂಧಿಸಿದ ವಯೋಮಿತಿ, ಅರ್ಹತಾ ಮಾನದಂಡ, ಅರ್ಜಿ ಶುಲ್ಕದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದ ಮೂಕಲ ತಿಳಿದುಕೊಳ್ಳಬಹುದಾಗಿದೆ. ಇನ್ನಷ್ಟು ಹುದ್ದೆಗಳ ಬಗೆಗಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕ ಕ್ಕೆ ಭೇಟಿ ನೀಡಿ.

ಹುದ್ದೆಯ ಕಿರು ನೋಟ:

ಸಂಸ್ಥೆಯ ಹೆಸರು ರೈಲ್ವೆ ನೇಮಕಾತಿ ಮಂಡಳಿ
ಹುದ್ದೆಗಳ ಹೆಸರು ಗ್ರೂಪ್ D ಸಹಾಯಕ ಹುದ್ದೆಗಳು (RRB Group D)
ಒಟ್ಟು ಹುದ್ದೆಗಳು 21997
ವಿದ್ಯಾರ್ಹತೆ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02-03-2026

ಹುದ್ದೆಯ ವಿಮರ್ಶೆ:

ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಒಟ್ಟು 21997 ಗ್ರೂಪ್ D ಸಹಾಯಕ ಹುದ್ದೆಗಳು ಖಾಲಿ ಇದ್ದು, ಕನಿಷ್ಠ 18 ರಿಂದ 33 ವರ್ಷ ವಯೋಮಿತಿ ಹೊಂದಿರುವ 10th ಅಥವಾ ITI ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಭಾರತದ ಯಾವುದೇ ಭಾಗದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ:

ಹುದ್ದೆಯ ಹೆಸರು ಒಟ್ಟು ಹುದ್ದೆಗಳ ಸಂಖ್ಯೆ
ಟ್ರ್ಯಾಕ್ ಮೇಂಟೇನರ್ ಗ್ರೇಡ್-IV13,187 ಹುದ್ದೆಗಳು
ಸಹಾಯಕ (ಯಾಂತ್ರಿಕ) 3,077 ಹುದ್ದೆಗಳು
ಸಹಾಯಕ (ವಿಜ್ಞಾನ ಮತ್ತು ತಂತ್ರಜ್ಞಾನ)2,020 ಹುದ್ದೆಗಳು
ಸಹಾಯಕ (ಇಂಜಿನಿಯರ್)1,993 ಹುದ್ದೆಗಳು
ಸಹಾಯಕ (ವಿದ್ಯುತ್)1,344 ಹುದ್ದೆಗಳು
ಪಾಯಿಂಟ್ಸ್ ಮನ್ 376 ಹುದ್ದೆಗಳು

ಅಭ್ಯರ್ಥಿಗಳ ವಿದ್ಯಾರ್ಹತೆ:

RRB ಅಧಿಕೃತ ಅಧಿಸೂಚನೆಯ (RRB Group D) ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಲ್ಲಿ 10ನೇ ತರಗತಿ ಅಥವಾ ITI ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ:

  • RRB ಗ್ರೂಪ್ D ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

  • ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷ
  • SC/ ST ಅಭ್ಯರ್ಥಿಗಳಿಗೆ : 5 ವರ್ಷ
  • PwBD (ಯುಆರ್/ ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ :10 ವರ್ಷ
  • PwBD (OBC) ಅಭ್ಯರ್ಥಿಗಳಿಗೆ :13 ವರ್ಷ
  • PwBD (SC/ ST) ಅಭ್ಯರ್ಥಿಗಳಿಗೆ :15 ವರ್ಷ

ಅರ್ಜಿ ಶುಲ್ಕ :

ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಪಾವತಿಬೇಕಾಗುತ್ತದೆ.

  • SC/ ST/ PwBD/ ಮಹಿಳೆಯರು/ ಮಾಜಿ ಸೈನಿಕರು/ ಅಲ್ಪಸಂಖ್ಯಾತರ ಅಭ್ಯರ್ಥಿಗಳು: ₹250/-
  • ಇತರೆ ಎಲ್ಲಾ ಅಭ್ಯರ್ಥಿಗಳು : 500/-
RRB Group D
RRB Group D

ಅಭ್ಯರ್ಥಿಗಳು ತಿಂಗಳಿಗೆ ಎಷ್ಟು ವೇತನ ಪಡೆದುಕೊಳ್ಳಬಹುದು?

RRB ಗ್ರೂಪ್ D (RRB Group D)ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳು 7ನೇ ವೇತನ ಆಯೋಗದ ಅನ್ವಯ ತಿಂಗಳಿಗೆ ₹18,000 ವೇತನ ಪಡೆದುಕೊಳ್ಳಬಹುದಾಗಿದೆ.

ವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ದಿನ ಭತ್ಯೆ, ಸಾರಿಗೆ ಭತ್ಯೆ ಹೀಗೆ ಇನ್ನು ಅನೇಕ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಆಯ್ಕೆ ಪ್ರಕ್ರಿಯೆ :

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ದೈಹಿಕ ದಕ್ಷತೆ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ :

RRB ಗ್ರೂಪ್ D ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದರೆ ಈ ಕೆಳಗಿನ ಹಂತಗಳನ್ನು ಅನುಸರಿಸಿ,

  • ಅಭ್ಯರ್ಥಿಗಳು RRB ಅಧಿಕೃತ ವೆಬ್ಸೈಟ್ http://indianrailways.gov.in/ ಗೆ ಭೇಟಿ ನೀಡಿ.
  • ವೃತ್ತಿ ವಿಭಾಗವನ್ನು ಆಯ್ಕೆ ಮಾಡಿ ಅಲ್ಲಿ ಅಪ್ಲಿಕೇಶನ್ ಫಾರ್ಮ್ ಪಡೆದುಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಭರ್ತಿಮಾಡಿ.
  • ಅಗತ್ಯ ದಾಖಲೆಗಳನ್ನು ಆಪ್ಲೋಡ್ ಮಾಡಿ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಿ.
  • ಅರ್ಜಿ ಸಲ್ಲಿಸಿದ ನಂತರ ಅಗತ್ಯವಿದ್ದರೆ ಅರ್ಜಿ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಪ್ರಮುಖ ದಿನಾಂಕಗಳು :

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31-01-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :02-03-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ :04-03-2026

ಪ್ರಮುಖ ಲಿಂಕುಗಳು :

ಅಧಿಕೃತ ವೆಬ್‌ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕುಗಳು ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ:

  • ಅಭ್ಯರ್ಥಿಯು ಭಾರತದಾದ್ಯಂತ ಇರುವ ಒಟ್ಟು 21 RRB ವಲಯಗಳಲ್ಲಿ ಯಾವುದಾದರೊಂದು ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
  • ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 1/3 ಅಂಕಗಳನ್ನು ಕಡಿತ ಗೊಳಿಸಲಾಗುವುದು.
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವರೆಗೂ ಕೂಡ ಫಲಿತಾಂಶಕ್ಕಾಗಿ ಕಾಯುತ್ತಿದ್ದರೆ, ಅಂತಹವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅಂತಿಮ ತೀರ್ಮಾನ:

ರೈಲ್ವೆ ನೇಮಕಾತಿ ಮಂಡಳಿಯು ಒಟ್ಟು 21997 ಗ್ರೂಪ್ D ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇತರೆ ಪ್ರಮುಖ ಲಿಂಕುಗಳು:

You can read other articles and tell me by commenting below which of these blogging information you liked.

Leave a Reply

Your email address will not be published. Required fields are marked *