ನಮಸ್ಕಾರ ಸ್ನೇಹಿತರೆ, ನೀವೇನಾದರೂ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನನ್ನು ಪ್ರಾರಂಭಿಸಬೇಕೆನ್ನುವ ಕನಸ್ಸು ಕಾಣುತ್ತಿದ್ದೀರಾ? ಅಥವಾ ಕೇಂದ್ರ ಸರ್ಕಾರದ ಅಡಿಯಲ್ಲಿ ಸ್ಥಿರ ಮತ್ತು ಗೌರವಯುತ ಉದ್ಯೋಗವನ್ನು ಪಡೆಯಬೇಕೆನ್ನುವ ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ.
RRB ALP Recruitment in Kannada
ಭಾರತೀಯ ರೈಲ್ವೆ ಇಲಾಖೆಯು 2026 ನೇ ಸಾಲಿನಲ್ಲಿ ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, SSLC ಜೊತೆಗೆ ತಾಂತ್ರಿಕ ಶಿಕ್ಷಣವನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) ಯು ಒಟ್ಟು 11,127 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 15-05-2026 ರಿಂದ ಆರಂಭಗೊಂಡು 14-06-2026 ಕ್ಕೆ ಕೊನೆಗೊಳ್ಳುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRB ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ ಹೆಸರು | ರೈಲ್ವೆ ನೇಮಕಾತಿ ಮಂಡಳಿ (RRB) |
| ಹುದ್ದೆಗಳ ಹೆಸರು | ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 11,127 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-06-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ವಿವರ:
ರೈಲ್ವೆ ನೇಮಕಾತಿ ಮಂಡಳಿ (RRB) ಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಗಳನ್ನು ವಿವಿಧ ವಲಯಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ವಲಯವಾರು ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್ | 06 ಹುದ್ದೆಗಳು |
| ಈಶಾನ್ಯ ರೈಲ್ವೆ | 105 ಹುದ್ದೆಗಳು |
| ದಕ್ಷಿಣ ಪಶ್ಚಿಮ ರೈಲ್ವೆ | 200 ಹುದ್ದೆಗಳು |
| ದಕ್ಷಿಣ ಪೂರ್ವ ಮಧ್ಯ ರೈಲ್ವೆ | 200 ಹುದ್ದೆಗಳು |
| ಪಶ್ಚಿಮ ರೈಲ್ವೆ | 214 ಹುದ್ದೆಗಳು |
| ದಕ್ಷಿಣ ರೈಲ್ವೆ | 250 ಹುದ್ದೆಗಳು |
| ಉತ್ತರ ಮಧ್ಯ ರೈಲ್ವೆ | 457 ಹುದ್ದೆಗಳು |
| ಪಶ್ಚಿಮ ಮಧ್ಯ ರೈಲ್ವೆ | 541 ಹುದ್ದೆಗಳು |
| ಉತ್ತರ ಪಶ್ಚಿಮ ರೈಲ್ವೆ | 600 ಹುದ್ದೆಗಳು |
| ಪೂರ್ವ ರೈಲ್ವೆ | 608 ಹುದ್ದೆಗಳು |
| ದಕ್ಷಿಣ ಮಧ್ಯ ರೈಲ್ವೆ | 674 ಹುದ್ದೆಗಳು |
| ಪೂರ್ವ ಮಧ್ಯ ರೈಲ್ವೆ | 700 ಹುದ್ದೆಗಳು |
| ಉತ್ತರ ರೈಲ್ವೆ | 740 ಹುದ್ದೆಗಳು |
| ಈಶಾನ್ಯ ಗಡಿ ರೈಲ್ವೆ | 1276 ಹುದ್ದೆಗಳು |
| ಮಧ್ಯ ರೈಲ್ವೆ | 1400 ಹುದ್ದೆಗಳು |
| ದಕ್ಷಿಣ ಪೂರ್ವ ರೈಲ್ವೆ | 1531 ಹುದ್ದೆಗಳು |
| ಪೂರ್ವ ಕರಾವಳಿ ರೈಲ್ವೆ | 1625 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
RRB ಅಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಜೊತೆಗೆ ಮಾನ್ಯತೆ ಪಡೆದ ವಿವಿಧ ಟ್ರೇಡ್ ಗಳ ಅಡಿಯಲ್ಲಿ ಐಟಿಐ, ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು ಹಾಗೂ ವೈದ್ಯಕೀಯ ಮಾನದಂಡಗಳನ್ನು ಪೂರೈಸಿರಬೇಕು.
ವಯೋಮಿತಿ ವಿವರ:
ರೈಲ್ವೆ ನೇಮಕಾತಿ ಮಂಡಳಿ (RRB) ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 01-07-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ವಿಭಿನ್ನ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ. ಅರ್ಜಿ ಶುಲ್ಕದ ಕುರಿತು ನಿಖರ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ವೇತನ ಶ್ರೇಣಿ:
ರೈಲ್ವೆ ನೇಮಕಾತಿ ಮಂಡಳಿಯ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ವೇತನವನ್ನು ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಪ್ರಾರಂಭಿಕ ಹಂತದಲ್ಲಿ ಮಾಸಿಕ ರೂ. 19,900/- ವೇತನವನ್ನು ನೀಡಲಾಗುತ್ತದೆ. ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- ಶೈಕ್ಷಣಿಕ ಪ್ರಮಾಣಪತ್ರ
- ಶೈಕ್ಷಣಿಕ ಅಂಕಪಟ್ಟಿ
- ಅಭ್ಯರ್ಥಿಗಳ ಸಹಿ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಜನ್ಮ ದಿನಾಂಕ ಪ್ರಮಾಣಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ಹಾಗೂ ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ.
- ನಂತರ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶೈಕ್ಷಣಿಕ ವಿವರ ಹಾಗೂ ಇತರೆ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಂತರ, ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ:
- ಅಭ್ಯರ್ಥಿಗಳಿಗೆ ಮೊದಲು ವಿವಿಧ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಕರೆಯಲಾಗುತ್ತದೆ.
- ದಾಖಲಾತಿ ಪರಿಶೀಲನೆ:
- ಲಿಖಿತ ಪರೀಕ್ಷೆಯಲ್ಲಿ ನಿರ್ದಿಷ್ಟ ಅಂಕಗಳಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ.
- ವೈದ್ಯಕೀಯ ಪರೀಕ್ಷೆ:
- ಕೊನೆಯ ಹಂತದಲ್ಲಿ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
| ವಿವರಗಳು | ದಿನಾಂಕ |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 15-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-06-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು :
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ 11,127 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-06-2026 ರೊಳಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- IAF: ಇಂಡಿಯನ್ ಏರ್ ಫೋರ್ಸ್ ನಲ್ಲಿ ಭರ್ಜರಿ ಉದ್ಯೋಗಾವಕಾಶ! SSLC ಹಾಗೂ PUC ಪಾಸ್ ಅಭ್ಯರ್ಥಿಗಳಿಗೆ ಗೋಲ್ಡನ್ ಚಾನ್ಸ್
- SBI: ರೂ. 80,000/- ವೇತನ! ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾಂಕರೆಂಟ್ ಆಡಿಟರ್ ಹುದ್ದೆಗಳ ಬೃಹತ್ ನೇಮಕಾತಿ 2026 | ಜೂನ್ 11 ಕೊನೆಯ ದಿನಾಂಕ
- VS Bank: ₹92,500/- ವೇತನ! ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಬೃಹತ್ ನೇಮಕಾತಿ 2026 | ಇಂದೇ ಅಪ್ಲೈ ಮಾಡಿ
- IRIDO: ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯಲ್ಲಿ 6000+ ಹುದ್ದೆಗಳ ಬೃಹತ್ ನೇಮಕಾತಿ 2026! ಮೇ 31 ಕೊನೆಯ ದಿನಾಂಕ
- IPPB: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನಲ್ಲಿ ಭರ್ಜರಿ ಅವಕಾಶ! COO ಹುದ್ದೆಗೆ ಅರ್ಜಿ ಆಹ್ವಾನ । ಇಂದೇ ಅಪ್ಲೈ ಮಾಡಿ

