ವಿದ್ಯಾರ್ಥಿಗಳೇ, ನೀವೇನಾದರೂ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲಿಲ್ಲವೇ? ಈ ವರ್ಷದ ಸ್ಕಾಲರ್ಷಿಪ್ ನ ಅಡಿಯಲ್ಲಿ ಸಿಗುವ ಸಹಾಯಧನ ನಮ್ಮ ಕೈ ತಪ್ಪಿಹೋಯಿತೆಂದು ಚಿಂತೆ ಮಾಡುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್!
SSP Scholarship in Kannada
ಆಧಾರ್ ಲಿಂಕುಗಳ ವಿಳಂಬ, ಸರ್ವರ್ ಬಿಸಿ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆನಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವ ಮೂಲಕ ಅರ್ಜಿ ಸಲ್ಲಿಸಲು ಇನ್ನೊಂದು ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ನೆರವಿಗೆ ನಿಲ್ಲುವ ಪ್ರಯತ್ನ ಮಾಡಿದೆ.
ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ, ವಿದ್ಯಾರ್ಥಿವೇತನದಡಿಯಲ್ಲಿ ಸಿಗುವ ಸಹಾಯಧನವನ್ನು ಪಡೆದುಕೊಂಡಿದ್ದಾರೆ. ಆದರೆ ಇನ್ನು ಕೆಲವು ವಿದ್ಯಾರ್ಥಿಗಳು ತಾಂತ್ರಿಕ ದೋಷದಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶ!
ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿವೇತನ (SSP Scholarship) ಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಿದ್ದು, ಎಷ್ಟು ದಿನಗಳ ವರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ? ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದೇ? ಅಥವಾ ಕೆಲವು ಇಲಾಖೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಲಭ್ಯವೇ? ಎನ್ನುವ ಕುರಿತು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
ಇದೇ ರೀತಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಸಾಕಷ್ಟು ವಿದ್ಯಾರ್ಥಿವೇತನಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕಕ್ಕೆ ಭೇಟಿ ನೀಡಿ.

ವಿದ್ಯಾರ್ಥಿವೇತನದ ಕಿರು ವಿಮರ್ಶೆ:
| ಶೈಕ್ಷಣಿಕ ವರ್ಷ | 2025-26 ನೇ ಸಾಲಿನ ಶೈಕ್ಷಣಿಕ ವರ್ಷ |
| ಅಧಿಕೃತ ಪೋರ್ಟಲ್ | ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (SSP Scholarship) |
| ವಿದ್ಯಾರ್ಥಿವೇತನದಡಿಯಲ್ಲಿ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು | ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-03-2026 |
| ಅರ್ಜಿ ಸಲ್ಲಿಸಲುವ ವಿಧಾನ | ಆನ್ಲೈನ್ ಮೂಲಕ |
ವಿದ್ಯಾರ್ಥಿವೇತನದ ಕುರಿತು:
ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ SSP ವಿದ್ಯಾರ್ಥಿವೇತನ (SSP Scholarship) ಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದ್ದು, ಪರಿಶಿಷ್ಟ ಪಂಗಡಗಳ (ST) ಕಲ್ಯಾಣ ಇಲಾಖೆಯಡಿಯಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 15-03-2026 ರ ವರೆಗೂ ಅವಕಾಶ ಕಲ್ಪಿಸಿದ್ದು, ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಾಗಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿಯಲ್ಲಿ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಮಾತ್ರ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
SSP ವಿದ್ಯಾರ್ಥಿವೇತನವನ್ನು ನೀಡುವುದರ ಹಿಂದಿನ ಉದ್ದೇಶ:
1. ವಿದ್ಯಾರ್ಥಿಗಳ ಸ್ವಾವಲಂಬನೆಯನ್ನು ಹೆಚ್ಚಿಸುವುದು:
ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿವೇತನದಡಿಯಲ್ಲಿ ಸಹಾಯಧನವನ್ನು ನೀಡುವ ಮೂಲಕ ಪರೀಕ್ಷಾ ಶುಲ್ಕ, ಪ್ರವೇಶ ಶುಲ್ಕ, ಶಿಕ್ಷಣಕ್ಕೆ ಅಗತ್ಯವಾದ ಪುಸ್ತಕಗಳು ಹಾಗೂ ಭೋದನಾ ಶುಲ್ಕದಂತಹ ಶೈಕ್ಷಣಿಕ ವೆಚ್ಚವನ್ನು ತಾವೇ ಭರಿಸಲು ಅವಕಾಶ ಕಲ್ಪಿಸುವ ಮೂಲಕ ಶೈಕ್ಷಣಿಕ ಖರ್ಚಿಗೆ ಪೋಷಕರ ಮೇಲೆ ಅವಲಂಬಿತರಾಗುವುದನ್ನು ತಪ್ಪಿಸಿ ಸ್ವಾವಲಂಬಿಯಾಗಿ ಶಿಕ್ಷಣವನ್ನು ಮುಂದುವರೆಸಲು ಅವಕಾಶ ಕಲ್ಪಿಸುವುದು.
2. ಎಲ್ಲರಿಗೂ ಸಮಾನ ಅವಕಾಶ:
ಕರ್ನಾಟಕದಲ್ಲಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳುಗೂ ಕೂಡ SSP ವಿದ್ಯಾರ್ಥಿವೇತನಕ್ಕೆ ಅವಕಾಶ ಕಲ್ಪಿಸಿ, ಎಲ್ಲಾರಿಗೂ ಸಮಾನ ಶಿಕ್ಷಣವನ್ನು ಪಡೆಯಲು ಅವಕಾಶ ಕಲ್ಪಿಸುವ ಮೂಲಕ ಶೈಕ್ಷಣಿಕ ಅಸಮಾನತೆಯನ್ನು ತಡೆಗಟ್ಟುವುದು.
3. ಉನ್ನತ ಶಿಕ್ಷಣವನ್ನು ಪಡೆಯಲು ಅವಕಾಶ ಕಲ್ಪಿಸುವುದು:
ಕರ್ನಾಟಕ ಸರ್ಕಾರವು ಕೇವಲ ಮೆಟ್ರಿಕ್ ಪೂರ್ವ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ SSP ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶ ಕಲ್ಪಿಸದೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೂ ಕೂಡ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುವಂತೆ ಪ್ರೇರೇಪಿಸಲಾಗಿದೆ.
4. ಶಿಕ್ಷಣಕ್ಕೆ ನೆರವು:
ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದಾರೆ. ಇದನ್ನು ಗಮನಿಸಿದ ಸರ್ಕಾರವು, ಈ ಎಲ್ಲಾ ಸಮಸ್ಯೆಗಳನ್ನು ತಡೆಗಟ್ಟುವ ಉದ್ದೇಶದಿಂದ SSP ವಿದ್ಯಾರ್ಥಿವೇತನದಡಿಯಲ್ಲಿ ಸಹಾಯಧನವನ್ನು ನೀಡಲು ಮುಂದಾಗಿದೆ.
ವಿದ್ಯಾರ್ಥಿಗಳಿಗಾಗುವ ಪ್ರಯೋಜನ:
- ಮಧ್ಯವರ್ತಿಗಳ ಹಾವಳಿಯಿಂದ ತಡೆ:
SSP ವಿದ್ಯಾರ್ಥಿವೇತನದಡಿಯಲ್ಲಿ ಸಹಾಯಧನವನ್ನು ಪಡೆಯಲು ಅರ್ಹರಾದ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮಾ ಆಗುವುದರಿಂದ ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ.
- ಶಿಕ್ಷಣವನ್ನು ಮುಂದುವರೆಸಲು ಅವಕಾಶ:
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಅಗತ್ಯವಾದ ಹಣಕಾಸಿನ ನೆರವನ್ನು ಸರ್ಕಾರವು SSP ವಿದ್ಯಾರ್ಥಿವೇತನ (SSP Scholarship) ದಡಿಯಲ್ಲಿ ಒದಗಿಸುವುದರಿಂದ ಯಾವುದೇ ಹಣಕಾಸಿನ ಸಮಸ್ಯೆ ಇಲ್ಲದೆ, ವಿದ್ಯಾರ್ಥಿಗಳು ಪೂರ್ಣ ಗಮನವನ್ನು ಓದುವ ಕಡೆಗೆ ಕೇಂದ್ರೀಕರಿಸುವ ಮೂಲಕ ತಮ್ಮ ಶೈಕ್ಷಣಿಕ ಗುರಿಯನ್ನು ತಲುಪಬಹುದಾಗಿದೆ.
- ಪೋಷಕರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು:
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಲ್ಲಿ ಜೀವನ ನಡೆಸುವುದೇ ಕಷ್ಟಕರವಾಗುತ್ತಿರುವಾಗ ತಮ್ಮ ಮಕ್ಕಳ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸಿ ತಮ್ಮ ಪೋಷಕರೊಂದಿಗೆ ಕೂಲಿ ಕೆಲಸಕ್ಕೆ ಹೋಗಿತ್ತಿದ್ದರು. ಆದರೆ ಈಗ SSP ವಿದ್ಯಾರ್ಥಿವೇತನದಡಿಯಲ್ಲಿ ಸಿಗುವ ಸಹಾಯಧನದಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಖರ್ಚನ್ನು ನಿಭಾಯಿಸಿಕೊಳ್ಳುವುದರಿಂದ ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಿದೆ.
SSP ವಿದ್ಯಾರ್ಥಿವೇತನದಡಿಯಲ್ಲಿ ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳು:
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿಯಲ್ಲಿ SSP ವಿದ್ಯಾರ್ಥಿವೇತನ (SSP Scholarship) ವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನದ ಹಾಗೂ ಇತರೆ ಸೌಲಭ್ಯಗಳು ಸಿಗುತ್ತದೆ. ಅವುಗಳ ಕುರಿಯು ಸಂಕ್ಷಿಪ್ತ ವಿವರವನ್ನು ಈ ಕೆಳೆಗೆ ನೀಡಲಾಗಿದೆ.
1. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸಿಗುವ ಒಟ್ಟು ಸಹಾಯಧನ:
- ಡೇ ಸ್ಕಾಲರ್ ವಿದ್ಯಾರ್ಥಿಗಳಿಗೆ:
- 1 ನೇ ತರಗತಿಯಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ ₹1,000 ದಿಂದ ₹1,500
- 9 ನೇ ತರಗತಿಯಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ ₹2,250 ದಿಂದ ₹3,000
- ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳಿಗೆ:
- 3 ನೇ ತರಗತಿಯಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ ₹4,500 ದಿಂದ ₹5,000
2. ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸಿಗುವ ಒಟ್ಟು ಸಹಾಯಧನ:
- ಡೇ ಸ್ಕಾಲರ್ ವಿದ್ಯಾರ್ಥಿಗಳಿಗೆ:
- ಪ್ರತಿ ಶೆಕ್ಷಣಿಕ ವರ್ಷಕ್ಕೆ ₹3,000 ದಿಂದ ₹7,000 ದ ವರೆಗೆ SSP ವಿದ್ಯಾರ್ಥಿವೇತನದಡಿಯಲ್ಲಿ ಸಹಾಯಧನವನ್ನು ನೀಡಲಾಗುತ್ತದೆ.
- ಹಾಸ್ಟೆಲ್ ಗಳಲ್ಲಿ ವಾಸಿಸುವ ಅಭ್ಯರ್ಥಿಗಳಿಗೆ:
- ಪ್ರತಿ ಶೈಕ್ಷಣಿಕ ವರ್ಷಕ್ಕೆ ₹6,000 ದಿಂದ ₹13,500 ದ ವರೆಗೆ SSP ವಿದ್ಯಾರ್ಥಿವೇತನದಡಿಯಲ್ಲಿ ಸಹಾಯಧನವನ್ನು ನೀಡಲಾಗುತ್ತದೆ.
3. ಇತರೆ ಸೌಲಭ್ಯಗಳು:
- ಅಲ್ಲದೆ ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ ಹಾಗೂ ಭೋದನಾ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲಾಗುತ್ತದೆ.
- ವಿದ್ಯಾಸಿರಿ ವಿದ್ಯಾರ್ಥಿವೇತನದಡಿಯಲ್ಲಿ ಗ್ರಾಮೀಣ ಭಾಗದ ವಸತಿನಿಲಯದಲ್ಲಿ ವಾಸಿಸದ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ತಿಂಗಳಿಗೆ ₹1,500 ರಂತೆ, ಪ್ರತಿ ಶೈಕ್ಷಣಿಕ ವರ್ಷಕ್ಕೆ ₹15,000 ಸಹಯಧನವನ್ನು ನೀಡಲಾಗುತ್ತದೆ.
SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾದ ವಿದ್ಯಾರ್ಥಿಗಳು ಯಾರು?
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿಯಲ್ಲಿ SSP ವಿದ್ಯಾರ್ಥಿವೇತನ (SSP Scholarship) ಕ್ಕೆ ಅರ್ಜಿ ಸಲ್ಲಿಸಲು ಅರ್ಹರಾದ ವಿದ್ಯಾರ್ಥಿಗಳು ಯಾರು ಎನ್ನುವುದನ್ನು ಈ ಕೆಳಗೆ ನೀಡಲಾಗಿದೆ.
- ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ₹2.50 ಲಕ್ಷ ಮೀರಿರಬಾರದು.
- ವಿದ್ಯಾರ್ಥಿಗಳು ಮಾನ್ಯತೆ ಪಡೆದ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ಮೆಟ್ರಿಕ್ ನಂತರದ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಟ 50% ಅಂಕವನ್ನು ಗಳಿಸಿರಬೇಕು. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ 75% ಹಾಜರಾತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ವಿದ್ಯಾರ್ಥಿಗಳ ಆಧಾರ್ ಸಂಖ್ಯೆ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಹಿಂದಿನ ಶೈಕ್ಷಣಿಕ ವರ್ಷದ ಅಂಕ ಪಟ್ಟಿ
- ಪ್ರಸ್ತುತ ಸಾಲಿನ ಪ್ರವೇಶಾತಿ ಪ್ರಮಾಣಪತ್ರ
- ಫೀಸ್ ರಿಸಿಪ್ಟ್
- SATS ಐಡಿ (ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ)
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿಯಲ್ಲಿ SSP ವಿದ್ಯಾರ್ಥಿವೇತನ (SSP Scholarship) ಕ್ಕೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ನೀಡಿರುವ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
- SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು SSP ಅಧಿಕೃತ ಪೋರ್ಟಲ್ https://ssp.postmatric.karnataka.gov.in/ ಗೆ ಭೇಟಿ ನೀಡಿ.
- ನಂತರ ಕ್ರಿಯೇಟ್ ಅಕೌಂಟ್ ಮೇಲೆ ಕ್ಲಿಕ್ ಮಾಡಿ. ಹೊಸ ಬಳಕೆದಾರರಾಗಿದ್ದರೆ, ಉಸೆರ್ ಐಡಿ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಶಿಕ್ಷಣಿಕ ವಿವರಗಳನ್ನ ಭರ್ತಿ ಮಾಡಿ.
- ಈ ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅಪ್ಲೋಡ್ ಮಾಡಿದ ಎಲ್ಲಾ ದಾಖಲೆಗಳು ಹಾಗೂ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿವೇತನ (SSP Scholarship) ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ನೀಡಲಾದ ಇಲಾಖೆಯಡಿಯಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ.
| ಇಲಾಖೆ | ವಿಸ್ತರಣೆ ಮಾಡಲಾದ ದಿನಾಂಕ |
| ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ | 15-03-2026 |
ಅಂತಿಮ ತೀರ್ಮಾನ:
ಕರ್ನಾಟಕ ಸರ್ಕಾರವು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವ ಮೂಲಕ ಅರ್ಜಿ ಸಲ್ಲಿಸಲು ಇನ್ನೊಂದು ಅವಕಾಶವನ್ನು ಕಲ್ಪಿಸಿದೆ. ತಾಂತ್ರಿಕ ದೋಷಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ವಿದ್ಯಾರ್ಥಿಗಳು ಇಂದೇ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಏಕೆಂದರೆ ಕೊನೆಯ ದಿನಾಂಕದಲ್ಲಿ ಎಲ್ಲಾ ವಿದ್ಯಾರ್ಥಿಗಳು ಒಟ್ಟಿಗೆ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದರಿಂದ ಸರ್ವರ್ ಬ್ಯುಸಿ ಬರುವ ಸಾಧ್ಯತೆಗಳಿರುತ್ತದೆ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು 15-03-2026 ರ ವರೆಗೆ ವಿಸ್ತರಣೆ ಮಾಡಲಾಗಿದೆ?
ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಜೊತೆಗೆ ಉಚಿತ ಊಟ ಮತ್ತು ವಸತಿ ಸೌಲಭ್ಯಗಳು, ಹಾಗೂ ಶುಲ್ಕ ಮರುಪಾವತಿ ಹಾಗೂ ಇನ್ನಿತರ ನಿರ್ವಹಣಾ ಭತ್ಯೆಗಳು ಲಭಿಸುತ್ತದೆ.
ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿಯಲ್ಲಿ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ
ವಿದ್ಯಾರ್ಥಿಗಳು SSP ಅಧಿಕೃತ ಪೋರ್ಟಲ್ https://ssp.postmatric.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

